HDK v/s Rahul Gandhi: "ಆಪರೇಷನ್‌ ಕಮಲಕ್ಕೆ 'ಕೈ' ಜೋಡಿಸಿದ್ದು ಸೈದಾಂತಿಕ ಬದ್ಧತೆಯಾ?" ರಾಹುಲ್‌ ಗಾಂಧಿ ವಿರುದ್ಧ ಎಚ್‌ಡಿಕೆ ಕಿಡಿಕಿಡಿ

ರಾಹುಲ್ ಗಾಂಧಿಯವರನ್ನು ಟ್ವಿಟರ್‌ನಲ್ಲಿ ತರಾಟೆಗೆ ತೆಗೆದುಕೊಂಡಿರುವ ಎಚ್‌ಡಿಕೆ, “ಪ್ರಾದೇಶಿಕ ಪಕ್ಷಗಳಿಗೆ ಸೈದ್ಧಾಂತಿಕ ಬದ್ಧತೆ ಇಲ್ಲ ಅಂತ ಕಾಂಗ್ರೆಸ್ ಚಿಂತನ ಶಿಬಿರದ ಸಮಾರೋಪ ಸಮಾರಂಭದಲ್ಲಿ ರಾಹುಲ್ ಗಾಂಧಿ ಅವರು ವ್ಯಾಖ್ಯಾನ ಮಾಡಿದ್ದಾರೆ. ಹಾಗಾದರೆ, ಸೈದ್ಧಾಂತಿಕ ಬದ್ಧತೆ ಎಂದರೆ ಏನು? ರಾಹುಲ್‌ಗಾಂಧಿ ಅವರು ಪ್ರಾದೇಶಿಕ ಪಕ್ಷಗಳಿಗೆ ಸ್ವಲ್ಪ ಬಿಡಿಸಿ ಹೇಳಬೇಕು ಅಂತ ಎಚ್‌ಎಚ್‌ಡಿಕೆ ಹೇಳಿದ್ದಾರೆ.

ಎಚ್‌.ಡಿ.ಕುಮಾರಸ್ವಾಮಿ ಮತ್ತು ರಾಹುಲ್ ಗಾಂಧಿ

ಎಚ್‌.ಡಿ.ಕುಮಾರಸ್ವಾಮಿ ಮತ್ತು ರಾಹುಲ್ ಗಾಂಧಿ

  • Share this:
ಬೆಂಗಳೂರು: ಕಾಂಗ್ರೆಸ್ ನಾಯಕ (Congress Leader) ರಾಹುಲ್ ಗಾಂಧಿ (Rahul Gandhi) ಹಾಗೂ ಎಐಸಿಸಿ ನಾಯಕರ (AICC Leaders) ವಿರುದ್ಧ ಮಾಜಿ ಮುಖ್ಯಮಂತ್ರಿ (Ex Cm) ಹಾಗೂ ಜೆಡಿಎಸ್ ನಾಯಕ (JDS Leader) ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಗುಡುಗಿದ್ದಾರೆ. ರಾಜಸ್ಥಾನದ (Rajasthan) ಉದಯಪುರದಲ್ಲಿ (Udayapur) ನಡೆಯುತ್ತಿರುವ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ (Congress Chinthan Shibir) ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ವಿರುದ್ಧ ಕೆಂಡಾಮಂಡಲರಾಗಿರುವ ಎಚ್‌ಡಿಕೆ, ಟ್ವಿಟರ್‌ನಲ್ಲಿ (Twitter) ರಾಹುಲ್ ಗಾಂಧಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಮೈತ್ರಿ ಸರಕಾರ (Alliance Government) ಮಾಡೋಣ ಎಂದು ಮನೆ ಬಾಗಿಲಿಗೆ ಬಂದು, ಸರಕಾರವನ್ನೂ ಮಾಡಿ, ಹಿಂಬಾಗಿಲಿನಿಂದ ಆಪರೇಷನ್‌ ಕಮಲವೆಂಬ (Operation Lotus) ಅನೈತಿಕ ರಾಜಕಾರಣಕ್ಕೆ ʼಕೈʼ ಜೋಡಿಸಿದ್ದು ಸೈದ್ಧಾಂತಿಕ ಬದ್ಧತೆಯಾ?” ಅಂತ ಖಾರವಾಗಿ ಪ್ರಶ್ನಿಸಿದ್ದಾರೆ.

“ಸೈದ್ಧಾಂತಿಕ ಬದ್ಧತೆ ಎಂದರೇನು ಬಿಡಿಸಿ ಹೇಳಿ? “

ರಾಹುಲ್ ಗಾಂಧಿಯವರನ್ನು ಟ್ವಿಟರ್‌ನಲ್ಲಿ ತರಾಟೆಗೆ ತೆಗೆದುಕೊಂಡಿರುವ ಎಚ್‌ಡಿಕೆ, “ಪ್ರಾದೇಶಿಕ ಪಕ್ಷಗಳಿಗೆ ಸೈದ್ಧಾಂತಿಕ ಬದ್ಧತೆ ಇಲ್ಲ ಅಂತ ಕಾಂಗ್ರೆಸ್ ಚಿಂತನ ಶಿಬಿರದ ಸಮಾರೋಪ ಸಮಾರಂಭದಲ್ಲಿ ರಾಹುಲ್ ಗಾಂಧಿ ಅವರು ವ್ಯಾಖ್ಯಾನ ಮಾಡಿದ್ದಾರೆ. ಹಾಗಾದರೆ, ಸೈದ್ಧಾಂತಿಕ ಬದ್ಧತೆ ಎಂದರೆ ಏನು? ರಾಹುಲ್‌ಗಾಂಧಿ ಅವರು ಪ್ರಾದೇಶಿಕ ಪಕ್ಷಗಳಿಗೆ ಸ್ವಲ್ಪ ಬಿಡಿಸಿ ಹೇಳಬೇಕು ಅಂತ ಎಚ್‌ಎಚ್‌ಡಿಕೆ ಹೇಳಿದ್ದಾರೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಸ್ತಾಪ

ಸೈದ್ಧಾಂತಿಕ ಬದ್ಧತೆ ಎಂದರೆ.. ರಾಜೀವ್‌ ಗಾಂಧಿ ಹತ್ಯೆ ಪ್ರಕರಣದ ಹಿನ್ನೆಲೆಯ ನೆಪ ನೀಡಿ, ಡಿಎಂಕೆ-ಎಲ್‌ಟಿಟಿಇ ಸಂಬಂಧವನ್ನು ಮುನ್ನೆಲೆಗೆ ತಂದು ಆ ಪಕ್ಷವನ್ನು ಸಂಪುಟದಿಂದ ಹೊರಗಿಡಬೇಕು ಎಂದ್ಹೇಳಿ ಐ.ಕೆ.ಗುಜ್ರಾಲ್‌ ನೇತೃತ್ವದ ಸಂಯುಕ್ತ ರಂಗ ಸರಕಾರವನ್ನು ಉರುಳಿಸಿದ ಕಾಂಗ್ರೆಸ್‌ ಪಕ್ಷವು ಆಮೇಲೆ ಅದೇ ಪಕ್ಷದ ಹೆಗಲ ಮೇಲೆ ಕೈ ಹಾಕಿದ್ದಾ!? ಅಂತ ಎಚ್‌ಡಿಕೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Priyanka Gandhi: ಕರ್ನಾಟಕದಿಂದ ರಾಜ್ಯಸಭೆ ಪ್ರವೇಶಿಸುತ್ತಾರಾ ಪ್ರಿಯಾಂಕಾ ಗಾಂಧಿ? ಕಾಂಗ್ರೆಸ್ ನಾಯಕಿಗೆ ಡಿಕೆಶಿ ಆಹ್ವಾನ

“ಪ್ರಾದೇಶಿಕ ಪಕ್ಷಗಳನ್ನು ಕಾಂಗ್ರೆಸ್ ಮರೆಯಬಾರದು”

ಯುಪಿಎ 1 & 2 ಸರಕಾರಗಳಲ್ಲಿ ಡಾ.ಮನಮೋಹನ್‌ ಸಿಂಗ್‌ ನೇತೃತ್ವದ ಸಂಪುಟದಲ್ಲಿ ಅದೇ ಡಿಎಂಕೆಯ ಜತೆ 10 ವರ್ಷ ಅಧಿಕಾರದ ಸೋಪಾನ ಹಂಚಿಕೊಂಡಿದ್ದು ಸೈದ್ಧಾಂತಿಕ ಬದ್ಧತೆಯಾ? ಬಿಜೆಪಿ ಸೋಲಿಸುವ ಶಕ್ತಿ ಕಾಂಗ್ರೆಸ್‌ʼಗೆ ಮಾತ್ರ ಇದೆ ಎನ್ನುವ ರಾಹುಲ್‌ ಗಾಂಧಿ ಅವರು, ತಮ್ಮ ಪಕ್ಷ 10 ವರ್ಷ ಅಧಿಕಾರದ ಸುಖ ಅನುಭವಿಸಿದ್ದು ಪ್ರಾದೇಶಿಕ ಪಕ್ಷಗಳ ಶಕ್ತಿ ಮತ್ತು ದಾಕ್ಷಿಣ್ಯದಿಂದ ಎನ್ನುವುದನ್ನು ಮರೆಯಬಾರದು ಎಂದಿದ್ದಾರೆ.“ಆಪರೇಷನ್ ಕಮಲಕ್ಕೆ ಕೈ ಜೋಡಿಸಿದ್ದು ಬದ್ಧತೆಯಾ?”

ಮೈತ್ರಿ ಸರಕಾರ ಮಾಡೋಣ ಎಂದು ಮನೆ ಬಾಗಿಲಿಗೆ ಬಂದು, ಸರಕಾರವನ್ನೂ ಮಾಡಿ ಹಿಂಬಾಗಿಲಿನಿಂದ ಆಪರೇಷನ್‌ ಕಮಲವೆಂಬ ಅನೈತಿಕ ರಾಜಕಾರಣಕ್ಕೆ ʼಕೈʼಜೋಡಿಸಿದ್ದು ಸೈದ್ಧಾಂತಿಕ ಬದ್ಧತೆಯಾ? ಮಿತ್ರಪಕ್ಷಗಳನ್ನೇ ನುಂಗಿಹಾಕುವುದೂ ಸೈದ್ಧಾಂತಿಕ ರಾಜಕಾರಣವಾ?  ಅಂತ ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದಾರೆ.

“ಕರ್ನಾಟಕದಲ್ಲಿ ಕಾಂಗ್ರೆಸ್‌ ಕೊನೆಗಾಲದಲ್ಲಿದೆ”

ಪ್ರಾದೇಶಿಕ ಪಕ್ಷಗಳ ಭೀತಿ ಎದುರಿಸುತ್ತಿರುವ ಫೋಬಿಯಾದಲ್ಲಿರುವ ಕಾಂಗ್ರೆಸ್; ಆಂಧ್ರ, ತೆಲಂಗಾಣ‌, ಒಡಿಶಾ ಸೇರಿದಂತೆ ಯಾವ ರಾಜ್ಯಗಳಲ್ಲಿ ಹೇಳಹೆಸರಿಲ್ಲದಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಕೊನೆಗಾಲದಲ್ಲಿದೆ. ಇದನ್ನು ರಾಹುಲ್‌ಗಾಂಧಿ ಅರ್ಥ ಮಾಡಿಕೊಂಡರೆ ಒಳ್ಳೆಯದು ಅಂತ ಎಚ್‌ಡಿ ಕುಮಾರಸ್ವಾಮಿ ಅವರು ಟ್ವಿಟರ್‌ನಲ್ಲಿ ರಾಹುಲ್ ಗಾಂಧಿ ಅವರ ಕಾಲೆಳೆದಿದ್ದಾರೆ.

ಇದನ್ನೂ ಓದಿ: Operation Kamala: ಹಳೇ ಮೈಸೂರು ಭಾಗದಲ್ಲಿ ಆಪರೇಷನ್ ಕಮಲ; ಕೈ, ತೆನೆ ಪಾಳಯಕ್ಕೆ ಎದುರಾಗಲಿದೆ ಬಿಗ್​ ಶಾಕ್​

 ದಲಿತ ಸಿಎಂ ಕನಸು ಕಾಣೋನು ಹುಚ್ಚ; ಹೀಗ್ಯಾಕಂದ್ರು ಕೇಂದ್ರ ಸಚಿವರು?

ಕರ್ನಾಟಕ ರಾಜಕಾರಣದಲ್ಲಿ ದಲಿತ ಮುಖ್ಯಮಂತ್ರಿ ಆಗುತ್ತಾರೆ ಅಂತ ಕನಸು ಕಾಣೋನು ಹುಚ್ಚ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೇಳಿದ್ದಾರೆ. ಆನೇಕಲ್‍ನ ಸಾಯಿರಾಮ್ ಕಾಲೇಜಿನಲ್ಲಿ ನಡೆದ ಪದವಿ ಪ್ರಧಾನ ಸಮಾರಂಭ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಆಗ್ತಾರೆ ಅಂತ ಕನಸು ಕಾಣೋನು ಹುಚ್ಚ. ದಲಿತ ಸಿಎಂ ಎನ್ನುವ ಚರ್ಚೆ ಕೇವಲ ರಾಜಕೀಯ ತೆವಲು ಅಷ್ಟೇ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈವರೆಗೆ ರಾಜ್ಯ ರಾಜಕಾರಣದಲ್ಲಿ ದಲಿತ ಸಿಎಂ ಯಾಕೆ ಆಗಲ್ಲ ಎಂಬುವುದಕ್ಕೆ ಈ ದೇಶದಲ್ಲಿ ಬಹಳಷ್ಟು ಉದಾಹರಣೆಗಳಿವೆ ಎಂದು ಹೇಳಿದ್ರು.
Published by:Annappa Achari
First published: