HOME » NEWS » State » HD KUMARASWAMY DEMAND HIGH LEVEL PROBE ON PSI KIRAN SUICIDE CASE RH

ಚನ್ನರಾಯಪಟ್ಟಣ ಠಾಣೆ ಪಿಎಸ್​ಐ ಕಿರಣ್ ಆತ್ಮಹತ್ಯೆ ಪ್ರಕರಣದ ಸಂಪೂರ್ಣ ತನಿಖೆಗೆ ಎಚ್​ಡಿಕೆ ಒತ್ತಾಯ

ಈ ಹಿಂದೆ ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆಗೆ  ಶರಣಾದಾಗ ನ್ಯಾಯಸಮ್ಮತ ತನಿಖೆಗೆ ಒತ್ತಡ ಹೇರುತ್ತಿದ್ದ ಬಿಜೆಪಿ ಸುಮ್ಮನಾಗಿದೆ. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಸರ್ಕಾರ ತಕ್ಷಣ ಆದೇಶ ನೀಡಬೇಕು. ಯಾವುದೇ ಇಲಾಖೆಯಲ್ಲಿಯೂ ಪ್ರಾಮಾಣಿಕ ಅಧಿಕಾರಿಗಳು ಕಿರುಕುಳಕ್ಕೆ ಒಳಗಾಗದಂತೆ ಎಚ್ಚರವಹಿಸಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

news18-kannada
Updated:August 1, 2020, 4:08 PM IST
ಚನ್ನರಾಯಪಟ್ಟಣ ಠಾಣೆ ಪಿಎಸ್​ಐ ಕಿರಣ್ ಆತ್ಮಹತ್ಯೆ ಪ್ರಕರಣದ ಸಂಪೂರ್ಣ ತನಿಖೆಗೆ ಎಚ್​ಡಿಕೆ ಒತ್ತಾಯ
ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ
  • Share this:
ಬೆಂಗಳೂರು; ಚನ್ನರಾಯಪಟ್ಟಣ ನಗರ ಠಾಣೆ ಸಬ್ ಇನ್ಸ್ ಪೆಕ್ಟರ್ ಕಿರಣ್ ಆತ್ಮಹತ್ಯೆ  ಪ್ರಕರಣ ಸಂಪೂರ್ಣ ತನಿಖೆ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಎಚ್​ಡಿಕೆ ಅವರು, ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪಿ.ಎಸ್‌.ಐ ಕಿರಣ್‌ಕುಮಾರ್ ಆತ್ಮಹತ್ಯೆ  ಪ್ರಕರಣವನ್ನು ರಾಜ್ಯ ಬಿಜೆಪಿ ಸರ್ಕಾರ ಉನ್ನತಮಟ್ಟದ ತನಿಖೆಗೆ ತಕ್ಷಣ ಆದೇಶಿಸಬೇಕು. ಪೊಲೀಸರು ಮತ್ತು ಹಿರಿಯ ಪೊಲೀಸ್ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಟ ಮಾಡುವ ಪರಿಸ್ಥಿತಿಯಲ್ಲಿ ಅವರ ಆತ್ಮಾಭಿಮಾನ, ಸ್ವಾಭಿಮಾನಕ್ಕೆ ಧಕ್ಕೆ ತರುವಂತೆ ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್ಐ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಹಾಗಾಗಿ, ಸೂಕ್ತ ತನಿಖೆಗೆ ಆದೇಶಿಸುವ ಮೂಲಕ ಕಿರಿಯ ಹಂತದ  ಪೊಲೀಸ್ ಅಧಿಕಾರಿಗಳಲ್ಲಿ ನೈತಿಕ ಸ್ಥೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಹಿಂದೆ ಗಣಪತಿ ಭಟ್, ಮಲ್ಲಿಕಾರ್ಜುನ ಬಂಡೆ, ಕಲ್ಲಪ್ಪ ಹಂಡಿಬಾಗ್ ಅವರ ಅಕಾಲಿಕ ಸಾವು ಮತ್ತು ಅನುಪಮಾ ಶೆಣೈ  ಅವರ ರಾಜೀನಾಮೆ ವೇಳೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯದಾದ್ಯಂತ "ಜಾಗಟೆ" ಬಾರಿಸಿದ್ದ ಬಿಜೆಪಿ ಈಗ ಮೌನಕ್ಕೆ ಶರಣಾಗಿದೆ. ಈಗ ಮಾತ್ರ ಆತ್ಮಹತ್ಯೆ ಮಾಡಿಕೊಂಡ ಕಿರಣ್ ಕುಮಾರ್ ಅವರ ಮೊಬೈಲ್ ಫೋನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಜಪ್ತಿ ಮಾಡಿದ್ದು, ಹಲವು  ಶಂಕೆಗಳಿಗೆ ಎಡೆಮಾಡಿಕೊಟ್ಟಿದೆ. ಇವರ ಸಾವಿಗೆ ಆಯಕಟ್ಟಿನ ಜಾಗದಲ್ಲಿ ಕುಳಿತ ಹಿರಿಯ ಪೊಲೀಸ್ ಅಧಿಕಾರಿಗಳ ದೌರ್ಜನ್ಯ ಹಾಗೂ ಬೆದರಿಕೆ ತಂತ್ರ ಕಾರಣ ಎಂಬ ಮಾಹಿತಿ ನನಗಿದೆ ಎಂದು ಆರೋಪಿಸಿದ್ದಾರೆ.

ಬೇರೆ ಪಕ್ಷಗಳ ಆಡಳಿತಾವಧಿಯಲ್ಲಿ ಅಧಿಕಾರಿಗಳ ನಿಗೂಢ ಸಾವಿಗೆ ಸರ್ಕಾರವೇ ಕಾರಣ ಎಂದು ಬೊಬ್ಬೆ ಹಾಕಿದ್ದ ಬಿಜೆಪಿ ವರ್ಷದಿಂದ ಆಡಳಿತದ ಚುಕ್ಕಾಣಿ ಹಿಡಿದಿದೆ. ಈಗ ಪಿ.ಎಸ್.ಐ, ಇದಕ್ಕೂ ಮುನ್ನ ಐಎಎಸ್ ಅಧಿಕಾರಿ, ಕಳೆದ ವರ್ಷ ಐ.ಎಫ್.ಎಸ್. ಅಧಿಕಾರಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿರುವುದು ಸರಿಯಲ್ಲ ಎಂದು ಬಿಜೆಪಿ ಪಕ್ಷದ ವಿರುದ್ಧ ಟ್ವಿಟರ್ ನಲ್ಲಿ ದಾಳಿ ಮಾಡಿದ್ದಾರೆ.

ಇದನ್ನು ಓದಿ: ಮೇಲಾಧಿಕಾರಿ ಒತ್ತಡದಿಂದ ಪಿಎಸ್​ಐ ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ; ಅಂತಿಮ ದರ್ಶನದ ಬಳಿಕ ಎಚ್.ಡಿ.ರೇವಣ್ಣ ಆರೋಪ

ಈ ಹಿಂದೆ ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆಗೆ  ಶರಣಾದಾಗ ನ್ಯಾಯಸಮ್ಮತ ತನಿಖೆಗೆ ಒತ್ತಡ ಹೇರುತ್ತಿದ್ದ ಬಿಜೆಪಿ ಸುಮ್ಮನಾಗಿದೆ. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಸರ್ಕಾರ ತಕ್ಷಣ ಆದೇಶ ನೀಡಬೇಕು. ಯಾವುದೇ ಇಲಾಖೆಯಲ್ಲಿಯೂ ಪ್ರಾಮಾಣಿಕ ಅಧಿಕಾರಿಗಳು ಕಿರುಕುಳಕ್ಕೆ ಒಳಗಾಗದಂತೆ ಎಚ್ಚರವಹಿಸಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
Published by: HR Ramesh
First published: August 1, 2020, 4:08 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading