ಜನರು ನರಳಾಡುತ್ತಿರುವುದು ಸರ್ಕಾರ ಸಶಕ್ತವಾಗಿರುವ ಲಕ್ಷಣವೋ? ನಿಶಕ್ತವಾಗಿರುವ ಲಕ್ಷಣವೋ? ಎಚ್​ಡಿ ಕುಮಾರಸ್ವಾಮಿ ಪ್ರಶ್ನೆ

ಅಧಿಕಾರ ಇದ್ದಾಗಲೂ ಕೊಟ್ಟ ಮಾತು ಉಳಿಸಿ ಕೊಳ್ಳಲಾಗದವರ ಹಾಗೂ ರೋಗಗ್ರಸ್ತ ಮನಸ್ಸಿನವರ ಬಗ್ಗೆ ನನಗೆ ಮರುಕವಿದೆ. ಪತ್ರಿಕಾಗೋಷ್ಠಿ ಕರೆಯದೆ ಈ ದಿನ ಪತ್ರಿಕಾಗೋಷ್ಠಿ ಇರುವುದಿಲ್ಲ ಎಂದು ಸ್ಪಷ್ಟನೆ ನೀಡುವ ಬೌದ್ಧಿಕ ದಾರಿದ್ರ್ಯ ನಿಮ್ಮಂತೆ ನನಗೆ ಬಂದೊದಗಿಲ್ಲ ಎಂದು ಸಚಿವ ಕೆ.ಸುಧಾಕರ್ ಅವರಿಗೆ ಎಚ್​ಡಿಕೆ ಟಾಂಗ್ ನೀಡಿದ್ದಾರೆ.

news18-kannada
Updated:August 20, 2020, 5:21 PM IST
ಜನರು ನರಳಾಡುತ್ತಿರುವುದು ಸರ್ಕಾರ ಸಶಕ್ತವಾಗಿರುವ ಲಕ್ಷಣವೋ? ನಿಶಕ್ತವಾಗಿರುವ ಲಕ್ಷಣವೋ? ಎಚ್​ಡಿ ಕುಮಾರಸ್ವಾಮಿ ಪ್ರಶ್ನೆ
ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ
  • Share this:
ಬೆಂಗಳೂರು; ಮುಂಗಾರಿನ ಸಮಯದಲ್ಲಿ ರೈತರಿಗೆ ಗೊಬ್ಬರ ಸಿಗದೆ ಪರದಾಡುತ್ತಿರುವುದು ಹಾಗೂ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದು, ಜನರ ಸಮಸ್ಯೆ ಬಗೆಹರಿಸದ ಸರ್ಕಾರ ನಿಶಕ್ತವಾಗಿದೆ ಎಂದು ಗೇಲಿ ಮಾಡಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರೇ, ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಈಗಾಗಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ರೈತರಿಗೂ ಯೂರಿಯಾ ಗೊಬ್ಬರ ಪೂರೈಸುವಲ್ಲಿ ಸಶಕ್ತವಾಗಿದೆ. ಆಡಿದ ಮಾತು ಬಿಟ್ಟ ಬಾಣ ಕಳೆದ ಸಮಯ ಮತ್ತು ಕೈತಪ್ಪಿ ಹೋದ ಅವಕಾಶ ಇವು ಎಂದಿಗೂ ಮರಳಿ ಬಾರವು ಎಂದು ಎಚ್​ಡಿಕೆ ಹೇಳಿಕೆಗೆ ಟಾಂಗ್ ನೀಡಿದ್ದರು. ಇದೀಗ ಇದೇ ವಿಷಯವಾಗಿ ಎಚ್​ಡಿಕೆ ಅವರು ಸುಧಾಕರ್ ಅವರಿಗೆ ತಿರುಗೇಟು ನೀಡಿದ್ದಾರೆ.

ಕೊಪ್ಪಳ ಜಿಲ್ಲೆಯ ರೈತರೊಬ್ಬರು ವಾರದಿಂದ ಅಲೆದರೂ ಒಂದು ಚೀಲ ಗೊಬ್ಬರ ಸಿಕ್ಕಿಲ್ಲ ಎಂದು ಅಳುತ್ತಿದ್ದರೆ, ಆಸ್ಪತ್ರೆಗಳಲ್ಲಿ ಆಕ್ಸಿಜನ್ ಇಲ್ಲದೇ ರೋಗಿಗಳು ನರಳಾಡುತ್ತಿರುವುದು ಸರ್ಕಾರ ಸಶಕ್ತವಾಗಿರುವ ಲಕ್ಷಣವೋ? ನಿಶಕ್ತವಾಗಿರುವ ಲಕ್ಷಣವೋ? ಎಂದು ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ.

.@mla_sudhakarಹಾಗೆಯೇ, ಮಾಧ್ಯಮ ವರದಿಗಳನ್ನು ಗಮನಿಸುವಷ್ಟು ವ್ಯವಧಾನವಿರದ ನೀವು ಮಾಧ್ಯಮಗಳ ಮುಂದೆ ಕುಳಿತು "ಪೋಜು" ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ ತೋರಿಸಿ. ಕೊರೋನಾ ಸೋಂಕಿನ ವಿಷಯದಲ್ಲಿ ಆರು ತಿಂಗಳಿಂದ ಮಾತಿನ ಮಂಟಪ ಕಟ್ಟಿದರೆ ಹೊರತು ಅನುಷ್ಠಾನದಲ್ಲಿ ಮಕಾಡೆ ಮಲಗಿದ್ದು ರಾಜ್ಯದ ಜನತೆಗೆ ಗೊತ್ತಿದೆ. ಕೊರೋನಾ ಸೋಂಕಿತರು ಬೆಡ್ ಗಳಿಲ್ಲದೆ, ಅಂಬುಲೆನ್ಸ್ ದಕ್ಕದೆ, ಸೂಕ್ತ ವೈದ್ಯಕೀಯ ಚಿಕಿತ್ಸೆಗಾಗಿ ಪರದಾಡುವಾಗ ನಿಮ್ಮ ಸಶಕ್ತತೆ ಎಲ್ಲಿ ಅಡಗಿತ್ತು? ಕೊರೋನಾ ನಿಯಂತ್ರಣಕ್ಕೆ ಎಷ್ಟೊಂದು ಸಚಿವರು? ಕಮೀಷನ್ ದಂಧೆ, ಸಮನ್ವಯದ ಕೊರತೆಯಿಂದ ಬಳಲಿ ಹೈರಾಣಾದಿರಿ ಎಂದು ವ್ಯಂಗ್ಯವಾಗಿ ಪ್ರಶ್ನೆ ಮಾಡಿದ್ದಾರೆ.

ಇದನ್ನು ಓದಿ: ನಾಳೆ ಕೃಷಿ ಸ್ಟಾರ್ಟಪ್ ಸಮ್ಮೇಳನ, ನೂರಕ್ಕೂ ಹೆಚ್ಚು ಕೃಷಿ ಉದ್ದಿಮೆಗಳು, ಹೂಡಿಕೆದಾರರು ಭಾಗಿ; ಕೃಷಿ ಸಚಿವ ಬಿ.ಸಿ.ಪಾಟೀಲ್

ಅಧಿಕಾರ ಇದ್ದಾಗಲೂ ಕೊಟ್ಟ ಮಾತು ಉಳಿಸಿ ಕೊಳ್ಳಲಾಗದವರ ಹಾಗೂ ರೋಗಗ್ರಸ್ತ ಮನಸ್ಸಿನವರ ಬಗ್ಗೆ ನನಗೆ ಮರುಕವಿದೆ. ಪತ್ರಿಕಾಗೋಷ್ಠಿ ಕರೆಯದೆ "ಈ ದಿನ ಪತ್ರಿಕಾಗೋಷ್ಠಿ ಇರುವುದಿಲ್ಲ" ಎಂದು ಸ್ಪಷ್ಟನೆ ನೀಡುವ ಬೌದ್ಧಿಕ ದಾರಿದ್ರ್ಯ ನಿಮ್ಮಂತೆ ನನಗೆ ಬಂದೊದಗಿಲ್ಲ ಎಂದು ಸಚಿವ ಕೆ.ಸುಧಾಕರ್ ಅವರಿಗೆ ಎಚ್​ಡಿಕೆ ಟಾಂಗ್ ನೀಡಿದ್ದಾರೆ.

ನುಡಿಯಲುಬಾರದು ಕೆಟ್ಟನುಡಿಗಳ ನಡೆಯಲುಬಾರದು ಕೆಟ್ಟನಡೆಗಳ ನುಡಿದಡೇನು ನುಡಿಯದಿರ್ದಡೇನು? ಹಿಡಿದವ್ರತ ಬಿಡದಿರಲು ಅದೆ ಮಹಾಜ್ಞಾನದಾಚರಣೆ ಎಂಬೆನು ಅಜಗಣ್ಣ ತಂದೆ - ಮುಕ್ತಾಯಕ್ಕ ಈ ವಚನವನ್ನು ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.
Published by: HR Ramesh
First published: August 20, 2020, 5:21 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading