ಹಾಸನ: ಕರ್ನಾಟಕ ವಿಧಾಸಸಭಾ ಚುನಾವಣೆಯಲ್ಲಿ (Karnataka Elections) ಹಾಸನ (Hassan) ವಿಧಾನಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಹಾಸನ ಕ್ಷೇತ್ರಕ್ಕೆ ಯಾರು ಜೆಡಿಎಸ್ (JDS) ಅಭ್ಯರ್ಥಿಯಾಗುತ್ತಾರೆ ಎನ್ನುವ ಕುತೂಹಲ ಮುಂದುವರೆದಿದೆ. ಈ ನಡುವೆ ಇಂದು ಹಾಸನ ಜೆಡಿಎಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿರುವ ಎಚ್.ಪಿ ಸ್ವರೂಪ್ (Swaroop) ಇಂದು ತಮ್ಮ ಹುಟ್ಟುಹಬ್ಬ (Birthday ) ಆಚರಣೆ ಮಾಡಿಕೊಂಡಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಸ್ವರೂಪ್ ಅವರು, ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೆ ಅವರ ಪರ ಕೆಲಸ ಮಾಡುತ್ತೇವೆ. ಆದರೆ ನಾನು ಟಿಕೆಟ್ನ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿದ್ದಾರೆ.
ಹೆಚ್ಡಿಕೆ ಹೇಳಿಕೆಯನ್ನ ಮಾಧ್ಯಮದಲ್ಲಿ ಗಮನಿಸಿದ್ದೇನೆ
ಪ್ರತಿ ವರ್ಷ ನಮ್ಮ ಸ್ನೇಹಿತರು, ಕುಟುಂಬಸ್ಥರು ಖುಷಿಯಿಂದ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದೆವು. ಚುನಾವಣೆ ಹತ್ತಿರ ಇರುವುದರಿಂದ ನೀತಿ ಸಂಹಿತೆ ಜಾರಿಯಾಗಿದೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸ್ನೇಹಿತರು ಬಂದಿಲ್ಲ. ಆದರೂ ಕುಟುಂಬದವರು, ಸ್ನೇಹಿತರು ಒಗ್ಗಟ್ಟಾಗಿ ಕೇಕ್ ಕಟ್ ಮಾಡಿದ್ದಾರೆ. ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದೇನೆ, ಎಲ್ಲರಿಗೂ ಒಳ್ಳೆದಾಗಲಿ ಎಂದು ಪ್ರಾರ್ಥಿಸಿದ್ದೇನೆ.
ಕುಮಾರಸ್ವಾಮಿ ಅವರು ಹೇಳಿರುವುದನ್ನು ನಾನು ಮಾಧ್ಯಮದಲ್ಲಿ ಗಮನಿಸಿದ್ದೇನೆ. ದೇವೇಗೌಡರು, ಕುಮಾರಣ್ಣ, ರೇವಣ್ಣ ಅವರು ಎರಡನೇ ಪಟ್ಟಿಯಲ್ಲಿ ಘೋಷಣೆ ಮಾಡುತ್ತಾರೆ. ಅಂತಿಮವಾಗಿ ಯಾರಿಗೆ ಟಿಕೆಟ್ ಘೋಷಣೆ ಮಾಡಿದರೂ ನಾವೆಲ್ಲ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಹಾಸನದಲ್ಲಿ ಈ ಭಾರಿ ಜೆಡಿಎಸ್ ಗೆಲುವು ಸಾಧಿಸುತ್ತೆ. ನೂರಕ್ಕೆ ನೂರು ಭಾಗ ಜೆಡಿಎಸ್ ಗೆಲ್ಲುವುದರಲ್ಲಿ ಅನುಮಾನವೇ ಇಲ್ಲ. ಎರಡನೇ ಪಟ್ಟಿ ಬಿಡುಗಡೆ ಆಗಬೇಕು, ಇನ್ನೂ ಎರಡನೇ ಪಟ್ಟಿ ಬಿಡುಗಡೆ ಆಗಿಲ್ಲ. ಹಿರಿಯರೆಲ್ಲಾ ಅಂತಿಮವಾಗಿ ಯಾರು ಅಭ್ಯರ್ಥಿ ಅಂಥ ಘೋಷಣೆ ಮಾಡುತ್ತಾರೆ ಅವರಿಗೆ ನಾವೆಲ್ಲ ಕೆಲಸ ಮಾಡುತ್ತೇವೆ. ಸಾಮಾನ್ಯ ಕಾರ್ಯಕರ್ತ ಅಂತ ಯಾರಿಗೆ ಅಂತಿಮವಾಗಿ ತೀರ್ಮಾನ ಮಾಡುತ್ತಾರೆ ನೋಡೋಣಾ. ಇನ್ನೆರಡು ದಿನಗಳಲ್ಲಿ ಬಹುತೇಕ ಎರಡನೇ ಪಟ್ಟಿ ಬಿಡುಗಡೆ ಆಗುತ್ತೆ.
ಖಂಡಿತವಾಗಿಯೂ ನಾನು ಆಕಾಂಕ್ಷಿ ಇದ್ದೀನಿ, ವಿಶ್ವಾಸವಿದೆ. ಪಕ್ಷದ ಕಾರ್ಯಕರ್ತರು, ಸ್ನೇಹಿತರು ಒಗ್ಗಟ್ಟಿನಿಂದ ಕೆಲಸ ಮಾಡಲು ಕಾತುರದಿಂದ ಕಾಯುತ್ತಿದ್ದೇವೆ. ಚುನಾವಣೆ ಅಂದಮೇಲೆ ಎಲ್ಲರನ್ನೂ ಒಗ್ಗೂಡಿಸಿ, ಒಗ್ಗಟ್ಟಿನಿಂದ ಹೋದರೆ ಮಾತ್ರ ಗೆಲುವು ಸಾಧಿಸಲು ಆಗುತ್ತೆ. ಇವತ್ತು ಕೂಡ ಹಾಸನಕ್ಕೆ ನಮ್ಮ ಪಕ್ಷದಿಂದ ಯಾರಿಗೆ ಟಿಕೆಟ್ ಕೊಟ್ಟರು ಗೆಲ್ಲಿಸುವ ಕೆಲಸ ಮಾಡಲು ಎಲ್ಲಾ ಕಾರ್ಯಕರ್ತರು ಕಾಯುತ್ತಿದ್ದಾರೆ ಎಂದರು.
ಯಾರು ಸಂಪರ್ಕ ಮಾಡಿಲ್ಲ
ಯಾರು ನನ್ನ ಜೊತೆ ಚರ್ಚೆ ಮಾಡಿಲ್ಲ, ನಾವು ಪಕ್ಷದ ಪರ ಪ್ರಚಾರ ಮಾಡುತ್ತಿದ್ದೇವೆ. ಮಾಧ್ಯಮದವರು ಪ್ರಚಾರ ಮಾಡುತ್ತಿದ್ದಾರೆ ನಿಮಗೆಲ್ಲಾ ಧನ್ಯವಾದ ಹೇಳುತ್ತೇನೆ. ಈಗ ನಗರದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತಿದ್ದೇವೆ. ಇಲ್ಲಿ ವಿರುದ್ಧ ಪ್ರಶ್ನೆ ಉದ್ಭವವಾಗಲ್ಲ. ರೇವಣ್ಣ ಸಾಹೇಬರು ಯಾರಿಗೆ ಟಿಕೆಟ್ ಘೋಷಣೆ ಮಾಡಿದರೂ ಕೂಡ ನಾವು ಎಲ್ಲರೂ ಗೆಲ್ಲಿಸುವ ಕೆಲಸ ಮಾಡುತ್ತೇನೆ ಎಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ