‘ಹಿಂದೂ ರಾಷ್ಟ್ರ ನಿರ್ಮಾಣ ಅಸಾಧ್ಯ; ಸಿಎಎ ವಿಚಾರದಲ್ಲಿ ಬಿಜೆಪಿ ನಿರ್ಧಾರ ಬದಲಿಸಲಿ‘: ದೇವೇಗೌಡ ಆಗ್ರಹ

ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಯತ್ನಿಸುತ್ತಿದೆ. ನಾವು ಬಿಜೆಪಿ ಹಿಂದೂ ರಾಷ್ಟ್ರ ನಿರ್ಮಾಣ ಉದ್ದೇಶ ಈಡೇರುವುದಕ್ಕೆ ಬಿಡುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾರ ಹಿಂದೂ ರಾಷ್ಟ್ರ ಅಜೆಂಡಾ ಫಲಿಸುವುದಿಲ್ಲ. ಇದು ಪ್ರಜಾಪ್ರಭುತ್ವ ದೇಶ. ಇಲ್ಲಿ ಎಲ್ಲಾ ಧರ್ಮಗಳಿಗೂ ಸಮಾನ ಅವಕಾಶ ಇದೆ ಎಂದು ದೇವೇಗೌಡ ಹೇಳಿದರು.

ಹೆಚ್​.ಡಿ. ದೇವೇಗೌಡ

ಹೆಚ್​.ಡಿ. ದೇವೇಗೌಡ

 • Share this:
  ಬೆಂಗಳೂರು(ಜ.26): ದೇಶಾದ್ಯಂತ ಜಾರಿಗೆ ಮಾಡಲೊರಟ ಪೌರತ್ವ ಕಾಯ್ದೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ತನ್ನ ನಿರ್ಧಾರವನ್ನು ಪುನರ್​​ ಪರಿಶೀಲಿಸಲಿ ಎಂದು ಮಾಜಿ ಪ್ರಧಾನಿ ಎಚ್​​.ಡಿ ದೇವೇಗೌಡ ಆಗ್ರಹಿಸಿದ್ದಾರೆ. ಇಂದು ನಗರದ ಜಾತ್ಯತೀತ ಜನತಾ ದಳ(ಜೆಡಿಎಸ್​​) ಕಚೇರಿ ಜೆಪಿ ಭವನದ ಆವರಣದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದಲ್ಲಿ ಮಾಜಿ ಪ್ರಧಾನಿ ದೇವೇಗೌಡು ಭಾಗಿಯಾಗಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ರಾಷ್ಟ್ರೀಯ ನಾಗರಿಕ ನೋಂದಣಿ(ಎನ್​​ಆರ್​ಸಿ) ಮತ್ತು ಪೌರತ್ವ ಕಾಯ್ದೆ(ಸಿಎಎ) ವಿರುದ್ಧ ಜೆಡಿಎಸ್​​ ಹೋರಾಟ ಮುಂದುವರಿಯಲಿದೆ ಎಂದರು.

  ಇನ್ನು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಕೇರಳ, ಪಂಜಾಬ್ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳು ವಿರೋಧ ವ್ಯಕ್ತಪಡಿಸಿವೆ. ಯಾವುದೇ ಕಾರಣಕ್ಕೂ ತಮ್ಮ ರಾಜ್ಯಗಳಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ ಎಂದು ನಿರ್ಧರಿಸಿವೆ. ನಾವು ಕೂಡ ಮಹಾತ್ಮ ಗಾಂಧೀಜಿಯವರ ಮಾರ್ಗದಲ್ಲಿ ಶಾಂತಿಯುತ ಹೋರಾಟ ಮಾಡಲಿದ್ದೇವೆ ಎಂದು ದೇವೇಗೌಡು ವಿಶ್ವಾಸ ವ್ಯಕ್ತಪಡಿಸಿದರು.

  ಸಿಎಎ, ಎನ್​​ಆರ್​ಸಿ ಮತ್ತು ಎನ್​​ಪಿಆರ್​​ ದೇಶಾದ್ಯಂತ ಹೋರಾಟಗಳು ನಡೆಯುತ್ತಿವೆ. ಯಾವುದೇ ಕಾರಣಕ್ಕೂ ಈ ಕಾಯ್ದೆ ಜಾರಿಗೊಳಿಸಬೇಡಿ ಎಂದು ಪ್ರತಿಭಟನಾಕಾರರು ಒತ್ತಾಯ ಮಾಡುತ್ತಿದ್ದಾರೆ. ಹೀಗಿದ್ದರೂ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಬದಲಿಸಲು ಮುಂದಾಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೆಲವು ನಿರ್ಧಾರಗಳು ದೇಶದ ಹಿತಾಸಕ್ತಿಗೆ ಧಕ್ಕೆಯುಂಟು ಮಾಡುತ್ತಿವೆ ಎಂದು ಕಿಡಕಾರಿದರು.

  ಇದನ್ನೂ ಓದಿ: ದೆಹಲಿ ಪೊಲೀಸ್​ ಠಾಣೆಗೆ ತೆರಳಿದ ಡಿಕೆ ಶಿವಕುಮಾರ್​; ಅಷ್ಟಕ್ಕೂ ಆಗಿದ್ದೇನು?

  ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಯತ್ನಿಸುತ್ತಿದೆ. ನಾವು ಬಿಜೆಪಿ ಹಿಂದೂ ರಾಷ್ಟ್ರ ನಿರ್ಮಾಣ ಉದ್ದೇಶ ಈಡೇರುವುದಕ್ಕೆ ಬಿಡುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾರ ಹಿಂದೂ ರಾಷ್ಟ್ರ ಅಜೆಂಡಾ ಫಲಿಸುವುದಿಲ್ಲ. ಇದು ಪ್ರಜಾಪ್ರಭುತ್ವ ದೇಶ. ಇಲ್ಲಿ ಎಲ್ಲಾ ಧರ್ಮಗಳಿಗೂ ಸಮಾನ ಅವಕಾಶ ಇದೆ ಎಂದು ಹೇಳಿದರು.

  ಇದನ್ನೂ ಓದಿ: ಅರಸೀಕೆರೆಯ ಗ್ರಾಮದಲ್ಲಿ ಬಲವಂತದ ಮತಾಂತರ; ಕಾಳಿ ಸ್ವಾಮಿ ನೇತೃತ್ವದಲ್ಲಿ ಹಿಂದೂ ಧರ್ಮಕ್ಕೆ ಮರಳಿ ಸೇರ್ಪಡೆ

  ಈ ಹಿಂದೆಯೂ ಸಿಎಎ ವಿಚಾರವನ್ನೂ ಪ್ರಸ್ತಾಪಿಸಿದ ದೇವೇಗೌಡರು, ಈ ಕಾಯ್ದೆಯ ಔಚಿತ್ಯವನ್ನು ಪ್ರಶ್ನಿಸಿದ್ದರು. ಭಾರತ ಜಾತ್ಯತೀತ ರಾಷ್ಟ್ರವಾಗಿದೆ. ಅಂಬೇಡ್ಕರ್ ಅವರು ಕಾನೂನು ಬರೆದು ಎಲ್ಲಾ ಧರ್ಮಗಳಿಗೆ ರಕ್ಷಣೆ ಕೊಡಬೇಕು ಎಂದು ಹೇಳಿದ್ದರು. ಆದರೀಗ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ 5 ಧರ್ಮೀಯರನ್ನು ಸೇರಿಸಿ ಮುಸ್ಲಿಮರನ್ನು ಮಾತ್ರ ಹೊರಗಿಟ್ಟಿದೆ. ಬಿಜೆಪಿಯವರು ಈ ಕಾಯ್ದೆಯನ್ನು ರಾಜಕೀಯ ಕಾರಣಕ್ಕೇ ಮಾಡಿರುವುದು. ಜಾತ್ಯತೀತತೆಯ ವಿಚಾರದಲ್ಲಿ ಬಿಜೆಪಿ ಬಗ್ಗೆ ಯಾವುದೇ ನಿರೀಕ್ಷೆ ಇಟ್ಟುಕೊಳ್ಳಬೇಡಿ ಎಂದು ದೇವೇಗೌಡರು ಟೀಕಿಸಿದ್ದರು.
  First published: