HD Kumaraswamy: ಶಾಖೆ ಸೇರಿಕೊಂಡರೆ ಇನ್ನೆಷ್ಟು ಸತ್ಯ ಸಂಗತಿಗಳು ಗೊತ್ತಾಗಬಹುದು, ನೀವೇ ಒಮ್ಮೆ ಊಹಿಸಿ; ಸಿಟಿ ರವಿಗೆ ಎಚ್​ಡಿಕೆ ತಿರುಗೇಟು!

ಬಿಜೆಪಿಯವರು RSSನ‌ ಕೇಂದ್ರ ಬಿಂದುವಾಗಿ ಇಟ್ಟುಕೊಂಡು ಕೆಲಸ ಮಾಡ್ತಾ ಇದ್ದಾರೆ. ಮೋದಿಯವರು ಕೂಡ RSSನ ಕೀಲುಗೊಂಬೆಯಾಗಿ ಕೆಲಸ ಮಾಡ್ತಾ ಇದ್ದಾರೆ. ಆಡಳಿತವನ್ನು RSS ಮಾಡ್ತಾ ಇದೆ ಬಿಜೆಪಿಯಲ್ಲ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದರು.

ಹೆಚ್​.ಡಿ. ಕುಮಾರಸ್ವಾಮಿ.

ಹೆಚ್​.ಡಿ. ಕುಮಾರಸ್ವಾಮಿ.

  • Share this:
    ಬೆಂಗಳೂರು: ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರು ನೆನ್ನೆ ಆರ್​ಎಸ್​ಎಸ್​ (RSS) ಸಂಘಟನೆಯ ಹಿಡನ್ ಅಜೆಂಡಾ ಬಗ್ಗೆ ಮಾತನಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸಿಟಿ ರವಿ (CT Ravi) ಅವರು ಕುಮಾರಸ್ವಾಮಿ (HD Kumaraswamy) ಅವರು ಕೇವಲ ಪುಸ್ತಕ ಓದಿದದರೆ ಸಾಲದು, ಒಮ್ಮೆ ಆರ್​ಎಸ್​ಎಸ್​ ಕಚೇರಿಗೆ ಭೇಟಿ ನೀಡಲಿ ಎಂದು ಸವಾಲು ಹಾಕಿದ್ದರು. ಇದಕ್ಕೆ ಇಂದು ಎಚ್​ಡಿಕೆ ಅವರು ಸಿಟಿ ರವಿಗೆ ತಿರುಗೇಟು ನೀಡಿದ್ದಾರೆ. CTRavi ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. RSS ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು ನನಗೆ ಆಹ್ವಾನ ಕೊಟ್ಟಿದ್ದೀರಿ. ನಿಮ್ಮ ಸಂಘದೊಳಗಿನ ವಾಸ್ತಾವಾಂಶಗಳನ್ನು ಪ್ರತ್ಯಕ್ಷವಾಗಿ ನೋಡಿದವರೇ ಬರೆದ ಪುಸ್ತಕ ಓದಿ ನನಗೆ ಅಲ್ಲಿನ ವ್ಯವಹಾರಗಳ ವಿರಾಟ್ ದರ್ಶನ ಆಗಿದೆ. ಇನ್ನು ಶಾಖೆಯನ್ನೇ ಸೇರಿಕೊಂಡರೆ ಇನ್ನೆಷ್ಟು ಸತ್ಯ ಸಂಗತಿಗಳು ಗೊತ್ತಾಗಬಹುದು. ನೀವೇ ಒಮ್ಮೆ ಊಹಿಸಿ ಎಂದು ಟಾಂಗ್ ನೀಡಿದ್ದಾರೆ.

    ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ್ದೀರಿ. ನಿಮ್ಮ ಪಕ್ಷ ಮತ್ತು ನಿಮ್ಮ ಸರಕಾರದಲ್ಲಿ ತಾಂಡವವಾಡುತ್ತಿರುವ ಅಪರಿಮಿತ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತದ ಬಗ್ಗೆಯೂ ನೀವು ಹೇಳಬೇಕು. ಅದಕ್ಕೂ RSS ಶಾಖೆಯಲ್ಲೇ ತರಬೇತಿ ನೀಡಲಾಯಿತಾ? ಎಂದು ಟ್ವೀಟ್ ಮಾಡುವ ಮೂಲಕ ಪ್ರಶ್ನೆ ಮಾಡಿದ್ದಾರೆ.

    ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂಥ ʼಆಪರೇಷನ್ ಕಮಲʼದಂಥ ʼಅನೈತಿಕʼ, ʼನಿರ್ಲಜ್ಜʼ, ʼನೀಚʼ ರಾಜಕಾರಣವನ್ನು RSS ಶಾಖೆಯಲ್ಲೇ ಕಲಿಸಲಾಯಿತಾ ಎಂಬುದನ್ನೂ ನೀವು ಜನರಿಗೆ ಹೇಳಬೇಕು ಸಿ.ಟಿ.ರವಿಯವರೇ?. ಜನರು ಕಣ್ಣೀರಿನಲ್ಲಿ ಕೈ ತೊಳೆಯುತ್ತಿದಾರೆ. ಇವತ್ತಿನ ಪ್ರಜಾವಾಣಿ ಪತ್ರಿಕೆ ಓದಿ. ಅದರಲ್ಲಿ “ಬದುಕು ಸಾಕೆನಿದೆ-ಭಗವಂತನಿಗೂ ಕರುಣೆ ಇಲ್ಲ” ಎನ್ನುವ ವರದಿ ಇದೆ. ಬೆಂಗಳೂರಿನ ಶ್ರೀನಿವಾಸನಗರದ ಬಿ.ಆರ್.ವಾಸುದೇವ ಎಂಬ ಬೀದಿ ಬದಿ ವ್ಯಾಪಾರಿ ಹೇಳಿರುವ ಮಾತುಗಳನ್ನು ಒಮ್ಮೆ ಓದಿ. ಆಗಲಾದರೂ ನಿಮ್ಮ ಕಲ್ಲು ಹೃದಯ ಕರಗಬಹುದು ಎಂದು ಸಿಟಿ ರವಿಗೆ ತಿರುಗೇಟು ನೀಡಿದ್ದಾರೆ.



    ಶಿವಮೊಗ್ಗದಲ್ಲಿ 2,000 ರೂ. ಪರಿಹಾರ ಪಡೆಯಲು 100 ರೂ. ಲಂಚ ಕೇಳಿದ ವರದಿಗಳು ಬಂದಿವೆ. ಇದಾ ನಿಮ್ಮ ಸಮಾಜ ಸೇವೆ? ಛಿದ್ರವಾದ ಬದುಕುಗಳನ್ನೊಮ್ಮೆ ನೋಡಿ. ಜನರ ಬವಣೆಗಳ ಬಗ್ಗೆ RSS ಶಾಖೆಗಳಲ್ಲಿ ನಿಮಗೆಲ್ಲರಿಗೂ ಏನನ್ನೂ ಹೇಳಿಕೊಡುವುದಿಲ್ಲವಾ ಸಿ.ಟಿ.ರವಿಯವರೇ?. ಸೇವೆಯ ಸೋಗಿನಲ್ಲಿ ಸಂಸ್ಥೆಗಳು ರಾಜಕೀಯ ಮಾಡಬಾರದು. ಜನರ ಬವಣೆಗಳ ನಿವಾರಣೆ ನಿಟ್ಟಿನಲ್ಲಿ ದುಡಿಯಬೇಕೆ ಹೊರತು ಬದುಕಿಗೇ ಬೆಂಕಿ ಇಡಬಾರದು. ಸಮಾಜದ ಶಾಂತಿಯನ್ನು ಕಾಪಾಡಬೇಕೇ ಹೊರತು, ಅದಕ್ಕೆ ಕೊಳ್ಳಿ ಇಡಬಾರದು. RSS ಹುಟ್ಟಿದಾಗಿನಿಂದಲೂ ಏನೆಲ್ಲ ಮಾಡಿಕೊಂಡು ಬಂದಿದೆ ಎನ್ನುವುದು ಜಗತ್ತಿಗೇ ಗೊತ್ತಿರುವ ಸಂಗತಿ. ಜನ ಪ್ರತಿನಿಧಿಗಳನ್ನು, ಸರಕಾರಗಳನ್ನು, ಆಡಳಿತ ಯಂತ್ರಾಂಗವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವ ಪರಿಪಾಠ ದೇಶಕ್ಕೆ ಒಳ್ಳೆಯದಲ್ಲ. ಅರ್ಥ ಮಾಡಿಕೊಳ್ಳಿ ಸಿ.ಟಿರವಿಯರೇ. ನಾನು ಸತ್ಯದ ಪರ ಎಂದು ಚಾಟಿ ಬೀಸಿದ್ದಾರೆ.

    ಇದನ್ನು ಓದಿ: ನಾವು ಕೂಡ ಹಿಂದುಗಳೇ, ಆದರೆ ಹಿಂದುತ್ವ ಮೊದಲ ಅಜೆಂಡಾ ಅಲ್ಲ: RSSಗೆ ತಿರುಗೇಟು ನೀಡಿದ HDK

    ಆರ್​ಎಸ್​ಎಸ್​, ಬಿಜೆಪಿ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು?

    ಬಿಜೆಪಿಯವರು RSSನ‌ ಕೇಂದ್ರ ಬಿಂದುವಾಗಿ ಇಟ್ಟುಕೊಂಡು ಕೆಲಸ ಮಾಡ್ತಾ ಇದ್ದಾರೆ. ಮೋದಿಯವರು ಕೂಡ RSSನ ಕೀಲುಗೊಂಬೆಯಾಗಿ ಕೆಲಸ ಮಾಡ್ತಾ ಇದ್ದಾರೆ. ಆಡಳಿತವನ್ನು RSS ಮಾಡ್ತಾ ಇದೆ ಬಿಜೆಪಿಯಲ್ಲ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದರು. ಈ ದೇಶದಲ್ಲಿ ನಮ್ಮ ಬಗ್ಗೆ ಅಪಪ್ರಚಾರ ಮಾಡ್ತಾ ಇದ್ದಾರೆ. RSSಗೆ ಸಂಬಂಧ ಪಟ್ಟ ಪುಸ್ತಕ ಓದುತ್ತಿದ್ದೇನೆ. 1990ರಲ್ಲಿ ಬೆಳವಣಿಗೆ ಪ್ರಾರಂಭವಾಯ್ತು, ಅಡ್ವಾಣಿ ಬಿಜೆಪಿ ಪಕ್ಷ ಕಟ್ಟುವ ಸಮಯ ಅದು. ಜಿನ್ನಾ ಅವರ ಬಗ್ಗೆ ಮಾತನಾಡಿದ್ದರಂತೆ, ಆಗ ಅಡ್ವಾನಿ ಅವರಿಗೆ ಒಂದು ಮೆಸೇಜ್ ಹೋಗುತ್ತೆ. ಅಲ್ಲಿಂದ ಬಂದ ನಂತರ ನೀವು RSS ಕಚೇರಿಗೆ ಬನ್ನಿ ಅಂತ. ಹೀಗೆ ಆ ಬಗ್ಗೆ ಓದ್ತಾ ಇದ್ರೆ ಅವರ ಹಿಡನ್ ಅಜೆಂಡಾ ಗೊತ್ತಾಗುತ್ತಿದೆ ಎಂದು ಹೇಳಿದ್ದರು.
    Published by:HR Ramesh
    First published: