ಕರ್ನಾಟಕ ವಿಧಾನಸಭೆ ಚುನಾವಣೆ (Assembly Election) ಸಮೀಪಿಸುತ್ತಿದೆ. ರಾಜ್ಯ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ನಾನಾ ರೀತಿಯ ಕಸರತ್ತುಗಳನ್ನು ಮಾಡುತ್ತಿವೆ. ಈ ನಡುವೆ ಚಾಮರಾಜಪೇಟೆ ಕ್ಷೇತ್ರದಲ್ಲಿ ಈ ಬಾರಿ ಜೆಡಿಎಸ್ (JDS) ಚುಕ್ಕಾಣಿ ಹಿಡಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumarswamy) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಚಾಮರಾಜಪೇಟೆ (Chamarajapete) ಕ್ಷೇತ್ರ ಅಭಿವೃದ್ಧಿ ವಿಚಾರವಾಗಿ ಮಾತನಾಡುತ್ತಾ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ (Zameer Ahmed Khan)ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಜೆಡಿಎಸ್ ಈ ಬಾರಿ 123 ಸ್ಥಾನಗಳನ್ನು ಸಹ ಗೆದ್ದು, ತಮ್ಮ ಸರ್ಕಾರವನ್ನು ಆಡಳಿತಕ್ಕೆ ತರುವುದಾಗಿ ತಿಳಿಸಿದ್ದಾರೆ.
ಜಮೀರ್ ಗೆ ಪರೋಕ್ಷವಾಗಿ ಟಾಂಗ್ ನೀಡಿದ ಕುಮಾರಸ್ವಾಮಿ
ಚಾಮರಾಜಪೇಟೆ ಹಿಂದೆ ಯಾವ ತರ ಇತ್ತು? ಬಳಿಕ ದೇವೆಗೌಡರು ಯಾವ ರೀತಿ ಅಭಿವೃದ್ಧಿ ಮಾಡಿದರು, ಅದಕ್ಕೆಲ್ಲಾ ಒಂದು ಇತಿಹಾಸ ಇದೆ. ಈಗ ಮತ್ತೊಮ್ಮೆ ಜೆಡಿಎಸ್ ಚಾಮರಾಜಪೇಟೆಯಲ್ಲಿ ಗೆಲ್ಲಬೇಕು. ಹಣ ಹಂಚುವುದು ದೊಡ್ಡ ಕೆಲಸವಲ್ಲ. ಆದರೆ ಆ ಹಣ ಹೇಗೆ ಸಂಗ್ರಹ ಆಗಿದೆ ಅದನ್ನು ಗಮನಿಸಬೇಕು ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಲಿ ಶಾಸಕ ಜಮೀರ್ ಅಹ್ಮದ್ ಖಾನ್ಗೆ ಟಾಂಗ್ ನೀಡಿದ್ದಾರೆ.
ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಚಾಮರಾಜಪೇಟೆ ಕ್ಷೇತ್ರ ಜೆಡಿಎಸ್ ಗೆಲ್ಲುವ ಮೊದಲ ಕ್ಷೇತ್ರ ಆಗಲಿದೆ. ಗುಜರಾತ್ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಮತ್ತು ಬಿಜೆಪಿ ಯಾವ ತಂತ್ರ ಮಾಡುತ್ತಿದೆ. ಅದನ್ನು ಕಳೆದ ಎರಡು ಮೂರು ದಿನಳಿಂದ ತೋರಿಸುತ್ತಿದ್ದಾರೆ. ಕೆಲವು ಮಾಧ್ಯಮಗಳು ಜೆಡಿಎಸ್ ಪಕ್ಷ ಇದೆ ಎನ್ನುವುದನ್ನು ಮರೆತಿವೆ. ಆದರೂ ನನಗೆ ಬೇಸರ ಇಲ್ಲ. ಬಿಜೆಪಿ ಕಾಂಗ್ರೆಸ್ ಪಕ್ಷಕ್ಕಿಂತ ಜೆಡಿಎಸ್ ಗ್ರಾಫ್ ಮೇಲೆ ಏಳುತ್ತಾ ಇದೆ. ಪಂಚರತ್ನ ಕಾರ್ಯಕ್ರಮದ ಮೂಲಕ ಅದು ಗೊತ್ತಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Karnataka Politics: ವಿಧಾನಸಭೆ ಎಲೆಕ್ಷನ್ನಲ್ಲಿ ನಿಖಿಲ್ ಸ್ಪರ್ಧೆ ಮಾಡೋದಿಲ್ಲ; H D ಕುಮಾರಸ್ವಾಮಿ
ಬೆಂಗಳೂರನಲ್ಲಿ ಜನರಿಗೆ ರಕ್ಷಣೆ ಇಲ್ಲ, ಅದು ಜನರಿಗೆ ಗೊತ್ತಾಗಿದೆ. ಇಂದು ಬಿಜೆಪಿ ಕಾಂಗ್ರೆಸ್ ಆಂತರಿಕ ಸಮೀಕ್ಷೆ ನಡೆಸುತ್ತಿದೆ. ಪ್ರತಿ ಎರಡು ತಿಂಗಳಿಗೆ ಒಂದು ಸ್ಟಾಟರ್ಜಿ ಮಾಡುತ್ತಿದೆ. ಬಿಜೆಪಿಯ ಆಂತರಿಕ ಸರ್ವೆ ಪ್ರಕಾರ ಜೆಡಿಎಸ್ 55 ಸ್ಥಾನ ಗೆಲ್ಲಲಿದೆ ಎನ್ನುತ್ತಿದ್ದಾರೆ. ಬರೀ 55 ಅಲ್ಲ ನಾವು 123 ಸ್ಥಾನ ಗೆಲ್ಲುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಜಮೀರ್ ವಿರುದ್ಧ ಪರೋಕ್ಷ ಎಚ್ಚರಿಕೆ ಕೊಟ್ಟ ಹೆಚ್ಡಿಕೆ
ಪಾಪದ ಕೊಡ ತುಂಬಿದಾಗ ಶಕ್ತಿ ಕುಂದೊಕೆ ದೇವರ ಕೃಪೆ ಬೇಕು. ಅವರನ್ನು ಎದುರಿಸೋಕೆ ನಿಮ್ಮ ಶಕ್ತಿ ಸಾಕು. ನಿಮಗೆ ಪೊಲೀಸ್ ಬಿಟ್ಟು ಹೆದರಿಸಿದರೆ ನನ್ನ ಗಮನಕ್ಕೆ ತನ್ನಿ, ಉಳಿದಿದ್ದನ್ನ ನಾನು ನೋಡಿಕೊಳ್ಳುತ್ತೇನೆ ಎಂದು ಜಮೀರ್ ಅಹ್ಮದ್ ವಿರುದ್ಧ ಪರೋಕ್ಷವಾಗಿ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.
ಒಟ್ಟಾರೆ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಲ್ಲಿ ನಾವು ಗೆಲ್ಲುವುದರಲ್ಲಿ ಅನುಮಾನವಿಲ್ಲ. 2023 ರಲ್ಲಿ ನಮ್ಮ ಸರ್ಕಾರ ಬರುವುದು ಶತಸಿದ್ಧ ಎಂದಿದ್ದಾರೆ.
ಸಿದ್ದರಾಮಯ್ಯ ಚಾಮರಾಜಪೇಟೆಯಲ್ಲಿ ಸ್ಪರ್ಧಿಸಿದರೆ ಗೆದ್ದೇ ಗೆಲ್ಲುತ್ತಾರೆ ಅಂದ ಜಮೀರ್
ಇನ್ನೂ ಇತ್ತೀಚೆಗಷ್ಟೇ ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮರಾಜಪೇಟೆ ಅಳಿಯ. ನಾನು ಚಾಮರಾಜಪೇಟೆ ಮನೆ ಮಗ. ಚಾಮರಾಜಪೇಟೆಯಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿದರೆ ಗೆದ್ದೇ ಗೆಲ್ಲುತ್ತಾರೆ ಎಂದಿದ್ದಾರೆ.
ಇದೇ ವೇಳೆ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಹೇಳಿಕೆ ನೀಡಿದ್ದರ ಬಗ್ಗೆ ಮಾತನಾಡಿದ ಅವರು, ಈಗಲೂ ನಾನು ಆ ಮಾತಿಗೆ ಬದ್ದನಾಗಿದ್ದೇನೆ. ಸಿದ್ದರಾಮಯ್ಯನೇ ಮತ್ತೆ ಮುಂದಿನ ಮುಖ್ಯಮಂತ್ರಿ ಆಗಬೇಕು. ಆದರೆ ಇದರಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ