HD Kumaraswamy: ಮೈತ್ರಿಯ ಭಾಗವಾಗಿದ್ದುಕೊಂಡೇ ಬೆನ್ನಿಗಿರಿದ ನಿಮ್ಮ ಹೀನ ರಾಜಕೀಯ ಯಾರಿಗೆ ಗೊತ್ತಿಲ್ಲ ಹೇಳಿ?: ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ

ಕುಮಾರಸ್ವಾಮಿಯವರ ಟೀಕೆಗಳನ್ನು ನೆಗ್ಲೆಕ್ಟ್ ಮಾಡ್ತೀನಿ ಅನ್ನುತ್ತಲೇ ಕುಮಾರಸ್ವಾಮಿ ಸುತ್ತಲೇ ಯಾಕೆ ಗಿರಕಿ ಹೊಡೆಯುತ್ತೀರಿ ಸಿದ್ದರಾಮಯ್ಯನವರೇ? ನಿಮ್ಮ ರಾಜಕೀಯ ಉಳಿಗಾಲಕ್ಕಾಗಿ ನನ್ನನ್ನು, ದೇವೇಗೌಡರನ್ನು ಟೀಕೆ ಮಾಡುವುದು ನಿಮಗೆ ಅನಿವಾರ್ಯ. ಅದು ತಪ್ಪಿದರೆ ನಿಮಗೆ ಬೇರೆ ವಿಧಿ ಇಲ್ಲ. ಕಾಂಗ್ರೆಸ್‌ನಲ್ಲಿ ನಿಮಗೆ ಮೂರು ಕಾಸಿನ ಬೆಲೆ ಇಲ್ಲ ಎಂದು ಹೇಳಿದರು.

ಹೆಚ್​.ಡಿ. ಕುಮಾರಸ್ವಾಮಿ.

ಹೆಚ್​.ಡಿ. ಕುಮಾರಸ್ವಾಮಿ.

 • Share this:
  ಬೆಂಗಳೂರು: ಎಚ್​.ಡಿ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ (Talk Fight Between HD Kumaraswamy And Siddaramaiah)  ನಡುವಿನ ವಾಗ್ಸಮರ ಮುಂದುವರೆದಿದೆ. ಇಂದು ಮಂಡ್ಯದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಅವರು, ಜೆಡಿಎಸ್ ಮಂಡ್ಯ ಭಾಗದಲ್ಲಿ ದುರ್ಬಲವಾಗಿದೆ ಎಂದು ಆರೋಪ ಮಾಡಿದ್ದರು. ಈ ಆರೋಪಕ್ಕೆ ಎಚ್.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನನ್ನ ಬಗ್ಗೆ, ಜೆಡಿಎಸ್ ಬಗ್ಗೆ, ದೇವೇಗೌಡ ಬಗ್ಗೆ ಟೀಕೆ ಮಾಡುವುದೇ ನಿಮಗೆ ಅನಿವಾರ್ಯವಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ನಾವು ಸೋಲಲು ಮಂಡ್ಯದಲ್ಲಿ ಪಕ್ಷ ದುರ್ಬಲ ಆಗಿದ್ದಕ್ಕೆ ಅಲ್ಲ, ಬದಲಿಗೆ ನಿಮ್ಮ ಕುತಂತ್ರ ರಾಜಕೀಯದಿಂದ ನಾವು ಸೋಲಬೇಕಾಯಿತು ಎಂದು ವಾಗ್ದಾಳಿ ನಡೆಸಿದ್ದಾರೆ.

  ʼಸಿದ್ದಕಲೆʼಯ ನಿಷ್ಣಾತರಿಗೆ ಹೊಸ ಕನಸು ಬಿದ್ದ ಹಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ವ್ಹೀಕ್ ಆಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಗಲು ಕನಸು ಕಾಣುವವರಿಗೆ ನನ್ನ ಅನುಕಂಪವಿದೆ. ಜೆಡಿಎಸ್ ಮತ್ತು ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಮಾತನಾಡುವುದಿಲ್ಲ ಎನ್ನುತ್ತಲೇ ಮತ್ತೆ ಮತ್ತೆ ಅವರು ಅದೇ ಜಪ ಮಾಡುತ್ತಿದ್ದಾರೆ. ನಮ್ಮ ಸೋಲಿನ ಕಾರಣ ಮಂಡ್ಯ ಜನತೆಗೆ ಗೊತ್ತಿದೆ. ನಿಖಿಲ್ 6 ಲಕ್ಷ ಮತ ಗಳಿಸಿದ್ದರು. ರೈತಸಂಘ, ಕಾಂಗ್ರೆಸ್, ಬಿಜೆಪಿ, ಕೆಲ ಮಾಧ್ಯಮಗಳು ಸೇರಿ ʼಮ್ಯಾನೇಜ್ʼ ಮಾಡಿದ ಚುನಾವಣೆ ಅದು. ಕೌರವರು ಮಹಾಭಾರತದಲ್ಲಿ ರಚಿಸಿದ್ದ ಚಕ್ರವ್ಯೂಹದಲ್ಲಿ ಅಭಿಮನ್ಯು ಹೇಗೆ ಸಿಲುಕಿದ್ದನೋ ಹಾಗೇ ಇವರೆಲ್ಲರ ಷಡ್ಯಂತ್ರದ ಚಕ್ರವ್ಯೂಹದಲ್ಲಿ ನಿಖಿಲ್ ಸಿಲುಕಿದ್ದರು ಎಂದು ಮಂಡ್ಯ ಲೋಕಸಭಾ ಚುನಾವಣೆ ಸೋಲಿನ ಬಗ್ಗೆ ಎಚ್​.ಡಿ. ಕುಮಾರಸ್ವಾಮಿ ಅವರು ಹೇಳಿದರು.

  ಸಮ್ಮಿಶ್ರ ಸರಕಾರದ ಮೈತ್ರಿಯ ಭಾಗವಾಗಿದ್ದುಕೊಂಡೇ ಬೆನ್ನಿಗಿರಿದ ನಿಮ್ಮ ಹೀನ ರಾಜಕೀಯ ಯಾರಿಗೆ ಗೊತ್ತಿಲ್ಲ ಹೇಳಿ? ನಿಮ್ಮ ʼಕುತಂತ್ರ ಹೆಜ್ಜೆಗಳುʼ ಎಲ್ಲೆಲ್ಲಿ ಮೂಡಿದವು ಎಂಬುದು ಜನರಿಗೆ ಗೊತ್ತಿಲ್ಲದ ಸಂಗತಿ ಏನಲ್ಲ. ಅಂತಹ ಚಕ್ರವ್ಯೂಹ ರಚಿಸಿರಲಿಲ್ಲ ಎಂದಾದರೆ ʼಬ್ರೂಟಸ್ʼ ಪಾಲಿಟಿಕ್ಸ್ ಮಾಡಿ ನಮ್ಮ ಅಭ್ಯರ್ಥಿಯನ್ನು ಸೋಲಿಸಿದ್ದು ಏಕೆ? ಕಳೆದ ಲೋಕಸಭೆ ಚುನಾವಣೆಯಲ್ಲಿ ನಮಗಾದ ಸೋಲು ಕುತಂತ್ರ ರಾಜಕಾರಣಕ್ಕಾದ ಗೆಲುವು. ಅದನ್ನೇ ಇಟ್ಟುಕೊಂಡು ಜೆಡಿಎಸ್ ದುರ್ಬಲವಾಗಿದೆ ಎಂದು ಹೇಳುವುದು ಮೂರ್ಖತನದ ಪರಮಾವಧಿ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರೆಸಿದರು.

  ಜೆಡಿಎಸ್ ಬಗ್ಗೆ ಮಾತನಾಡಲ್ಲ ಅಂತೀರಿ. ಕುಮಾರಸ್ವಾಮಿ, ದೇವೇಗೌಡರ ಬಗ್ಗೆ ಮಾತನಾಡುವುದನ್ನೇ ಬಿಟ್ಟಿದ್ದೇನೆ ಅನ್ನುತ್ತೀರಿ. ಕುಮಾರಸ್ವಾಮಿ ಕಾಲು ಕೆರೆದುಕೊಂಡು ಬರುತ್ತಾರೆ ಎಂದು ಗೋಳಾಡುತ್ತೀರಿ. ಮತ್ಯಾಕೆ ನಮ್ಮ ಬಗ್ಗೆ ಮಾತು? ಬಿಜೆಪಿಯವರು ನಿಮ್ಮ ಹೇಳಿಕೆಗಳಿಗೆ ಕ್ಯಾರೇ ಅನ್ನುವುದಿಲ್ಲ. ನಮ್ಮ ಬಗ್ಗೆ ಮಾತನಾಡದಿದ್ದರೆ ನಿಮಗೆ ಗತಿಯೇ ಇಲ್ಲ. ಕುಮಾರಸ್ವಾಮಿಯವರ ಟೀಕೆಗಳನ್ನು ನೆಗ್ಲೆಕ್ಟ್ ಮಾಡ್ತೀನಿ ಅನ್ನುತ್ತಲೇ ಕುಮಾರಸ್ವಾಮಿ ಸುತ್ತಲೇ ಯಾಕೆ ಗಿರಕಿ ಹೊಡೆಯುತ್ತೀರಿ ಸಿದ್ದರಾಮಯ್ಯನವರೇ? ನಿಮ್ಮ ರಾಜಕೀಯ ಉಳಿಗಾಲಕ್ಕಾಗಿ ನನ್ನನ್ನು, ದೇವೇಗೌಡರನ್ನು ಟೀಕೆ ಮಾಡುವುದು ನಿಮಗೆ ಅನಿವಾರ್ಯ. ಅದು ತಪ್ಪಿದರೆ ನಿಮಗೆ ಬೇರೆ ವಿಧಿ ಇಲ್ಲ. ಕಾಂಗ್ರೆಸ್‌ನಲ್ಲಿ ನಿಮಗೆ ಮೂರು ಕಾಸಿನ ಬೆಲೆ ಇಲ್ಲ ಎಂದು ಹೇಳಿದರು.

  ಇದನ್ನು ಓದಿ: ST Somashekar: ಬೆಂಗಳೂರು ಸಚಿವ ಸ್ಥಾನ ಜಟಾಪಟಿ; ಆರ್ ಅಶೋಕ್ ಪರ ಸಚಿವ ಸೋಮಶೇಖರ್ ಬ್ಯಾಟಿಂಗ್!

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಬಾರದೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ. ಹಾಗೂ ಗುಂಪುಗೂಡುವುದನ್ನು ಆದಷ್ಟು ನಿಯಂತ್ರಿಸಬೇಕಿದೆ. ಸರ್ಕಾರ ಕಾಲಕಾಲಕ್ಕೆ ಹೊರಡಿಸುತ್ತಿರುವ ಕೊರೋನಾ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕಿದೆ.
  Published by:HR Ramesh
  First published: