HD Kumaraswamy: ಇಂದಿನ ಬೆಳಗಿನ ಶಾಕ್! 14.2 ಕೆಜಿ ತೂಕದ ಅಡುಗೆ ಅನಿಲ ಬೆಲೆ ಮತ್ತೆ 15 ರೂ. ಹೆಚ್ಚಳ; ಕೇಂದ್ರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ

ಸೇವೆ ಎಂದು ಸೋಗಲಾಡಿತನ ತೋರಿಸುವ RSS ಬೆಲೆ ಏರಿಕೆ ಬಗ್ಗೆ ಮಾತನಾಡಬೇಕು. ಬಡವರ ಭಾರತ, ಶ್ರೀಮಂತರ ಭಾರತದ ಬಗ್ಗೆ ಹೇಳಬೇಕು. ಅದಕ್ಕೆ ಕಾರಣವಾದ 7 ವರ್ಷಗಳ ಆಡಳಿತದ ಬಗ್ಗೆ ದನಿಯೆತ್ತಬೇಕು. ಇಲ್ಲವಾದರೆ ಬಡವರ ಭಾರತದ ಆಕ್ರೋಶಕ್ಕೆ ನೀವು ತುತ್ತಾಗುವುದು ತಪ್ಪುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಎಚ್ ಡಿ ಕುಮಾರಸ್ವಾಮಿ

ಎಚ್ ಡಿ ಕುಮಾರಸ್ವಾಮಿ

  • Share this:
    ಬೆಂಗಳೂರು: ನಿರಂತರವಾಗಿ ಅಡುಗೆ ಅನಿಲ ಬೆಲೆ ಏರಿಕೆ (Gas Cylinder Price Hike)  ಮಾಡುವ ಮೂಲಕ ಜನರ ಬದುಕಿಗೆ ಕೊಳ್ಳಿ ಇಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (Former CM HD Kumaraswamy) ಅವರು, ಕೇಂದ್ರ ಸರಕಾರದ (Central Government) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು ಸರಣಿ ಟ್ವೀಟ್ ಮಾಡಿರುವ ಅವರು, ಈ ಟ್ವೀಟ್ʼನಲ್ಲಿಯೂ ಆರೆಸ್ಸೆಸ್ (RSS) ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಇಂದಿನ ಬೆಳಗಿನ ಶಾಕ್! 14.2 ಕೆಜಿ ತೂಕದ ಅಡುಗೆ ಅನಿಲ ಸಿಲಿಂಡರ್ ಬೆಲೆ 15 ರೂ. ಹೆಚ್ಚಳ. ಈ ಸಿಲಿಂಡರ್ ಬೆಲೆ ಈಗ 900 ರೂ. ಗಡಿಯಲ್ಲಿದೆ. 7 ವರ್ಷಗಳ ಅಚ್ಛೇ ದಿನದ ಭ್ರಮೆಯಲ್ಲಿ ಜನರ ಬದುಕು ಬೆಂಕಿಯಲ್ಲಿ ಬೇಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಕೋವಿಡ್, ಬೆಲೆ ಏರಿಕೆಯಿಂದ ಜನಜೀವನ ಹಳ್ಳ ಹಿಡಿದು ಹೋಗಿದೆ. ಬಡ ಭಾರತದ ಜೀವ ಹಿಂಡುತ್ತಿರುವ ಶ್ರೀಮಂತ ಭಾರತದ ಸಾರಥ್ಯ ವಹಿಸಿರುವವರು ಒಂದಿಬ್ಬರು ಉದ್ಯಮಗಳ ಜೋಳಿಗೆ ತುಂಬಿ ಜನರ ಬಾಳಿಗೆ ಕೊಳ್ಳಿ ಇಡುತ್ತಿರುವುದು ಎಲ್ಲರಿಗೂ ಗೊತ್ತಾಗುತ್ತಿದೆ. ಅನಿಯಂತ್ರಿತ ಬೆಲೆ ಏರಿಕೆ ಮಾಪಿಯಾ ಹಿಂದೆ ಇರುವ ಶಕ್ತಿಗಳ ಬಗ್ಗೆ ಬಿಜೆಪಿ ನಾಯಕರು ಮಾತನಾಡಲಿ ಎಂದು ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ.

    ದುಡಿಯುವ ಕೈಗಳಿಗೆ ಕೆಲಸವಿಲ್ಲ. ಅನ್ನಕ್ಕಾಗಿ ಹಾಹಾಕಾರವಿದೆ. ಸೇವೆ ಎಂದು ಸೋಗಲಾಡಿತನ ತೋರಿಸುವ RSS ಬೆಲೆ ಏರಿಕೆ ಬಗ್ಗೆ ಮಾತನಾಡಬೇಕು. ಬಡವರ ಭಾರತ, ಶ್ರೀಮಂತರ ಭಾರತದ ಬಗ್ಗೆ ಹೇಳಬೇಕು. ಅದಕ್ಕೆ ಕಾರಣವಾದ 7 ವರ್ಷಗಳ ಆಡಳಿತದ ಬಗ್ಗೆ ದನಿಯೆತ್ತಬೇಕು. ಇಲ್ಲವಾದರೆ ಬಡವರ ಭಾರತದ ಆಕ್ರೋಶಕ್ಕೆ ನೀವು ತುತ್ತಾಗುವುದು ತಪ್ಪುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.



    ಇದನ್ನು ಓದಿ: HD Kumaraswamy: ಶಾಖೆ ಸೇರಿಕೊಂಡರೆ ಇನ್ನೆಷ್ಟು ಸತ್ಯ ಸಂಗತಿಗಳು ಗೊತ್ತಾಗಬಹುದು, ನೀವೇ ಒಮ್ಮೆ ಊಹಿಸಿ; ಸಿಟಿ ರವಿಗೆ ಎಚ್​ಡಿಕೆ ತಿರುಗೇಟು!

    ಸಿಟಿ ರವಿಗೆ ತಿರುಗೇಟು ನೀಡಿದ್ದ ಕುಮಾರಸ್ವಾಮಿ

    ಸಿಟಿ ರವಿ (CT Ravi) ಅವರು ಕುಮಾರಸ್ವಾಮಿ (HD Kumaraswamy) ಅವರು ಕೇವಲ ಪುಸ್ತಕ ಓದಿದದರೆ ಸಾಲದು, ಒಮ್ಮೆ ಆರ್​ಎಸ್​ಎಸ್​ ಕಚೇರಿಗೆ ಭೇಟಿ ನೀಡಲಿ ಎಂದು ಸವಾಲು ಹಾಕಿದ್ದರು. ಇದಕ್ಕೆ ಇಂದು ಎಚ್​ಡಿಕೆ ಅವರು ಸಿಟಿ ರವಿಗೆ ತಿರುಗೇಟು ನೀಡಿದ್ದಾರೆ. CTRavi ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. RSS ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು ನನಗೆ ಆಹ್ವಾನ ಕೊಟ್ಟಿದ್ದೀರಿ. ನಿಮ್ಮ ಸಂಘದೊಳಗಿನ ವಾಸ್ತಾವಾಂಶಗಳನ್ನು ಪ್ರತ್ಯಕ್ಷವಾಗಿ ನೋಡಿದವರೇ ಬರೆದ ಪುಸ್ತಕ ಓದಿ ನನಗೆ ಅಲ್ಲಿನ ವ್ಯವಹಾರಗಳ ವಿರಾಟ್ ದರ್ಶನ ಆಗಿದೆ. ಇನ್ನು ಶಾಖೆಯನ್ನೇ ಸೇರಿಕೊಂಡರೆ ಇನ್ನೆಷ್ಟು ಸತ್ಯ ಸಂಗತಿಗಳು ಗೊತ್ತಾಗಬಹುದು. ನೀವೇ ಒಮ್ಮೆ ಊಹಿಸಿ ಎಂದು ಟಾಂಗ್ ನೀಡಿದ್ದರು.

    ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ್ದೀರಿ. ನಿಮ್ಮ ಪಕ್ಷ ಮತ್ತು ನಿಮ್ಮ ಸರಕಾರದಲ್ಲಿ ತಾಂಡವವಾಡುತ್ತಿರುವ ಅಪರಿಮಿತ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತದ ಬಗ್ಗೆಯೂ ನೀವು ಹೇಳಬೇಕು. ಅದಕ್ಕೂ RSS ಶಾಖೆಯಲ್ಲೇ ತರಬೇತಿ ನೀಡಲಾಯಿತಾ?  ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂಥ ʼಆಪರೇಷನ್ ಕಮಲʼದಂಥ ʼಅನೈತಿಕʼ, ʼನಿರ್ಲಜ್ಜʼ, ʼನೀಚʼ ರಾಜಕಾರಣವನ್ನು RSS ಶಾಖೆಯಲ್ಲೇ ಕಲಿಸಲಾಯಿತಾ ಎಂಬುದನ್ನೂ ನೀವು ಜನರಿಗೆ ಹೇಳಬೇಕು ಸಿ.ಟಿ.ರವಿಯವರೇ?. ಜನರು ಕಣ್ಣೀರಿನಲ್ಲಿ ಕೈ ತೊಳೆಯುತ್ತಿದಾರೆ. ಇವತ್ತಿನ ಪ್ರಜಾವಾಣಿ ಪತ್ರಿಕೆ ಓದಿ. ಅದರಲ್ಲಿ “ಬದುಕು ಸಾಕೆನಿದೆ-ಭಗವಂತನಿಗೂ ಕರುಣೆ ಇಲ್ಲ” ಎನ್ನುವ ವರದಿ ಇದೆ. ಬೆಂಗಳೂರಿನ ಶ್ರೀನಿವಾಸನಗರದ ಬಿ.ಆರ್.ವಾಸುದೇವ ಎಂಬ ಬೀದಿ ಬದಿ ವ್ಯಾಪಾರಿ ಹೇಳಿರುವ ಮಾತುಗಳನ್ನು ಒಮ್ಮೆ ಓದಿ. ಆಗಲಾದರೂ ನಿಮ್ಮ ಕಲ್ಲು ಹೃದಯ ಕರಗಬಹುದು ಎಂದು ಸಿಟಿ ರವಿಗೆ ತಿರುಗೇಟು ನೀಡಿದ್ದಾರೆ
    Published by:HR Ramesh
    First published: