• Home
  • »
  • News
  • »
  • state
  • »
  • ಸಾರ್ವಜನಿಕರ ಕಷ್ಟ ಆಲಿಸಲು ಫೋನ್ ಇನ್ ಕಾರ್ಯಕ್ರಮ; ಹಾಸನ ಎಸ್​ಪಿ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ

ಸಾರ್ವಜನಿಕರ ಕಷ್ಟ ಆಲಿಸಲು ಫೋನ್ ಇನ್ ಕಾರ್ಯಕ್ರಮ; ಹಾಸನ ಎಸ್​ಪಿ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಪೊಲೀಸ್ ಇಲಾಖೆಯನ್ನು ಜನಸ್ನೇಹಿ ಇಲಾಖೆಯನ್ನಾಗಿ ಮಾಡುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯನ್ನಿಟ್ಟಿರುವ ಹಾಸನ ಎಸ್ಪಿ ವಿನೂತನ ಫೋನ್ ಇನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

  • Share this:

ಹಾಸನ: ಬಹಳಷ್ಟು ಮಂದಿಗೆ ಪೊಲೀಸ್‌ ಠಾಣೆ ಅಂದರೆ ಅದೇನೋ ಅವ್ಯಕ್ತ ಭಯ. ಪೊಲೀಸ್‌ ಠಾಣೆಗೆ ತೆರಳಿ ತಮಗಾಗುತ್ತಿರುವ ಸಮಸ್ಯೆ ಹೇಳಿಕೊಳ್ಳಲೂ ಭಯಪಡ್ತಾರೆ. ತಮ್ಮ ಕಣ್ಣೆದುರು ನಡೆಯುವ ಅನ್ಯಾಯವನ್ನಾಗಲೀ ಅಥವಾ ತಮಗೆ ನೇರವಾಗಿ ಆಗುವ ಮೋಸಗಳನ್ನಲಾಗಲೀ ಪ್ರತಿರೋಧಿಸುವ ಶಕ್ತಿಯೂ ಇಲ್ಲದೇ, ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡುವ ಧೈರ್ಯವೂ ಇಲ್ಲದೇ ಪರಿತಪಿಸುತ್ತಿರುತ್ತಾರೆ. ಇದೀಗ ಹಾಸನ ಎಸ್‌ಪಿ ಶ್ರೀನಿವಾಸಗೌಡ ಅವರು ಪೊಲೀಸ್‌ ಇಲಾಖೆಯನ್ನು ಜನಸ್ನೇಹಿ ಇಲಾಖೆಯನ್ನಾಗುವ ಮಾಡುವ ನಿಟ್ಟಿನಲ್ಲಿ ಹೊಸ ಹೆಜ್ಜೆಯನ್ನಿಟ್ಟಿದ್ದಾರೆ.


ಪ್ರತಿ ಎರಡು ವಾರಗಳಿಗೊಮ್ಮೆ ಶುಕ್ರವಾರದಂದು ಹಾಸನ ಎಸ್‌ಪಿ ಫೋನ್‌ ಇನ್‌ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದಾರೆ. ಹಾಸನ ಜಿಲ್ಲೆಯ ಯಾರೇ ಆದರೂ ತಮಗಾಗುತ್ತಿರುವ ಅಥವಾ ತಮ್ಮ ಸುತ್ತಮುತ್ತ ನಡೆಯುತ್ತಿರುವ ಅನ್ಯಾಯಗಳನ್ನು ಫೋನ್‌ ಮೂಲಕ ಎಸ್‌ಪಿಯವರಿಗೆ ತಿಳಿಸಬಹುದಾಗಿದೆ. ಸ್ವತಃ ಎಸ್‌ಪಿಯವರೇ ಖುದ್ದು ಫೋನ್‌ ರಿಸೀವ್‌ ಮಾಡಿ ಮಾತನಾಡುವ ಮೂಲಕ ಜನರ ಕಷ್ಟಕ್ಕೆ ಸ್ಪಂದಿಸಲಿದ್ದಾರೆ. ಈ ಕಾರ್ಯಕ್ರಮ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೇ ನಿರಂತರವಾಗಿ ನಡೆಯಲಿದೆ. ಪ್ರತಿ ಎರಡು ವಾರಗಳಿಗೆ ಒಮ್ಮೆ ನಡೆಯುವ ಫೋನ್‌ ಇನ್‌ ಕಾರ್ಯಕ್ರಮದಲ್ಲಿ, ಒಮ್ಮೆ ತಾವು ಹೇಳಿಕೊಂಡ ಸಮಸ್ಯೆ ಬಗೆಹರಿಯದಿದ್ದರೆ ಮತ್ತೆ ಕರೆ ಮಾಡುವ ಮೂಲಕ ಎಸ್‌ಪಿಯವರ ಬಳಿ ತಮ್ಮ ಸಮಸ್ಯೆ ಇನ್ನೂ ಬಗೆಹರಿದಿಲ್ಲ ಎಂಬುದನ್ನು ಸಾರ್ವಜನಿಕರು ನೆನಪಿಸಬಹುದಾಗಿದೆ.


ಇದನ್ನೂ ಓದಿ: ಪಾಕ್​​ ಪರ ಘೋಷಣೆ ಪ್ರಕರಣ: ಅಮೂಲ್ಯ ಲಿಯೋನಾಗೆ ಮತ್ತೆ ಮಾರ್ಚ್​​ 5ರವರೆಗೂ ನ್ಯಾಯಾಂಗ ಬಂಧನ


ಇನ್ನು ಹಾಸನ ಎಸ್‌ಪಿಯವರ ಫೋನ್‌ ಇನ್‌ ಕಾರ್ಯಕ್ರಮದ ಬಗ್ಗೆ ಜನ ಸಾಮಾನ್ಯರು ಕೂಡ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಕೆಲವೊಮ್ಮೆ ನಾವು ಪೊಲೀಸ್‌ ಠಾಣೆಗೆ ಹೋಗಿ ದೂರು ಸಲ್ಲಿಸಿದಾಗ ಅಲ್ಲಿ ನಮಗೆ ಸರಿಯಾದ ಸ್ಪಂದನೆ ಸಿಗದಿರಬಹುದು. ಅಥವಾ ಕೆಲವೊಬ್ಬರು ಪೊಲೀಸ್‌ ಠಾಣೆಗೆ ಹೋಗಿ ದೂರು ನೀಡಲು ಭಯಪಡಬಹುದು. ಇಂತಹ ಸಮಯದಲ್ಲಿ ನಾವೇ ನೇರವಾಗಿ ಎಸ್‌ಪಿಯವರಿಗೆ ದೂರವಾಣಿ ಕರೆ ಮಾಡಿ ದೂರು ನೀಡಬಹುದಾಗಿದೆ. ಆಗ ಎಸ್‌ಪಿಯವರೇ ಖುದ್ದು ನಮ್ಮ ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿ, ಸಂಬಂಧ ಪಟ್ಟ ಪೊಲೀಸ್‌ ಠಾಣೆಗೆ ಸಮಸ್ಯೆ ಬಗೆಹರಿಸಲು ಸೂಚಿಸುತ್ತಾರೆ. ಇದ್ರಿಂದ ಪೊಲೀಸ್‌ ಇಲಾಖೆಯ ಬಗ್ಗೆ ಜನಸಾಮಾನ್ಯರಿಗೆ ಗೌರವ ಹೆಚ್ಚಾಗುತ್ತೆ ಅಂತಿದ್ದಾರೆ ಸಾರ್ವಜನಿಕರು.


ಒಟ್ಟಾರೆ ಹಾಸನ ಎಸ್‌ಪಿಯವರ ಹೊಸ ಫೋನ್‌ ಇನ್‌ ಕಾರ್ಯಕ್ರಮ ಹಾಸನ ಜಿಲ್ಲೆಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಹಾಸನ ಎಸ್‌ಪಿಯವರು ತಾವು ಕೊಟ್ಟ ಭರವಸೆಯಂತೆ ಫೋನ್‌ನಲ್ಲಿ ಜನಸಾಮಾನ್ಯರು ಹೇಳಿದ ಸಮಸ್ಯೆಗಳಿಗೆ ಶೀಘ್ರ ಪರಿಹಾರವನ್ನು ನೀಡಿದ್ದೇ ಆದಲ್ಲಿ, ಪೊಲೀಸ್‌ ಇಲಾಖೆಯ ಬಗ್ಗೆ ಜನಸಾಮಾನ್ಯರಲ್ಲಿ ಗೌರವ ಹೆಚ್ಚಾಗುವುದರಲ್ಲಿ ಅನುಮಾನವಿಲ್ಲ.


ವರದಿ: ಡಿಎಂಜಿ ಹಳ್ಳಿ ಅಶೋಕ್


ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.


Published by:Vijayasarthy SN
First published: