Kumaraswamy Tweet: ಬಿಜೆಪಿ ಅಂದ್ರೆ ಬೆಲೆ ಏರಿಕೆ, ವಿದ್ಯುತ್ ದರ ಹೆಚ್ಚಳದ ಹಿಂದಿನ ಹುನ್ನಾರ ಏನು? ಬಿಜೆಪಿಗೆ HDK ಸಾಲು ಸಾಲು ಪ್ರಶ್ನೆ

ರಾಜ್ಯದಲ್ಲಿ ಉತ್ತಮ ಮಳೆಯಾಗಿ ಎಲ್ಲ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಉತ್ಪಾದನೆಯೂ ಚೆನ್ನಾಗಿದೆ. ಹೆಚ್ಚುವರಿ ವಿದ್ಯುತ್ ಇದೆ ಎಂದು ಸರಕಾರವೇ ಹೇಳುತ್ತಿದೆ. ಹೀಗಿದ್ದರೂ ದರ ಏರಿಕೆ!! ಇದರ ಹಿಂದಿನ ಹುನ್ನಾರ ಏನು? ಎಂದು ಪ್ರಶ್ನಿಸಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಎಚ್​.ಡಿ ಕುಮಾರಸ್ವಾಮಿ

ಎಚ್​.ಡಿ ಕುಮಾರಸ್ವಾಮಿ

  • Share this:
ಬೆಂಗಳೂರು (ಜೂ 28): ವಿದ್ಯುತ್ ದರ ಏರಿಕೆ ವಿರುದ್ದ ಜೆಡಿಎಸ್​ ವರಿಷ್ಠ ಹಾಗೂ ಮಾಜಿ ಸಿಎಂ  ಹೆಚ್​​.ಡಿ  ಕುಮಾರಸ್ವಾಮಿ (H. D Kumaraswamy) ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ವಿರುದ್ಧ ಸರಣಿ ಟ್ವೀಟ್ (Tweet)​ ಮಾಡಿ HDK ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ (Assembly Election) ಹತ್ತಿರವಾಗ್ತಿದೆ. ಈಗ ವಿದ್ಯುತ್ ದರ ಏರಿಕೆ ಮಾಡಿ ಬಳಿಕ ಚುನಾವಣೆ ಸಮಯದಲ್ಲಿ ದರ ಇಳಿಸುವ ಸ್ಟೆಂಟ್ ಮಾಡ್ತಾರೆ. ಇದೇ ಅವರ ಯೋಚನೆ, ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ (New Idea) ಅಂದರೆ ಇದೇನಾ? ರಾಜ್ಯದಲ್ಲಿ ಉತ್ತಮ ಮಳೆಯಾಗಿ ಎಲ್ಲ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಉತ್ಪಾದನೆಯೂ ಚೆನ್ನಾಗಿದೆ. ಹೆಚ್ಚುವರಿ ವಿದ್ಯುತ್ ಇದೆ ಎಂದು ಸರಕಾರವೇ ಹೇಳುತ್ತಿದೆ. ಹೀಗಿದ್ದರೂ ದರ ಏರಿಕೆ!! ಇದರ ಹಿಂದಿನ ಹುನ್ನಾರ ಏನು? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಕುಮಾರಸ್ವಾಮಿ ಸರಣಿ ಟ್ವೀಟ್​

ಬೆಲೆ ಏರಿಕೆ ಬರೆ ಎಳೆಯುವಲ್ಲಿ ಬಿಜೆಪಿ ಸರಕಾರದ್ದು ಸಾರ್ವಕಾಲಿಕ ದಾಖಲೆ. ಏಪ್ರಿಲ್ 1ರಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ, ಈಗ ಜುಲೈ 1ರಿಂದ ಮತ್ತೆ ವಿದ್ಯುತ್ ಬರೆ ಎಳೆಯಲು ಸಜ್ಜಾಗಿದೆ.

ರಾಜ್ಯದಲ್ಲಿ ಉತ್ತಮ ಮಳೆಯಾಗಿ ಎಲ್ಲ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಉತ್ಪಾದನೆಯೂ ಚೆನ್ನಾಗಿದೆ. ಹೆಚ್ಚುವರಿ ವಿದ್ಯುತ್ ಇದೆ ಎಂದು ಸರಕಾರವೇ ಹೇಳುತ್ತಿದೆ. ಹೀಗಿದ್ದರೂ ದರ ಏರಿಕೆ!! ಇದರ ಹಿಂದಿನ ಹುನ್ನಾರ ಏನು?

ಬಡವರು ಕತ್ತಲಲ್ಲಿ ಕೊಳೆಯಬೇಕಾ?

ಮಾಸಿಕ 100 ಯೂನಿಟ್ ಬಳಸುವ ಗ್ರಾಹಕರು ಹೆಚ್ಚು ಬೆಲೆ ತೆರಬೇಕು. ಅಂದರೆ; ಬಡವರು ಮತ್ತು ಮಧ್ಯಮ ವರ್ಗದ ಜನರು ವಿದ್ಯುತ್ ಬಳಸದೇ ಕತ್ತಲಲ್ಲಿ ಕೊಳೆಯಬೇಕೆ? ಗತಿಶಕ್ತಿ ಯೋಜನೆ ಮೂಲಕ ದೇಶಕ್ಕೆ ಹೊಸ ಗತಿ ಕಾಣಿಸುವುದು ಎಂದರೆ ಇದೇನಾ?

ಇದನ್ನೂ ಓದಿ: KSRTC Bus Pass: ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್​; KSRTCಯಿಂದ ಬಸ್​ ಪಾಸ್​ ಅವಧಿ ವಿಸ್ತರಣೆ 

ಇಂಧನ ಇಲಾಖೆಯ ಅಸಮರ್ಪಕ ನಿರ್ವಹಣೆ ಹಾಗೂ ವಿದ್ಯುತ್ ಸೋರಿಕೆಯನ್ನು ತಡೆಯಲಾಗದ ಅದಕ್ಷತೆ ಬಗ್ಗೆ ಜನಕ್ಕೆ ಗೊತ್ತಿದೆ. ಆ ಹೊರೆಯನ್ನು ಜನರ ಮೇಲೆ ಹೇರಿ ಮೊದಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಲೂಟಿಗೆ ತುತ್ತಾಗಿರುವ ಜನರನ್ನು ಮತ್ತಷ್ಟು ಸುಲಿಗೆ ಮಾಡುವ ಪ್ರಯತ್ನ ಇದಾಗಿದೆ.

ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ

ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ. ಬಲಿಷ್ಟರು, ಬಲ್ಲಿದರ ಆಡಂಬೋಲ. ಬಿಸ್ನೆಸ್ ಕ್ಲಾಸಿನ ಕಾಮಧೇನು. ಬಡವರು & ಮಧ್ಯಮ ವರ್ಗದ ಜನರ ಪಾಲಿಗೆ ರಕ್ತಪಿಪಾಸು.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ಇದರ ಹಿಂದೆ ಇದೆ. ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ?

ಬೆಲೆ ಏರಿಕೆ ಬರೆ ಎಳೆಯುವಲ್ಲಿ ಬಿಜೆಪಿ ಸರಕಾರದ್ದು ಸಾರ್ವಕಾಲಿಕ ದಾಖಲೆ. ಏಪ್ರಿಲ್ 1ರಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ, ಈಗ ಜುಲೈ 1ರಿಂದ ಮತ್ತೆ ವಿದ್ಯುತ್ ಬರೆ ಎಳೆಯಲು ಸಜ್ಜಾಗಿದೆ. 1/7#ಜನರಿಗೆ_ಬಿಜೆಪಿ_ವಿದ್ಯುತ್_ಬರೆ

— H D Kumaraswamy (@hd_kumaraswamy) June 28, 2022



ಇದನ್ನೂ ಓದಿ: Shivamogga: ಆಸ್ಪತ್ರೆಯಲ್ಲಿ ಕೊಟ್ಟ ಇಂಜೆಕ್ಷನ್​ನಿಂದ 14 ಮಕ್ಕಳು ದಿಢೀರ್​ ಅಸ್ವಸ್ಥ; ಸ್ಥಳಕ್ಕೆ ಶಾಸಕರ ದೌಡು

ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದು. ಗ್ರಾಮೀಣ ಪ್ರದೇಶಕ್ಕೆ ಗುಣಮಟ್ಟದ, ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರಕಾರಕ್ಕೆ ದರ ಏರಿಕೆ ಮಾಡುವ ನೈತಿಕ ಹಕ್ಕಿಲ್ಲ. ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ ಜನಾಂದೋಲನ ಇಳಿಯಬೇಕಾಗುತ್ತದೆ.
Published by:Pavana HS
First published: