HD Kumaraswamy: 2023 ಜೆಡಿಎಸ್ ಗುರಿ, ದಾರಿ ನಿಗದಿಗೆ ಮಂಥನ, ಕಾರ್ಯಕರ್ತರನ್ನು ಮನೆ  ಬಾಗಿಲಿಗೇ ಬರಮಾಡಿಕೊಳ್ಳಲಿದ್ದಾರೆ ಹೆಚ್.ಡಿ.ಕುಮಾರಸ್ವಾಮಿ!

"ರಾಷ್ಟ್ರೀಯ ಪಕ್ಷಗಳು ಎಷ್ಟೇ ಪ್ರಯತ್ನ ಮಾಡಿದರು ಜೆಡಿಎಸ್ ಪಕ್ಷವನ್ನು ಮುಗಿಸಲು ಸಾಧ್ಯವಾಗಿಲ್ಲ. ತುಳಿದಷ್ಟು ಅಷ್ಟೇ ಬಲವಾಗಿ ಪುಟಿದೆದ್ದು ಬರುತ್ತಿದೆ ನಮ್ಮ ಪಕ್ಷ. ಅರ್ಪಣಾ ಮನೋಭಾವದ ಕಾರ್ಯಕರ್ತರಿಂದ ಇದು ಸಾಧ್ಯವಾಗಿದೆ" ಎಂದು ಕುಮಾರಸ್ವಾಮಿ ಅವರು ಹೇಳಿದರು.

ಹೆಚ್.ಡಿ. ಕುಮಾರಸ್ವಾಮಿ

ಹೆಚ್.ಡಿ. ಕುಮಾರಸ್ವಾಮಿ

 • Share this:
  ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯನ್ನು (2023 Karnataka Assembly Election) ಗುರಿ ಇಟ್ಟುಕೊಂಡು ರಾಜ್ಯದಲ್ಲಿ ತೃತೀಯ ಶಕ್ತಿಯಾಗಿ ಹೊರಹೊಮ್ಮಲು ಜೆಡಿಎಸ್ (JDS) ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ (Former CM HD Kumaraswamy) ಅವರು ಪಕ್ಕಾ  ಕಾರ್ಯತಂತ್ರ ರೂಪಿಸುತ್ತಿದ್ದು, 'ಮನೆ ಬಾಗಿಲಿಗೇ' ಪಕ್ಷದ ಕಾರ್ಯಕರ್ತರನ್ನು (JDS Party Workers) ಬರಮಾಡಿಕೊಂಡು ಸಮಾಲೋಚನೆ ನಡೆಸಲು ಮುಂದಾಗಿದ್ದಾರೆ. ರಾಜ್ಯದ ಉದ್ದಗಲಕ್ಕೂ ಇರುವ ಕಾರ್ಯಕರ್ತರಿಗೆ, ಮುಖಂಡರಿಗೆ ಚೈತನ್ಯ ತುಂಬುವುದು ಸೇರಿದಂತೆ ಪಕ್ಷವನ್ನು ಬಲಿಷ್ಠಗೊಳಿಸಲು ಎಲ್ಲಾ ತಂತ್ರಗಳನ್ನು ಅವರು ರೂಪಿಸುತ್ತಿದ್ದಾರೆ.

  ತಳಮಟ್ಟದಿಂದ ಪಕ್ಷವನ್ನು ಬಲವಾಗಿ ಮೇಲೆತ್ತಲು ಅಗತ್ಯ ಇರುವ ಎಲ್ಲಾ ಕ್ರಮಗಳ ಜತೆಗೆ, 'ತಮ್ಮ ಪರಿಕಲ್ಪನೆಯಲ್ಲಿ' ಪಕ್ಷಕ್ಕೆ ಪುನಶ್ಚೇತನ ನೀಡಲು ಮಾಜಿ ಮುಖ್ಯಮಂತ್ರಿಗಳು ಕ್ರಮ  ವಹಿಸುತ್ತಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿಗೆ ರಾಜ್ಯವನ್ನು ಎರಡು ರಾಷ್ಟ್ರೀಯ ಪಕ್ಷಗಳು ನಿರ್ಲಕ್ಷ್ಯ ಮಾಡಿವೆ. ಜೆಡಿಎಸ್  ಕನ್ನಡಿಗರ ಏಕೈಕ ಆಯ್ಕೆಯಾಗಿದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷದ ಮುಂದಿರುವ ಆಯ್ಕೆಗಳು ಹಾಗೂ ಸವಾಲುಗಳು, ಅವುಗಳ ಪರಿಹಾರದ ಬಗ್ಗೆಯೂ ಅವರು ಚರ್ಚೆ ನಡೆಸಿ ಸೂಚನೆಗಳನ್ನು ನೀಡಲಿದ್ದಾರೆ.

  ರಾಜ್ಯದ ಹಿತಾಸಕ್ತಿಗಳ ಪ್ರಶ್ನೆ ಬಂದಾಗ ರಾಷ್ಟ್ರೀಯ ಪಕ್ಷಗಳು ಇಬ್ಬಗೆಯ ನೀತಿ ತಾಳಿವೆ. ಜೆಡಿಎಸ್ ಮಾತ್ರ ಕನ್ನಡಿಗರಿಗೆ ಮಿಡಿಯುವ ಪಕ್ಷವಾಗಿದ್ದು, ಅದನ್ನು ಜನರಿಗೆ ಸಮರ್ಥವಾಗಿ ಮುಟ್ಟಿಸುವುದು ಸೇರಿ, ರಾಷ್ಟ್ರೀಯ ಪಕ್ಷಗಳು ಒಡ್ಡುವ ಸವಾಲುಗಳ ಬಗ್ಗೆ ಕೂಡ  ಕುಮಾರಸ್ವಾಮಿ ಅವರು ವಿವರವಾಗಿ ಚರ್ಚೆ ಮಾಡಲಿದ್ದಾರೆ.

  ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು; "ಸದ್ಯಕ್ಕೆ ಕನ್ನಡಿಗರ ಕಷ್ಟ ಎಂದು ಬಂದಾಗ ಪ್ರತಿಯೊಂದು ವಿಷಯಕ್ಕೂ ದೆಹಲಿಯತ್ತ ನೋಡುವ ದುಸ್ಥಿತಿ ಇದೆ. ಕಾಂಗ್ರೆಸ್ ಮತ್ತು ಬಿಜೆಪಿ ದಿಲ್ಲಿ ಸಂಸ್ಕೃತಿಯಿಂದ ರಾಜ್ಯ ಹಿತವನ್ನು ನಿರಂತರವಾಗಿ ಬಲಿಗೊಡುತ್ತ ಬರಲಾಗಿದೆ. ಇದಕ್ಕೆ ಕಡಿವಾಣ ಹಾಕುವ ಅಗತ್ಯ ಇದೆ. 2023ರಲ್ಲಿ ಕನ್ನಡಿಗರೆಲ್ಲಾ ಒಂದಾಗಿ ಪರಿಹಾರ ಕಂಡುಕೊಳ್ಳಬೇಕಾಗಿದೆ" ಎಂದು ಹೇಳಿದರು.

  "ರಾಷ್ಟ್ರೀಯ ಪಕ್ಷಗಳು ಎಷ್ಟೇ ಪ್ರಯತ್ನ ಮಾಡಿದರು ಜೆಡಿಎಸ್ ಪಕ್ಷವನ್ನು ಮುಗಿಸಲು ಸಾಧ್ಯವಾಗಿಲ್ಲ. ತುಳಿದಷ್ಟು ಅಷ್ಟೇ ಬಲವಾಗಿ ಪುಟಿದೆದ್ದು ಬರುತ್ತಿದೆ ನಮ್ಮ ಪಕ್ಷ. ಅರ್ಪಣಾ ಮನೋಭಾವದ ಕಾರ್ಯಕರ್ತರಿಂದ ಇದು ಸಾಧ್ಯವಾಗಿದೆ" ಎಂದು ಕುಮಾರಸ್ವಾಮಿ ಅವರು ಹೇಳಿದರು.

  ಕಾರ್ಯಗಾರದಲ್ಲಿ ಏನೆನಿರುತ್ತದೆ? 

  • ಮುಂದಿನ ಗುರಿ ಮತ್ತು ದಾರಿಯ ಬಗ್ಗೆ ಚರ್ಚೆ

  • ಚುನಾವಣೆ 2023ರ ಬಗ್ಗೆ ಸ್ಪಷ್ಟ ಗುರಿ ನಿಗದಿ ಮಾಡಲಿರುವ ಹೆಚ್.ಡಿ.ಕುಮಾರಸ್ವಾಮಿ.

  • ಕಾರ್ಯಕರ್ತರ ಸಮಸ್ಯೆಗಳ ಆಲಿಕೆ.

  • ಪ್ರಶ್ನೆ, ಉತ್ತರ ಮತ್ತು ಪರಿಹಾರ.

  • ತಳಮಟ್ಟದಲ್ಲಿ ಪಕ್ಷ ಕಟ್ಟುವ ಬಗ್ಗೆ ಸ್ಪಷ್ಟ ದಿಕ್ಸೂಚಿ.

  • ಕಾರ್ಯಕರ್ತರ ಸಮಸ್ಯೆ ಪರಿಹಾರಕ್ಕೆ ನಿರಂತರ ವ್ಯವಸ್ಥೆ.


  2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಈಗಿನಿಂದಲೇ ತಯಾರಿ ಆರಂಭಿಸಿದೆ. ಈ ಉದ್ದೇಶದಿಂದಲೇ ಮನೆ ಬಾಗಿಲಿಗೆ ಕಾರ್ಯಕರ್ತರನ್ನು ಬರಮಾಡಿಕೊಂಡು ಅವರಿಂದ ಅಗತ್ಯ ಸಲಹೆ, ಸೂಚನೆ ಪಡೆಯುವುದು ಮತ್ತು ಮಾರ್ಗದರ್ಶನ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

  ಇದನ್ನು ಓದಿ: Amit Shah: ಸಹಕಾರಿ ಸಚಿವ ಸ್ಥಾನ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ 8 ಕೋಟಿ ಜನರನ್ನು ಉದ್ದೇಶಿಸಿ ಅಮಿತ್ ಶಾ ಭಾಷಣ

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಬಾರದೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ. ಹಾಗೂ ಗುಂಪುಗೂಡುವುದನ್ನು ಆದಷ್ಟು ನಿಯಂತ್ರಿಸಬೇಕಿದೆ. ಸರ್ಕಾರ ಕಾಲಕಾಲಕ್ಕೆ ಹೊರಡಿಸುತ್ತಿರುವ ಕೊರೋನಾ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕಿದೆ.
  Published by:HR Ramesh
  First published: