HOME » NEWS » State » HD KUMARASWAMY APPEALS TO SAVE FARMERS AMID CORONAVIRUS OUTBREAK MAK

ಕೊರೋನಾ ವಿರುದ್ಧದ ಯುದ್ದದ ನಡುವೆಯೂ ಸಂಕಷ್ಟಕ್ಕೀಡಾಗಿರುವ ನಮ್ಮ ರೈತರನ್ನು ರಕ್ಷಿಸಿಕೊಳ್ಳೋಣ; ಹೆಚ್.ಡಿ. ಕುಮಾರಸ್ವಾಮಿ ಕರೆ

ಕೊರೊನಾ ವೈರಸ್ ರೋಗ ತಡೆಗೆ ಗ್ರಾಮಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಸ್ವಯಂಸೇವಕರು, ಸಂಘಸಂಸ್ಥೆಗಳು, ಅಧಿಕಾರಿಗಳ ಸಮಿತಿ ರಚನೆಯಾಗಬೇಕು ಇದೇ ರೀತಿ ಹಾಪ್ ಕಾಮ್ಸ್, ಕೆಎಂಎಫ್ ಸೇರಿದಂತೆ ಸ್ವಯಂ ಸೇವಕರ ಗುಂಪುಗಳನ್ನು ಬಳಸಿಕೊಂಡು ರೈತರಿಂದ ಉತ್ಪನ್ನಗಳನ್ನು ಸರ್ಕಾರವೇ ಮುಂದೆ ನಿಂತು ಖರೀದಿಸಲಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

news18-kannada
Updated:March 30, 2020, 2:50 PM IST
ಕೊರೋನಾ ವಿರುದ್ಧದ ಯುದ್ದದ ನಡುವೆಯೂ ಸಂಕಷ್ಟಕ್ಕೀಡಾಗಿರುವ ನಮ್ಮ ರೈತರನ್ನು ರಕ್ಷಿಸಿಕೊಳ್ಳೋಣ; ಹೆಚ್.ಡಿ. ಕುಮಾರಸ್ವಾಮಿ ಕರೆ
ಹೆಚ್​.ಡಿ. ಕುಮಾರಸ್ವಾಮಿ.
  • Share this:
ಬೆಂಗಳೂರು (ಮಾರ್ಚ್ 30); ಕೊರೊನಾ ವೈರಸ್ ನಮ್ಮ ಮುಂದಿರುವ ಅಗೋಚರ ಯುದ್ಧ. ಇದರ ವಿರುದ್ಧ ಹೋರಾಡುವುದು ಇಂದಿನ ತುರ್ತು. ಆದರೆ ಯುದ್ಧ ನಡೆಯುವಾಗ ನಮ್ಮವರನ್ನು ರಕ್ಷಣೆ ಮಾಡಿಕೊಳ್ಳಬೇಕಿರುವುದೂ ನಮ್ಮ ಕರ್ತವ್ಯ. ಈ ಯುದ್ಧದ ನಡುವೆಯೂ ರೈತರನ್ನು ರಕ್ಷಿಸೋಣ. ಸಾರ್ವಜನಿಕರಿಗೆ ಅಗತ್ಯಗಳನ್ನು ಪೂರೈಸೋಣ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಜನರಿಗೆ ಕರೆ ನೀಡಿದ್ದಾರೆ.

ಲಾಕ್‌ಡೌನ್‌ನಿಂದಾಗಿ ರೈತರು ಎದುರಿಸುತ್ತಿರುವ ಸಮಸ್ಯೆ ಕುರಿತಾಗಿ ಇಂದು ಸರಣಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿರುವ ಅವರು, " “ಲಾಕ್‌ಡೌನ್‌ನಿಂದಾಗಿ ಸರಿಯಾದ ಬೆಲೆ ಸಿಗದ ಹಾಗೂ ಬೇಡಿಕೆ ಕುಸಿದಿರುವ ಕಾರಣ ಮಂಡ್ಯದಲ್ಲಿ ರೈತರು ಸಪೋಟಾ ಹಣ್ಣನ್ನು ರಸ್ತೆಗೆ ಸುರಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ದ್ರಾಕ್ಷಿಯನ್ನು ತಿಪ್ಪೆಗೆ ಹಾಕಲಾಗಿದೆ. ಶಿವಮೊಗ್ಗದಲ್ಲಿ ಹೈನುಗಾರರಿಂದ ಹಾಲು ನಿಲ್ಲಿಸಲಾಗಿದೆ. ಕೋಲಾರದಲ್ಲಿ ಟೊಮೆಟೊ ಹಣ್ಣನ್ನು ನಾಶ ಮಾಡಿದ ಘಟನೆಗಳು ರೈತರು ಎದುರಿಸುತ್ತಿರುವ ದುಸ್ಥಿತಿಯನ್ನು ವಿವರಿಸುತ್ತಿದೆ.


ಇನ್ನು ಕೆಲವೇ ದಿನಗಳಲ್ಲಿ ಇದು ವಿಕೋಪಗೊಳ್ಳುವ ಆತಂಕ ನನ್ನನ್ನು ಕಾಡುತ್ತಿದೆ. ಹೀಗಾಗಿ ಸರ್ಕಾರ ರೈತರ ಉತ್ಪನ್ನಗಳ ಖರೀದಿಗೆ ಶೀಘ್ರವೇ ವ್ಯವಸ್ಥೆ ಮಾಡುವ ಅನಿವಾರ್ಯತೆ ಎದುರಾಗಿದೆ. ಇಲ್ಲದೇ ಹೋದರೆ ಕೃಷಿ ವಲಯ ತೊಂದರೆಗೀಡಾಗುತ್ತದೆ. ಇದರ ಪರಿಣಾಮಗಳು ಭೀಕರವಾಗಿರಲಿದೆ. ಇದು ರೈತ ಕುಟುಂಬಗಳನ್ನು ಆಪೋಷನ ತೆಗೆದುಕೊಳ್ಳುವ ಜೊತೆಗೆ, ಆರ್ಥಿಕತೆಗೂ ತೀವ್ರ ಪೆಟ್ಟು ನೀಡುತ್ತದೆ. ಅದನ್ನು ನೆನೆದು ನನಗಂತೂ ಆತಂಕವಾಗಿದೆ.

ಕೊರೊನಾ ವೈರಸ್ ರೋಗ ತಡೆಗೆ ಗ್ರಾಮಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಸ್ವಯಂಸೇವಕರು, ಸಂಘಸಂಸ್ಥೆಗಳು, ಅಧಿಕಾರಿಗಳ ಸಮಿತಿ ರಚನೆಯಾಗಬೇಕು ಇದೇ ರೀತಿ ಹಾಪ್ ಕಾಮ್ಸ್, ಕೆಎಂಎಫ್ ಸೇರಿದಂತೆ ಸ್ವಯಂ ಸೇವಕರ ಗುಂಪುಗಳನ್ನು ಬಳಸಿಕೊಂಡು ರೈತರಿಂದ ಉತ್ಪನ್ನಗಳನ್ನು ಸರ್ಕಾರವೇ ಮುಂದೆ ನಿಂತು ಖರೀದಿಸಲಿ, ನಂತರ ಮಾರಾಟ ಮಾಡಲಿ. ರೈತರಿಂದ ನೇರವಾಗಿ ಖರೀದಿಸಿದ ಉತ್ಪನ್ನಗಳನ್ನು, ನಗರ ವಾರ್ಡ್ ಮಟ್ಟದಲ್ಲಿ ವಿತರಣೆ ಮಾಡಲು ವ್ಯವಸ್ಥೆ ಮಾಡಬೇಕು.ಮಾಲ್ ಗಳನ್ನೂ ಮೀರಿ ಸಾರ್ವಜನಿಕ ಅಗತ್ಯಗಳನ್ನು ಪೂರೈಸುತ್ತಿರುವುದು ಸಣ್ಣ ಪುಟ್ಟ ಅಂಗಡಿಗಳು. ರೈತರ ಉತ್ಪನ್ನಗಳನ್ನು ನೇರವಾಗಿ ಇಂತಹ ಅಂಗಡಿಗಳಿಗೆ ತಲುಪಿಸಲು ವ್ಯವಸ್ಥೆಯೊಂದನ್ನು ಸರ್ಕಾರ ಕೂಡಲೇ ಸೃಷ್ಟಿ ಮಾಡಬೇಕು. ಹಲವು ರೈತರು, ಕೃಷಿ ಉತ್ಪನ್ನ ಮಾರಾಟಗಾರರು ಈಗಾಗಲೆ ತಮ್ಮ ಪರಿಧಿಯಲ್ಲೇ ಸಾಗಾಟ, ವ್ಯಾಪಾರಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದಾರೆ.ಆದರೆ, ಉತ್ಪನ್ನ ಸಾಗಿಸುವಾಗ ತಡೆಯುವ, ಅವರಿಂದ ದುಡ್ಡು ಕೇಳುತ್ತಿರುವ ಕುರಿತು ನನಗೆ ಮಾಹಿತಿ ಇದೆ. ಇದನ್ನು ಸರ್ಕಾರ ಸರಿ ಮಾಡುವ ಕಡೆಗೆ ಗಮನವಹಿಸಬೇಕು. ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಸರ್ಕಾರ ನಿರ್ಬಂಧ ಹೇರಬಾರದು. ಇದು ರೈತರ ಬದುಕಿನ, ಜನರ ಆಹಾರದ ಪ್ರಶ್ನೆ" ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಇದನ್ನೂ ಓದಿ : ಲಾಕ್‌ಡೌನ್ ನೆಪದಲ್ಲಿ ಹಲ್ಲೆ ಮಾಡ್ತಿದಾರಾ ಪೊಲೀಸರು?; ಕೊರೋನಾಗಿಂತ ಅಪಾಯಕಾರಿಯಾಯ್ತು ಇವರ ಲಾಠಿ
First published: March 30, 2020, 2:50 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories