• Home
  • »
  • News
  • »
  • state
  • »
  • HD Kumaraswamy: ಮೊದಲು ಜನರ ಬದುಕನ್ನು ಕಟ್ಟಲು ನೋಡಿ; ಸಾವರ್ಕರ್ ಮೊಮ್ಮಗನ ಹೇಳಿಕೆಗೆ HDK ಕಿಡಿ

HD Kumaraswamy: ಮೊದಲು ಜನರ ಬದುಕನ್ನು ಕಟ್ಟಲು ನೋಡಿ; ಸಾವರ್ಕರ್ ಮೊಮ್ಮಗನ ಹೇಳಿಕೆಗೆ HDK ಕಿಡಿ

ಎಚ್​ ಡಿ ಕುಮಾರಸ್ವಾಮಿ

ಎಚ್​ ಡಿ ಕುಮಾರಸ್ವಾಮಿ

ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ನನಗೆ ಏನಾಗಬೇಕು. ನನ್ನ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಸಾಯುತ್ತಿದ್ದಾರೆ. ಸಾತ್ಯಕಿ ಯಾರು ಅವರು, ಯಾರು ಆ ಮನುಷ್ಯ? ಅವರಿಗೆ ಏನು ಗೊತ್ತಿದೆ ಎಂದು ಪ್ರಶ್ನಿಸಿದರು.

  • Share this:

ಖಾಸಗಿ ಕಾರ್ಯಕ್ರಮದ ಹಿನ್ನೆಲೆ ಮಡಿಕೇರಿಗೆ (Madikeri) ಆಗಮಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (Former CM HD Kumaraswamy), ಸಚಿವ ವಿ ಸೋಮಣ್ಣ (Minister V Somanna) ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಘಟನೆ ಬಗ್ಗೆ ಪ್ರತಿಕ್ರಿಯಿಸಿದರು. ಇದೇ ವೇಳೆ ವೀರ ಸಾವರ್ಕರ್ ಮೊಮ್ಮಗ ಸಾತ್ಯಕಿ (Veer Savarkar Grand Son Sathyaki) ಹೇಳಿಕೆಗೆ ತಿರುಗೇಟು ನೀಡಿದರು. ಸಚಿವ ಸೋಮಣ್ಣ ಮತ್ತು ಬಿಜೆಪಿಯವರ (BJP) ವಿರುದ್ಧ ಕಿಡಿಕಾರಿದ ಹೆಚ್.ಡಿ.ಕುಮಾರಸ್ವಾಮಿ, ಅದು ಬಿಜೆಪಿಯವರ ಸಂಸ್ಕೃತಿಯನ್ನು ತೋರಿಸುತ್ತದೆ. ಅವರ ನಡವಳಿಕೆಯನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಅವರು ಎರಡು ತರಹದ ಮುಖ ಹೊಂದಿದ್ದಾರೆ. ಎದುರು ಸಿಕ್ಕಾಗ ಒಂದು ರೀತಿ ಮಾತನಾಡಿಸುತ್ತಾರೆ. ಆದರೆ ಒಳಗೆ ಇರುವ ನಡವಳಿಕೆಯೇ ಬೇರೆ ಇದೆ ಎಂದು ಹೇಳಿದರು.


ಸಾರ್ವಜನಿಕರು ಅಹವಾಲು ಕೊಡಲು ಬಂದಾಗ ಅವರು ನಡೆದುಕೊಳ್ಳುವುದೆಲ್ಲಾ ಗೊತ್ತಿದೆ. ಅವರಿಂದ ಒಳ್ಳೆಯ ನಡವಳಿಕೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಬಿಜೆಪಿಯ ಹಲವು ಸಚಿವರು ಹಿಂದೆ ಹೀಗೆ ನಡೆದುಕೊಂಡಿದ್ದು ಗೊತ್ತೇ ಇದೆ ಎಂದು ವಾಗ್ದಾಳಿ ನಡೆಸಿದರು.


ಸಾತ್ಯಕಿ ಯಾರು ಅವರು, ಯಾರು ಆ ಮನುಷ್ಯ?


ಒಂದು ದೇಶ, ಒಂದೇ ಭಾಷೆ ಹಿಂದಿ ಆಗಿರಬೇಕು. ಹಿಂದೂ ರಾಷ್ಟ್ರವಾಗಿರಬೇಕು ಎಂದು ಸಾತ್ಯಕಿ ಸಾವರ್ಕರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ನನಗೆ ಏನಾಗಬೇಕು. ನನ್ನ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಸಾಯುತ್ತಿದ್ದಾರೆ. ಸಾತ್ಯಕಿ ಯಾರು ಅವರು, ಯಾರು ಆ ಮನುಷ್ಯ? ಅವರಿಗೆ ಏನು ಗೊತ್ತಿದೆ ಎಂದು ಪ್ರಶ್ನಿಸಿದರು.


ಮೊದಲು ಜನರ ಬದುಕನ್ನು ಕಟ್ಟಲು ನೋಡಿ. ಕೊಡಗಿನಲ್ಲಿ ಮೂರು ವರ್ಷದಿಂದ ಭೂಕುಸಿತದಿಂದ ಮನೆ, ಬೆಳೆ ಹಾಳಾಗಿದೆ. ಅವರಿಗೆ ಏನು ಕೊಟ್ಟಿದ್ದೀರಿ ಮೊದಲು ಹೇಳಿ ಎಂದು ಕೇಳಿದರು.


ವೀರ ಸಾವರ್ಕರ್ ಮೊಮ್ಮಗ


ಆಮೇಲೆ ನಿಮ್ಮ ಹಿಂದಿ ಭಾಷೆ ಬಗ್ಗೆ ಚರ್ಚೆ ಮಾಡಿ. ಸಾವರ್ಕರ್ ಮಗನೋ, ಮೊಮ್ಮಗನೋ ಇಲ್ಲಿಗೆ ಬಂದು ನಮಗೆ ಬೋಧನೆ ಮಾಡುವುದು ಏನಿದೆ? ಮೊದಲು ಜನರ ಬದುಕನ್ನು ಕಟ್ಟಲು ನೋಡಿ ಎಂದು ತಿರುಗೇಟು ನೀಡಿದರು.


ಆನಂದ್ ಮಾಮನಿ ನಿಧನಕ್ಕೆ ಸಂತಾಪ


ವಿಧಾನಸಭಾ ಉಪ ಸಭಾಪತಿ ಆನಂದ್ ಮಾಮನಿ ನಿಧನಕ್ಕೆ ಹೆಚ್‌ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದರು. ಮಾಮನಿ ಅವರು ಸರಳ ಸಜ್ಜನಿಕೆ, ಸೌಮ್ಯ ವ್ಯಕ್ತಿ. ಚಿಕ್ಕ ವಯಸ್ಸಿನಲ್ಲಿ ಈ ರೀತಿಯ ಸಾವು ಬರಬಾರದಿತ್ತು. ಅವರು ಬಿಜೆಪಿ ಪಕ್ಷಕ್ಕೆ ಸೇರುವುದಕ್ಕೆ ಮುನ್ನ ನಮ್ಮ ಪಕ್ಷದ ಕಾರ್ಯಕರ್ತರಾಗಿದ್ದರು . ಮಾಮನಿ ಅವರ ತಂದೆ ನಮ್ಮ ಪಕ್ಷದ ವತಿಯಿಂದ 97-98ರಲ್ಲಿ ವಿಧಾನಸಭೆ ಸಭಾಪತಿ ಆಗಿದ್ದರು. ದೇವರು ಆ ಕುಟುಂಬಕ್ಕೆ ಮಾಮನಿ ಅಗಲಿಕೆಯ ನೋವನ್ನ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದರು.


ಇದನ್ನೂ ಓದಿ:  V Somanna: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದೇ ತಪ್ಪಾಯ್ತಾ? ಮಹಿಳೆಯ ಕಪಾಳಕ್ಕೆ ಹೊಡೆದ ಸಚಿವ ಸೋಮಣ್ಣ


ಶಿವಮೊಗ್ಗದಲ್ಲಿ ಸಾವರ್ಕರ್ ಸಾಮ್ರಾಜ್ಯ


ಶಿವಮೊಗ್ಗ ನಗರ ಮತ್ತೆ ಕೇಸರಿಮಯವಾಗಿದೆ. ನಗರದ ಸೈನ್ಸ್ ಮೈದಾನದಲ್ಲಿ ನಿನ್ನೆ ‘ಸಾವರ್ಕರ್ ಸಾಮ್ರಾಜ್ಯ’ ಅದ್ಧೂರಿ ಕಾರ್ಯಕ್ರಮ ನಡೆಯಿತು. 1944ರಲ್ಲಿ ಸಾವರ್ಕರ್ ಶಿವಮೊಗ್ಗಕ್ಕೆ ಭೇಟಿ ನೀಡಿದ್ರು. ಇದರ ನೆನಪಿಗಾಗಿ ‘ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ವೀರ ಸಾವರ್ಕರ್, ಮೊಮ್ಮಗ ಸಾತ್ಯಕಿ ಸಾವರ್ಕರ್ ಅವರು ಆಗಮಿಸಿದ್ರು.


ಇದನ್ನೂ ಓದಿ:  Bengaluru Crime News: ಚೆನ್ನಾಗಿ ನೋಡ್ಕೋತ್ತೀನಿ ಎಂದು ಕರ್ಕೊಂಡು ಹೋದ ಗಂಡ: ಗೃಹಿಣಿಯ ಅನುಮಾನಾಸ್ಪದ ಸಾವು


ಕಾರ್ಯಕ್ರಮಕ್ಕೂ ಮುನ್ನ ನಗರದ ಬಸ್ ನಿಲ್ದಾಣದಿಂದ ಸೈನ್ಸ್ ಮೈದಾನದ ವರೆಗೆ ಕಾರು, ಬೈಕ್​​  ಮೆರವಣಿಗೆ ಮಾಡಲಾಯ್ತು. ಈ ವೇಳೆ ಮಾತನಾಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಸಾವರ್ಕರ್ ಫ್ಲೆಕ್ಸ್ ಹರಿದ PFI ಅನ್ನು ಬ್ಯಾನ್ ಮಾಡಲಾಗಿದೆ. ನಮ್ಮ ತಂಟೆಗೆ ಬಂದ್ರೆ ಸುಮ್ಮನೆ ಬಿಡಲ್ಲ ಅಂತ ಗುಡುಗಿದ್ರು.


ವೀರ ಸಾವರ್ಕರ್ ಮೊಮ್ಮಗ


ಇನ್ನು ಸಾವರ್ಕರ್ ಮೊಮ್ಮಗ ಸಾತ್ಯಕಿ ಸಾವರ್ಕರ್ ಮಾತನಾಡಿದ್ದು, ಹಿಂದೂಗಳು ಒಗ್ಗಟ್ಟಾಗಿರಬೇಕೆಂಬುದು ಸಾವರ್ಕರ್ ಅವರ ಕನಸಾಗಿತ್ತು. ಅವರ ಹಿಂದುತ್ವವೇ ನಮಗೇ ಪ್ರೇರಣೆ ಅಂತ ಹೇಳಿದರು.

Published by:Mahmadrafik K
First published: