HOME » NEWS » State » HD KUMARASWAMY ANGRY OVER BC PATIL IN LOAN WAIVER MATTER KPM RMD

ಸಾಲ ಮನ್ನಾ ಬಗ್ಗೆ ಸುಮ್ಮನೆ ಸುಳ್ಳು ಹೇಳಿಕೊಂಡು ಓಡಾಡಬೇಡಿ; ಬಿಸಿ ಪಾಟೀಲ್ ವಿರುದ್ಧ ಹರಿಹಾಯ್ದ ಎಚ್​ಡಿಕೆ

ಶಾದಿ ಭಾಗ್ಯ ಯೋಜನೆಗೆ ತಿಲಾಂಜಲಿ ಹಾಡಿದ ವಿಚಾರದಲ್ಲಿ ಪ್ರತಿಕ್ರಿಯಿಸಿದ ಎಚ್​ಡಿಕೆ ಬಿಜೆಪಿ ಸರ್ಕಾರ ಶಾದಿ ಭಾಗ್ಯ ಒಂದೇ ಅಲ್ಲ ಇಡೀ ರಾಜ್ಯದ ಅಭಿವೃದ್ಧಿ ಕಾರ್ಯವನ್ನೇ ಸ್ಥಗಿತ ಮಾಡಿದೆ.‌

news18-kannada
Updated:March 8, 2020, 12:40 PM IST
ಸಾಲ ಮನ್ನಾ ಬಗ್ಗೆ ಸುಮ್ಮನೆ ಸುಳ್ಳು ಹೇಳಿಕೊಂಡು ಓಡಾಡಬೇಡಿ; ಬಿಸಿ ಪಾಟೀಲ್ ವಿರುದ್ಧ ಹರಿಹಾಯ್ದ ಎಚ್​ಡಿಕೆ
ಬಿಸಿ ಪಾಟೀಲ್​-ಎಚ್​ಡಿಕೆ
  • Share this:
ಮೈಸೂರು (ಮಾ.8): ದಾಖಲೆ ಸಮಸ್ಯೆಯಿಂದ ಕೆಲ ರೈತರ ಸಾಲ ಮನ್ನಾ ಆಗಿಲ್ಲ ಎಂದು ಕೃಷಿ ಸಚಿವ ಬಿಸಿ ಪಾಟೀಲ್​ ಅಧಿವೇಶನದಲ್ಲಿ ಹೇಳಿದ್ದರು. ಈ ವಿಚಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್​​ಡಿ ಕುಮಾರಸ್ವಾಮಿ ಕಿಡಿಕಾರಿದ್ದು, ಸುಮ್ಮನೆ ಸುಳ್ಳು ಹೇಳಿಕೊಂಡು ಓಡಾಡಬೇಡಿ ಎಂದಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್​ಡಿಕೆ, ಬಿಸಿ ಪಾಟೀಲ್​ ವಿರುದ್ಧ ಹರಿಹಾಯ್ದರು. “ಸಾಲ ಮನ್ನಾದ ಬಗ್ಗೆ ಕೃಷಿ ಸಚಿವರಿಗೆ ಮಾಹಿತಿ ಇಲ್ಲ ಎಂದನಿಸುತ್ತದೆ. ನಾನು ಅಧಿಕಾರದಿಂದ ಇಳಿಯುವಾಗ ಕೇವಲ ಘೋಷಣೆ ಮಾಡಿಲ್ಲ. ಬದಲಿಗೆ ರೈತರ ಸಾಲ ಮನ್ನಾಕ್ಕಾಗಿ 25 ಸಾವಿರ ಕೋಟಿ ಹಣ ಹೊಂದಿಸಿ ಅಧಿಕಾರದಿಂದ ಇಳಿದಿದ್ದೇನೆ. ಈ ಹಣದಲ್ಲಿ 800 ಕೋಟಿ ಹಣವನ್ನು ಸರ್ಕಾರ ಇನ್ನೂ ಬಿಡುಗಡೆ ಮಾಡದೆ ಹಾಗೆಯೇ ಇಟ್ಟುಕೊಂಡಿದ್ದಾರೆ,” ಎಂದು ಕಿಡಿಕಾರಿದರು.

ಕೆಲ ರೈತರ ದಾಖಲೆ ಸರಿಯಿಲ್ಲ, ಹೀಗಾಗಿ ಸಾಲ ಮನ್ನಾ ಆಗಿಲ್ಲ ಎನ್ನುವ ಬಸಿ ಪಾಟೀಲ್​ ಹೇಳಿಕೆಗೆ ಪ್ರತಿಕ್ರಿಯಿಸಿರುವ ಎಚ್​ಡಿಕೆ. “ಸಾಲ ಮನ್ನ ಮಾಡುವಾಗ ನಾವು ರೈತರಿಂದ ಸರಳ ದಾಖಲೆ ಕೇಳಿದ್ದೆವು. ಒಂದೊಮ್ಮೆ ರೈತರ ದಾಖಲೆ ತಪ್ಪಿದ್ದರೆ ಅದನ್ನು ಸರಿಪಡಿಸುವುದು ಇಲಾಖೆಯ ಕೆಲಸ. ಈ ವಿಚಾರದಲ್ಲಿ ಸುಳ್ಳು ಹೇಳಿಕೊಂಡು ಓಡಾಡುವುದು ಬೇಡ,” ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಜಾರಿಗೆ ತಂದಿದ್ದ ಶಾದಿ ಭಾಗ್ಯ ಯೋಜನೆಗೆ ಸಿಎಂ ಬಿಎಸ್​ವೈ ತಿಲಾಂಜಲಿ; ಹೊಸ ಅರ್ಜಿ ಸ್ವೀಕರಿಸದಂತೆ ಆದೇಶ

ಶಾದಿ ಭಾಗ್ಯ ಯೋಜನೆಗೆ ತಿಲಾಂಜಲಿ ಹಾಡಿದ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, “ಬಿಜೆಪಿ ಸರ್ಕಾರ ಶಾದಿ ಭಾಗ್ಯ ಒಂದೇ ಅಲ್ಲ ಇಡೀ ರಾಜ್ಯದ ಅಭಿವೃದ್ಧಿ ಕಾರ್ಯವನ್ನೇ ಸ್ಥಗಿತ ಮಾಡಿದೆ.‌ ಬೆಳಗಾವಿಯಲ್ಲಿ ಬಿಜೆಪಿ ಶಾಸಕರೇ ತಮ್ಮ ಕ್ಷೇತ್ರಕ್ಕೆ ಅನುದಾನ ಬಂದಿಲ್ಲ ಎಂದು ಗಲಾಟೆ ಮಾಡಿದ್ದಾರೆ. ನೆರೆ ಹಾವಳಿಯ ಸಂತ್ರಸ್ತರಿಗೆ ಹಣ ಬಿಡುಗಡೆ ಮಾಡಿ ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದಾಗ್ಯೂ ಅಧಿಕಾರಿಗಳು ಹಣ ಬಿಡುಗಡೆ ಮಾಡಿಲ್ಲ ಎಂದು ಬಿಜೆಪಿ ಶಾಸಕರೇ ಆರೋಪಿಸಿದ್ದಾರೆ. ಇದು ಸದ್ಯದ ಬಿಜೆಪಿ ಸರ್ಕಾರದ ಸ್ಥಿತಿ,” ಎಂದು ವ್ಯಂಗ್ಯವಾಡಿದರು.
First published: March 8, 2020, 12:40 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories