HD Kumaraswamy: ಸುಳ್ಳಿನ ಶೂರ ಸಿದ್ದರಾಮಯ್ಯನವರೇ, ಇನ್ನಾದರೂ ನಿಮ್ಮ ಸುಳ್ಳಿನ ʼಸಿದ್ದಕಲೆʼಗೆ ಕೊನೆ ಹಾಡಿ; ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸದನದಲ್ಲಿ ಈ ವಿಷಯವನ್ನು ನಾನು ಪ್ರಸ್ತಾಪ ಮಾಡಿದಾಗ 5 ಕೆಜಿಗೆ ಹಣ ಮೀಸಲಿಟ್ಟು 'ಅಕ್ಕಿಗಾಗಿ ಮಿಡಿದ ನಿಮ್ಮ ಆತ್ಮಸಾಕ್ಷಿ' ಎಲ್ಲಿ ಹೋಗಿತ್ತು? ಸುಳ್ಳಿನ ಶೂರ ಸಿದ್ದರಾಮಯ್ಯನವರೇ, ಇನ್ನಾದರೂ ನಿಮ್ಮ ಸುಳ್ಳಿನ ʼಸಿದ್ದಕಲೆʼಗೆ ಕೊನೆ ಹಾಡಿ ಎಂದು ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರಿಗೆ ಟ್ವಿಟ್ ಮೂಲಕ ಹೇಳಿದ್ದಾರೆ.

ಸಿದ್ದರಾಮಯ್ಯ - ಎಚ್​ಡಿಕೆ

ಸಿದ್ದರಾಮಯ್ಯ - ಎಚ್​ಡಿಕೆ

  • Share this:
ಬೆಂಗಳೂರು: ʼಅಕ್ಕಿಭಾಗ್ಯದ ಅಸಲಿಯೆತ್ತುʼ ಏನು ಎಂಬುದನ್ನು ಈಗಾಗಲೇ ಸದನದಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದೇನೆ. ಅದಾದ ಮೇಲೂ ನಿಮ್ಮ ʼಸುಳ್ಳಿನ ಜಪʼ ಮುಂದುವರಿದಿದೆ. ಸತ್ಯ ಹೇಳಲು ಹಿಂಜರಿಕೆ- ಅಧೈರ್ಯ ಏಕೆ? ಸುಳ್ಳಿನ ಮೇಲಿರುವಷ್ಟು ನಿಷ್ಠೆ ಸತ್ಯದ ಮೇಲೆ ಯಾಕಿಲ್ಲ? ಐದು ಕೆಜಿ ಅಕ್ಕಿ ಅಸಲಿಯೆತ್ತಿನ ಬಗ್ಗೆ ಹೇಳಲು ಅಂಜಿಕೆ ಏಕೆ ಸಿದ್ದರಾಮಯ್ಯನವರೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನೇರವಾಗಿ ಪ್ರಶ್ನೆ ಮಾಡಿದ್ದಾರೆ.

ಟ್ವಿಟರ್ ಮೂಲಕ ವಾಗ್ದಾಳಿ ಮುಂದುವರೆಸಿರುವ ಎಚ್.ಡಿ. ಕುಮಾರಸ್ವಾಮಿ ಅವರು, ಸಮ್ಮಿಶ್ರ ಸರಕಾರದಲ್ಲಿ ನಾನು ಮುಖ್ಯಮಂತ್ರಿ ಆಗಿದ್ದೆ. ಅದಕ್ಕು ಮುನ್ನ ಬಜೆಟ್ ಮಂಡಿಸಿ ಚುನಾವಣೆಗೆ ಹೋದ ತಾವು ಎಷ್ಟು ಕೆಜಿ ಅಕ್ಕಿಗೆ ಹಣ ಇಟ್ಟಿದ್ದಿರಿ? 5 ಕೆಜಿಗೋ ಅಥವಾ 7 ಕೆಜಿಗೋ? ಸತ್ಯವನ್ನು ಕಕ್ಕಲು ಕಷ್ಷವೇಕೆ? ನಾಲಗೆ ತಡವರಿಸುತ್ತಿದೆಯಾ ಪ್ರತಿಪಕ್ಷ ನಾಯಕರೇ? ಸಮ್ಮಿಶ್ರ ಸರಕಾರದಲ್ಲಿ 5 ಕೆಜಿ ಅಕ್ಕಿ ನೀಡಲಾಯಿತು, ನಿಜ. 7 ಕೆಜಿ ಕೊಡಿ ಎಂದು ಬೊಬ್ಬೆ ಹೊಡೆದ ನೀವೇ ಹಣ ಇಟ್ಟಿದ್ದು 5 ಕೆಜಿಗೆ ಮಾತ್ರ. ಹೊರಗೆ ಕುಮಾರಸ್ವಾಮಿ 7 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಿದರು ಎಂದು ನಿರ್ಲಜ್ಜವಾಗಿ ಸುಳ್ಳು ಹೇಳುತ್ತಿದ್ದೀರಿ. ಉಳಿದ 2 ಕೆಜಿ ಅಕ್ಕಿಗೆ ಹಣ ಎಲ್ಲಿತ್ತು? ಪಾಪಪ್ರಜ್ಞೆ ಇಲ್ಲವಾ ನಿಮಗೆ? ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.



ಚುನಾವಣೆಯಲ್ಲಿ ಕೇವಲ ಮತ ಪಡೆಯುವ ದುರುದ್ದೇಶದಿಂದ ನೀವು ಜನರು ತಿನ್ನುವ ಅನ್ನದ ಜತೆಗೂ ರಾಜಕೀಯ ಮಾಡುತ್ತಿದ್ದಿರಿ. ಆದರೆ ಉಳಿದ 2 ಕೆಜಿ ಅಕ್ಕಿಗೆ ಹಣ ಹೊಂದಿಸಲು ಸಮ್ಮಿಶ್ರ ಸರಕಾರದಲ್ಲಿ ನಾವು ಪಟ್ಟ ಕಷ್ಟ ನಿಮಗೆ ಗೊತ್ತಿಲ್ಲವೇ? ಸದನದಲ್ಲಿ ಈ ವಿಷಯವನ್ನು ನಾನು ಪ್ರಸ್ತಾಪ ಮಾಡಿದಾಗ 5 ಕೆಜಿಗೆ ಹಣ ಮೀಸಲಿಟ್ಟು 'ಅಕ್ಕಿಗಾಗಿ ಮಿಡಿದ ನಿಮ್ಮ ಆತ್ಮಸಾಕ್ಷಿ' ಎಲ್ಲಿ ಹೋಗಿತ್ತು? ಸುಳ್ಳಿನ ಶೂರ ಸಿದ್ದರಾಮಯ್ಯನವರೇ, ಇನ್ನಾದರೂ ನಿಮ್ಮ ಸುಳ್ಳಿನ ʼಸಿದ್ದಕಲೆʼಗೆ ಕೊನೆ ಹಾಡಿ ಎಂದು ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರಿಗೆ ಟ್ವಿಟ್ ಮೂಲಕ ಹೇಳಿದ್ದಾರೆ.

ಇದನ್ನು ಓದಿ: HDK Vs Siddaramaiah: ಸುಳ್ಳನ್ನು ಪದೇಪದೆ ಹೇಳುತ್ತಾ ಜನರನ್ನು ದಾರಿ ತಪ್ಪಿಸುವ ʼಸಿದ್ದಕಲೆʼ ಅವರಿಗೆ ಚೆನ್ನಾಗಿ ಸಿದ್ಧಿಸಿದೆ; ಸಿದ್ದರಾಮಯ್ಯ ವಿರುದ್ಧ ಎಚ್ಡಿಕೆ ಕಿಡಿ

ಇನ್ನು ಜಾತಿ ಸಮೀಕ್ಷೆ ವರದಿ (Caste Survey Report) ಬಿಡುಗಡೆ ವಿಚಾರವಾಗಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ (Siddaramaiah) ಹಾಗೂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರ ನಡುವಿನ ವಾಕ್ಸಮರ ಮುಂದುವರೆದಿದೆ. ಇದೇ ವಿಷಯವಾಗಿ ನೆನ್ನೆ ಸಿದ್ದರಾಮಯ್ಯ ವಿರುದ್ಧ ಎಚ್​ಡಿಕೆ ತಿರುಗೇಟು ನೀಡಿದ್ದರು. ಸುಳ್ಳನ್ನು ಪದೇಪದೆ ಹೇಳುತ್ತಾ ಜನರನ್ನು ದಾರಿ ತಪ್ಪಿಸುವ ʼಸಿದ್ದಕಲೆʼ ಅವರಿಗೆ ಚನ್ನಾಗಿ ಸಿದ್ಧಿಸಿದೆ ಎಂಬುದನ್ನು ನಾನು ಬಲ್ಲೆ. ನಿತ್ಯವೂ ʼಸುಳ್ಳಿನ ಜಪʼ ಮಾಡುವುದೇ ಅವರಿಗೆ ನಿತ್ಯ ಕಾಯಕ. ಇದು ಸತ್ಯಕ್ಕೆ ಮತ್ತು ರಾಜ್ಯಕ್ಕೆ ಎಸಗುವ ಅಪಚಾರ ಹಾಗೂ ಶಾಂತ ಸಮಾಜವನ್ನು ಒಡೆಯುವ ಹುನ್ನಾರ. ನಾನು ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಸಿದ್ದರಾಮಯ್ಯ ಅವರು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದರು. ಆಗ ಕಾಂತರಾಜು ಅವರ ವರದಿಯ ಬಗ್ಗೆ ಅವರು ಪ್ರಸ್ತಾಪವನ್ನೇ ಮಾಡಲಿಲ್ಲ ಮತ್ತೂ ಚರ್ಚೆ ಮಾಡುವ ಧೈರ್ಯವನ್ನೇಕೆ ತೋರಲಿಲ್ಲ? ಹೀಗಾಗಿ ಕೋಪದ ಪ್ರಶ್ನೆ ಎಲ್ಲಿಂದ ಬರುತ್ತದೆ?  ಪದೇಪದೆ ʼಸಿದ್ದಹಸ್ತಿಕೆʼ ತೋರುವ ಪ್ರಯತ್ನ ಬೇಡ. ಯಾರೋ ಕಟ್ಟಿದ ಹುತ್ತಕ್ಕೆ ಹೊಕ್ಕು ರಾಜಕೀಯ ಮರುಹುಟ್ಟು ಪಡೆದು ಉಂಡ ಮನೆಗೆ ಕನ್ನ ಕೊರೆಯುವ ಮುನ್ನ ತಮ್ಮ ಹೇಳಿಕೆಗಳ ಬಗ್ಗೆ ಎಚ್ಚರಿಕೆ ವಹಿಸಲಿ. ಸಮಾಜದ ಶಾಂತಿಗೆ ಕೊಳ್ಳಿ ಇಡುವ ದುಸ್ಸಾಹಸಕ್ಕೆ ಕೈ ಹಾಕಿದರೆ ಜನರೇ ಉತ್ತರ ಕೊಡುತ್ತಾರೆ. ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿ ವಿಕೃತ ಆನಂದ ಅನುಭವಿಸುವುದು ಹೇಯ. ಮುಗ್ಧ ಜನರಲ್ಲಿ ಜಾತಿಯ ವಿಷಬೀಜ ಬಿತ್ತುವುದು ರಾಜಕೀಯ ನಿಕೃಷ್ಟತೆಯ ಪರಮಾವಧಿ ಎಂದು ಎಚ್​ಡಿಕೆ ಕಿಡಿ ಕಾರಿದ್ದರು.
Published by:HR Ramesh
First published: