ರಾಜ್ಯಸಭಾ ಚುನಾವಣೆ (Rajya Sabha Election) ಹಿನ್ನೆಲೆ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಬೆಂಬಲದ ಕೂಗು ಜೋರಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ (H.D Devegowda) ನಡೆ ಇದೀಗ ರಾಜ್ಯ ಕಾಂಗ್ರೆಸ್ ನಾಯಕರನ್ನು (Congress Leaders) ಇಕ್ಕಟ್ಟಿಗೆ ಸಿಲುಕಿಸಿದೆ. ಸೋನಿಯಾ ಗಾಂಧಿಗೆ ಕರೆ ಮಾಡಿದ ದೇವೇಗೌಡು ರಾಜ್ಯ ಕಾಂಗ್ರೆಸ್ ಬೆಂಬಲ ಕೋರಿದ್ದಾರೆ ಇದಕ್ಕೆ ಸೋನಿಯಾ ಗಾಂಧಿ (Sonia Gandhi) ಅವರು ಸಹ ಪೂರಕವಾಗಿ ಸ್ಪಂದಿಸಿದ್ದಾರೆ. ನಿನ್ನೆಯಷ್ಟೆ ರಾಜ್ಯಸಭಾ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವ್ರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (D.K Shivakumar) ಹಾಗೂ ಬಿ.ಕೆ ಹರಿಪ್ರಸಾದ್ ಅವರನ್ನು ಭೇಟಿ ಮಾಡಿದ್ರು. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಅವಕಾಶ ಕೇಳಿದ್ದೇವೆ. ಆದರೆ, ನಿನ್ನೆ ಕಾಂಗ್ರೆಸ್ ದಿಢೀರಾಗಿ ಮತಗಳಿಲ್ಲದಿದ್ದರೂ 2ನೇ ಅರ್ಜಿ ಹಾಕಿದ್ದಾರೆ ಎಂದರು. ಇತ್ತ ಸೋನಿಯಾ ಗಾಂಧಿ ಜೊತೆ ದೇವೇಗೌಡ್ರು ಸಹ ಮಾತಾಡಿದ್ದಾರೆ. ಇನ್ನು ಕೋಮುವಾದಿ ಪಕ್ಷವನ್ನು ದೂರ ಇಡಲು ಕಾಂಗ್ರೆಸ್ ನಮ್ಮನ್ನು ಬೆಂಬಲಿಸಬೇಕು ಎಂದು ಹೆಚ್ ಡಿ ರೇವಣ್ಣ (H.D Revanna) ಹೇಳಿರೋದು ಅಚ್ಚರಿ ಮೂಡಿಸಿದೆ.
ಜೆಡಿಎಸ್ನಿಂದ ಕುಪೇಂದ್ರ ರೆಡ್ಡಿ ನಾಮಪತ್ರ
ನೀವು ಅಲ್ಪಸಂಖ್ಯಾತ ಅಭ್ಯರ್ಥಿ ಇಳಿಸಿದರೆ, ನಾವು ವೋಟ್ ಹಾಕಲ್ಲ ಎಂದು ಕಾಂಗ್ರೆಸ್ ಹೇಳಿತ್ತು. ಹಾಗಾಗಿ, ನಾವು ಕುಪೇಂದ್ರ ರೆಡ್ಡಿ ಅವರನ್ನ ನಿಲ್ಲಿಸಿದ್ದೇವೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ನಾವು ಅಭ್ಯರ್ಥಿ ಹಾಕುವಾಗ ಸೋನಿಯಾ ಗಾಂಧಿ ಕೇಳಿ ಹಾಕಿದ್ವಿ.
ಕಾಂಗ್ರೆಸ್ ನಮಗೆ ಸಹಕಾರ ನೀಡಲಿ
ದೇವೇಗೌಡರೆ ಸೋನಿಯಾ ಗಾಂಧಿ ಜೊತೆ ಮಾತನಾಡಿದ್ರು. ಆದರೆ, ಏಕಾಏಕಿ ಅವರು ನಿನ್ನೆ ಮತ್ತೊಬ್ಬ ಅಭ್ಯರ್ಥಿಯನ್ನು ಹಾಕಿದ್ದಾರೆ. ಕೋಮುವಾದಿ ಪಕ್ಷ ದೂರ ಇಡಲು ಕಾಂಗ್ರೆಸ್ ನಮಗೆ ಸಹಕಾರ ನೀಡಲಿ. ಈಗಲೂ ನಾವು ಸೋನಿಯಾ, ಖರ್ಗೆ, ಸಿದ್ದರಾಮಯ್ಯ, ಡಿಕೆಶಿ, ವೇಣುಗೋಪಾಲ್‌ರಿಗೆ ಮನವಿ ಮಾಡ್ತೇವೆ. ಜೆಡಿಎಸ್ ಪ್ರಾದೇಶಿಕ ಪಕ್ಷ, ಕಾಂಗ್ರೆಸ್ ಸಹಕಾರ ನೀಡಬೇಕು ಎಂದು ಹೇಳಿದರು.
ಇದನ್ನೂ ಓದಿ: DK Shivakumar ED Case: ಡಿಕೆಶಿ ದೆಹಲಿ ಫ್ಲ್ಯಾಟ್ನಲ್ಲಿ ಸಿಕ್ಕಿರುವ 8.5 ಕೋಟಿ ರೂ, ಇಂದು ವಿಚಾರಣೆ
‘ಕೋಮುವಾದದ ವಿರುದ್ಧ ಇರೋ ರಾಷ್ಟ್ರೀಯ ಪಕ್ಷ’
ನಮ್ಮ ಬಳಿ 32 ಮತಗಳಿವೆ. ಈಗ ಮೊದಲ ಪ್ರಾಶಸ್ತ್ಯ 32ಕ್ಕೆ ಇದೆ. ಎರಡೂ ರಾಷ್ಟ್ರೀಯ ಪಕ್ಷ ಇದೆ. ಒಂದು ಕೋಮುವಾದಿ ಪಕ್ಷ. ಮತ್ತೊಂದು ಕೋಮುವಾದದ ವಿರುದ್ಧ ಇರೋ ರಾಷ್ಟ್ರೀಯ ಪಕ್ಷ. ನಮ್ಮ ಅಭ್ಯರ್ಥಿ ಕುಪೇಂದ್ರ ರೆಡ್ಡಿಯನ್ನ ಕಣಕ್ಕಿಳಿಸಿದ್ದೇವೆ. ನಮ್ಮ ಅಭ್ಯರ್ಥಿ ಬೆಂಬಲಿಸಲು ಸೋನಿಯಾ ಗಾಂಧಿ ಜೊತೆ ಚರ್ಚೆ ಮಾಡಿದ್ದೇವೆ
ಕಾಂಗ್ರೆಸ್ 2ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ
ಕುಪೇಂದ್ರ ರೆಡ್ಡಿ ಕೂಡ ಡಿಕೆಶಿ ಅವರನ್ನು ಭೇಟಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಅವಕಾಶ ಕೇಳಿದ್ದೇವೆ. ಆದರೆ, ನಿನ್ನೆ ಕಾಂಗ್ರೆಸ್ ದಿಢೀರಾಗಿ ಮತಗಳಿಲ್ಲದಿದ್ದರೂ ಎರಡನೇ ಅರ್ಜಿ ಹಾಕಿದ್ದಾರೆ ಎಂದರು. ಶುಕ್ರವಾರವೇ ಸೋನಿಯಾ ಗಾಂಧಿ ಜೊತೆ ದೇವೇಗೌಡರು ಮಾತನಾಡಿದ್ದಾರೆ.
ಕಾಂಗ್ರೆಸ್ ನಮ್ಮನ್ನು ಬೆಂಬಲಿಸಬೇಕು
ಕಾಂಗ್ರೆಸ್ ಅವರಿಗೆ ಮತ ಇಲ್ಲದಿದ್ದರೂ ಅಭ್ಯರ್ಥಿಯನ್ನು ಹಾಕಿದ್ದಾರೆ. ಜೆಡಿಎಸ್ ಮತವೇ ಬೇಡ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸೋನಿಯಾ, ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಅವರಿಗೂ ಮನವಿ ಮಾಡ್ತೀನಿ. ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಿ. ಕೋಮುವಾದದ ಪಕ್ಷವನ್ನು ದೂರ ಇಡಲು ಕಾಂಗ್ರೆಸ್ ನಮ್ಮನ್ನು ಬೆಂಬಲಿಸಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕಾವೇರಿ ತಾಯಿಗೆ ಪೂಜೆ ಸಲ್ಲಿಸುವ ವೇಳೆ ಆಯತಪ್ಪಿದ DK Shivakumar
ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ
ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಹೆಚ್.ಡಿ ರೇವಣ್ಣ, ಎ.ಟಿ ರಾಮಸ್ವಾಮಿ, ಬಂಡೆಪ್ಪ ಕಾಶೆಂಪೂರ್ ಸೇರಿದಂತೆ ಹಲವು ಶಾಸಕರ ಉಪಸ್ಥಿತಿಯಲ್ಲಿ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಬಳಿ ತಮ್ಮ ಉಮೇದುವಾರಿಕೆಯನ್ನ ಕುಪೇಂದ್ರ ರೆಡ್ಡಿ ಸಲ್ಲಿಕೆ ಮಾಡಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ