ಕರ್ನಾಟಕ ವಿಧಾನಸಭಾ ಉಪಚುನಾವಣೆ; ಇಂದು ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿರುವ ಎಚ್​.ಡಿ. ಕುಮಾರಸ್ವಾಮಿ

Karnataka Assembly By Election: ಇಂದು ಮಧ್ಯಾಹ್ನ 12.15ಕ್ಕೆ ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ಕೆ. ಕುಮಾರಸ್ವಾಮಿ ಜೊತೆ ಜಂಟಿ ಸುದ್ದಿಗೋಷ್ಠಿ ಕರೆದಿರುವ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ.

news18-kannada
Updated:November 14, 2019, 9:16 AM IST
ಕರ್ನಾಟಕ ವಿಧಾನಸಭಾ ಉಪಚುನಾವಣೆ; ಇಂದು ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿರುವ ಎಚ್​.ಡಿ. ಕುಮಾರಸ್ವಾಮಿ
ಹೆಚ್​.ಡಿ. ಕುಮಾರಸ್ವಾಮಿ
  • Share this:
ಬೆಂಗಳೂರು (ನ.14): ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು 19 ದಿನಗಳು ಮಾತ್ರ ಬಾಕಿ ಇವೆ. ಈಗಾಗಲೇ ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಶುರುವಾಗಿದೆ. ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂಕೋರ್ಟ್​ ತೀರ್ಪಿಗಾಗಿ ಕಾದು ನೋಡಿದ ನಂತರ ಅಭ್ಯರ್ಥಿಗಳ ಘೋಷಣೆ ಮಾಡಲು ಯೋಚಿಸುತ್ತಿದ್ದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್​ ಪಕ್ಷಗಳು ಇದೀಗ ತೀರ್ಪು ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುತ್ತಿವೆ.

ಜೆಡಿಎಸ್​ನಿಂದ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದ್ದು, ಡಿಸೆಂಬರ್ 5ರಂದು ನಡೆಯುವ ಉಪಚುನಾವಣೆಯಲ್ಲಿ 15ರಲ್ಲಿ 14 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜೆಡಿಎಸ್​ ಮುಂದಾಗಿದೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶರತ್ ಬಚ್ಚೇಗೌಡ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಶರತ್ ಬಚ್ಚೇಗೌಡ ಅವರಿಗೆ ಬಾಹ್ಯ ಬೆಂಬಲ ನೀಡುವುದಾಗಿ ಜೆಡಿಎಸ್​ ಘೋಷಿಸಿದೆ. ಈ ಹಿನ್ನೆಲೆಯಲ್ಲಿ 14 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನು ಘೋಷಿಸಲಿದೆ.

ಇಂದು ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟ: 1587 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಇಂದು ಮಧ್ಯಾಹ್ನ 12.15ಕ್ಕೆ ಸುದ್ದಿಗೋಷ್ಠಿ ಕರೆದಿರುವ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ. ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ಕೆ. ಕುಮಾರಸ್ವಾಮಿ ಜೊತೆ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಇಂದು ಜಂಟಿ ಮಾಧ್ಯಮಗೋಷ್ಠಿ ನಡೆಸಲಿದ್ದಾರೆ.

ನಿನ್ನೆ ಸುಪ್ರೀಂಕೋರ್ಟ್​ ತೀರ್ಪಿನ ನಂತರ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ಎಚ್​.ಡಿ. ಕುಮಾರಸ್ವಾಮಿ, ಅನರ್ಹರ ಅರ್ಜಿ ವಿಚಾರದಲ್ಲಿ ಸುಪ್ರೀಂಕೋರ್ಟ್​ ನೀಡಿರುವ ತೀರ್ಪು ಬಹಳ ಬೇಸರ ತರಿಸಿದೆ. ನಾ ಹೊಡೆದಂತೆ ಮಾಡುತ್ತೇನೆ ನೀನು ಅತ್ತಂತೆ ಮಾಡು ಎಂಬಂತಿದೆ ಈ ತೀರ್ಪು. ಪಕ್ಷಾಂತರ ಮಾಡುವುದು ಅಪರಾಧವಲ್ಲ ಎಂದಾದರೆ ಕೇಂದ್ರ ಸರ್ಕಾರ ಪಕ್ಷಾಂತರ ನಿಷೇಧ ಕಾಯ್ದೆ ಹಿಂಪಡೆಯಲಿ ಎಂದು ಆಗ್ರಹಿಸಿದ್ದರು.

(ವರದಿ: ಕೃಷ್ಣ ಜಿ.ವಿ.)

First published:November 14, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ