ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly ELection) ಮತದಾನ (Voting) ಇಂದು ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಮತದಾನ ಮುಕ್ತಾಯವಾಗುತ್ತಿದ್ದಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (HD Kumaraswamy) ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚುನಾವಣಾ ಪ್ರಚಾರದಲ್ಲಿ (Election Campaign) ಸಖತ್ ಬ್ಯುಸಿಯಾಗಿದ್ದ ಮಾಜಿ ಸಿಎಂ ಎಚ್‌ಡಿಕೆ, ಸದ್ಯ ವಿಶ್ರಾಂತಿಗಾಗಿ ಸಿಂಗಾಪುರಕ್ಕೆ (Singapore) ತೆರಳಿದ್ದಾರೆ. ಮೇ 13ರಂದು ಮಧ್ಯಾಹ್ನ ಎಚ್‌ಡಿಕೆ ಮತ್ತೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎನ್ನಲಾಗಿದೆ. ಸಮೀಕ್ಷೆಗಳಿಂದ ಬೇಸರಗೊಂಡಿರುವ ಎಚ್‌ಡಿಕೆ ಸಿಂಗಾಪುರಕ್ಕೆ ತೆರಳಿದ್ದಾರೆ.
ಜೆಡಿಎಸ್ ಬಹುಮತ ಬರಲಿದೆ
ಇಂದು ಕೇತಗಾನಹಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ಈ ಬಾರಿ ನನ್ನ ಅಭ್ಯರ್ಥಿಗಳಿಗೆ ಹಣ ಒದಗಿಸಲು ಆಗಿಲ್ಲ. ಕೆಲವು ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುತ್ತಿದ್ದರು. ಆದರೆ ಹಣದ ಕೊರತೆಯಿಂದಾಗಿ ನಮಗೆ ಹಿನ್ನಡೆಯಾಗಿದೆ. ಆದರೂ ಸಹ ಜೆಡಿಎಸ್ ಬಹುಮತ ಬರಲಿದೆ.
ಅತಂತ್ರ ಫಲಿತಾಂಶ ವಿಚಾರ - ಮುಂದೆ ಅದರ ಬಗ್ಗೆ ಮಾತನಾಡ್ತೇನೆ. ಬಿಜೆಪಿ - ಕಾಂಗ್ರೆಸ್ ಹಣದಿಂದ ಚುನಾವಣೆ ನಡೆಸಿವೆ. ಉತ್ತನ ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಿದ್ದರು. ಕನಿಷ್ಠ 25 ಕ್ಷೇತ್ರಗಳಲ್ಲಿ ಹಣದ ಕೊರತೆಯಿಂದ ಹಿನ್ನಡೆಯಾಗಿದೆ. ಗೆಲ್ಲುವ ಕ್ಷೇತ್ರದಲ್ಲೂ ಪೆಟ್ಟು ತಿಂದಿದ್ದೇವೆ ಎಂದರು.
ಇದನ್ನೂ ಓದಿ: Karnataka Election 2023 Live: ಎಕ್ಸಿಟ್ ಪೋಲ್ ಬಂತು, ಇದೀಗ ಮೇ 13ರ ಫಲಿತಾಂಶದತ್ತ ಎಲ್ಲರ ಚಿತ್ತ
ಯುವಕನಾಗಿ ನನಗೂ ಆತಂಕವಿದೆ
ಇನ್ನು, ಇದೇ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಈ ಬಾರಿಯ ಚುನಾವಣೆ ಹಣದಿಂದ ನಡೆದಿದೆ. ನಾನೊಬ್ಬ ಯುವಕನಾಗಿ ನನಗೂ ಆತಂಕವಿದೆ. ಮುಂದೆ ಈ ವ್ಯವಸ್ಥೆಯನ್ನ ರಾಜ್ಯದ ಜನರು ಸರಿಪಡಿಸಬೇಕಿದೆ. ನಾವು ರಾಮನಗರದಲ್ಲಿ 25 ವರ್ಷಗಳಿಂದ ಸೇವೆ ಮಾಡಿದ್ದೇವೆ. ಜನರು ನಮ್ಮನ್ನ ಕೈಹಿಡಿಯುತ್ತಾರೆಂಬ ನಂಬಿಕೆಯಿದೆ ಎಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ