ಬೆಂಗಳೂರು(ಸೆ. 29): ಬೆಂಗಳೂರು ಉಗ್ರ ಚಟುವಟಿಕೆಗಳ ಕೇಂದ್ರವಾಗಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮಾಡಿರುವ ಆರೋಪಕ್ಕೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ, ಅನ್ನ, ಆಶ್ರಯ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಟೀಕೆ ಸಲ್ಲದು. ಬೆಂಗಳೂರು ಉಗ್ರರದ್ದಲ್ಲ, ನಮ್ಮ ಊರು ಬೆಂಗಳೂರು ಎಂದು ಮಾಜಿ ಮುಖ್ಯಮಂತ್ರಿಗಳು ತಮ್ಮ ಸರಣಿ ಟ್ವೀಟ್ಗಳಲ್ಲಿ ಹೇಳಿದ್ದಾರೆ. ಹಾಗೆಯೇ, ಬೆಂಗಳೂರಿನ ಅಭಿವೃದ್ಧಿ ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಬಿಯ ಷಡ್ಯಂತ್ರದ ಭಾಗವಾಗಿರಬಹುದು ಎಂದು ಕುಮಾರಸ್ವಾಮಿ ಶಂಕಿಸಿದ್ದಾರೆ.
“ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ, ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು.
ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ದಲಿತ ಯುವತಿ ಇಂದು ಸಾವು
“ಬೆಂಗಳೂರು ಉಗ್ರರ ಕೇಂದ್ರವಾಗಿದೆ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೇ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ಮಾಧ್ಯಮದ ಮೂಲಕ ನೋಡಿದೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನವೂ ಹೌದು.
Bengaluru has become epicenter of terror activities, proven through many NIA arrests & busted sleeper cells in the city. I urged HM Amit Shah Ji to set up a permanent division of National Investigation Agency (NIA) there. He assured it will be set up soon: Tejasvi Surya, BJP MP. pic.twitter.com/iHWt6r2MyA
— ANI (@ANI) September 27, 2020
“ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ” ಎಂದು ಕುಮಾರಸ್ವಾಮಿ ಟ್ವೀಟ್ಗಳನ್ನ ಮಾಡಿದ್ದಾರೆ.
ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ, ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು.
1/4
— H D Kumaraswamy (@hd_kumaraswamy) September 29, 2020
ಬೆಂಗಳೂರು ಉಗ್ರರ ಕೇಂದ್ರವಾಗಿದೆ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೇ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ಮಾಧ್ಯಮದ ಮೂಲಕ ನೋಡಿದೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನವೂ ಹೌದು.
2/4
— H D Kumaraswamy (@hd_kumaraswamy) September 29, 2020
ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು.
3/4
— H D Kumaraswamy (@hd_kumaraswamy) September 29, 2020
ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ!
4/4
— H D Kumaraswamy (@hd_kumaraswamy) September 29, 2020
ಬೆಂಗಳೂರು ಉಗ್ರರ ತಾಣವಾಗಿದೆ ಎಂದು ಹೇಳಿದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ನಾಯಕರು ಹಾಗೂ ಕೆಲ ಕನ್ನಡ ಸಂಘಟನೆಗಳ ಮುಖಂಡರೂ ಟೀಕೆಗಳನ್ನ ಮಾಡಿದ್ದಾರೆ. ಅಧಿವೇಶನದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡ ಈ ವಿಚಾರ ಪ್ರಸ್ತಾಪಿಸಿ, ಈ ಹೇಳಿಕೆಯಿಂದ ಬೆಂಗಳೂರಿಗೆ ಮುಜುಗರ ತರಲಾಗಿದೆ. ಇದಕ್ಕೆ ಸಿಎಂ ಅವರು ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ