ಹಾಸನ (ನ. 4): ಹಾಸನದಲ್ಲಿ ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಮೂವರು ಯುವಕರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಸುನಿಲ್ನನ್ನು ಬಂಧಿಸಲು ಹೋಗಿದ್ದಾಗ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಬಂಧಿಸಲು ತೆರಳಿದ್ದ ಸಬ್ ಇನ್ಸ್ಪೆಕ್ಟರ್ಗೆ ಚಾಕುವಿನಿಂದ ಇರಿದ ಆರೋಪಿ ಸುನಿಲ್ ಕುಮಾರ್ ಮೇಲೆ ಫೈರಿಂಗ್ ನಡೆಸಲಾಗಿತ್ತು. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಆರೋಪಿ ಸುನಿಲ್ನನ್ನು ಹಿಡಿಯಲು ಹೋದಾಗ ಏರ್ ಫೈರಿಂಗ್ ಮಾಡಲಾಗಿತ್ತು. ಆದರೂ ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದರಿಂದ ಹಾಸನ ಗ್ರಾಮಾಂತರ ಸಿಪಿಐ ಸುರೇಶ್ ಆರೋಪಿ ಸುನಿಲ್ ಕಾಲಿಗೆ ಗುಂಡು ಹಾರಿಸಿದ್ದರು. ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸುನಿಲ್ ಕಾಲಿಗೆ ಗುಂಡೇಟು ಬಿದ್ದಿದ್ದರಿಂದ ಗಾಯಾಳು ಪಿಎಸ್ಐ ಹಾಗೂ ಗುಂಡೇಟಿನಿಂದ ಗಾಯಗೊಂಡ ರೌಡಿಶೀಟರ್ ಸುನಿಲ್ನನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಎಸ್‌ಪಿ ಶ್ರೀನಿವಾಸ್ ಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು.
ಇದನ್ನೂ ಓದಿ: ಆರ್ಆರ್ ನಗರ ಉಪಚುನಾವಣೆ; ಮತಯಂತ್ರಗಳನ್ನು ಇಟ್ಟಿರುವ ಸ್ಟ್ರಾಂಗ್ ರೂಂಗೆ 3 ಹಂತದ ಭದ್ರತೆ
ಗುಂಡೇಟು ತಿಂದು ಹಾಸನದ ಆಸ್ಪತ್ರೆಗೆ ದಾಖಲಾಗಿದ್ದ ರೌಡಿಶೀಟರ್ ಸುನಿಲ್ನನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ. ಆರೋಪಿ ಸುನೀಲ್ ಕಾಲಿಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ನಿನ್ನೆ ರಾತ್ರಿ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಂಧಿಸಲು ತೆರಳಿದ್ದ ಸಬ್ ಇನ್ಸ್ಪೆಕ್ಟರ್ ಬಸವರಾಜು ಅವರ ಎಡಗೈ ಮತ್ತು ಹೊಟ್ಟೆಯ ಭಾಗಕ್ಕೆ ಚಾಕುವಿನಿಂದ ಇರಿದಿದ್ದ ಆರೋಪಿ ಸುನಿಲ್ ಕಾಲಿಗೆ ಗುಂಡು ಹಾರಿಸಲಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ