H D Kumaraswamy: ಅಧಿವೇಶನದಲ್ಲಿ ಬಿಜೆಪಿ ಸರ್ಕಾರದ ಅತಿದೊಡ್ಡ ಹಗರಣ ಬಯಲಿಗೆಳೆಯುವೆ; ಎಚ್​ಡಿಕೆ ಹೊಸ ಬಾಂಬ್​

ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ಕೊಡಿ ಎಂದು ಹಲವು ಬಾರಿ ಕೆಣಕಿದ್ದಾರೆ. ಸಾವಿರಾರು ಕೋಟಿ ಬೆಲೆಬಾಳುವ ಸರ್ಕಾರಿ ಆಸ್ತಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ಹೊರಟ ಅತಿದೊಡ್ಡ ಅಕ್ರಮದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಎಚ್‌.ಡಿ. ಕುಮಾರಸ್ವಾಮಿ (ಸಂಗ್ರಹ ಚಿತ್ರ)

ಎಚ್‌.ಡಿ. ಕುಮಾರಸ್ವಾಮಿ (ಸಂಗ್ರಹ ಚಿತ್ರ)

  • Share this:
ಬೆಂಗಳೂರು (ಸೆ.12): ಇಂದಿನಿಂದ ವಿಧಾನಸಭೆ ಜಂಟಿ ಕಲಾಪ (Assembly Joint Session) ಶುರುವಾಗಿದೆ. 10 ದಿನಗಳ ಕಾಲ ನಡೆಯುವ ಅಧಿವೇಶನ ಕಾಂಗ್ರೆಸ್ (Congress)​, ಬಿಜೆಪಿ (BJP) ಹಾಗೂ ಜೆಡಿಎಸ್​ ಮಧ್ಯೆ ಗಲಾಟೆ, ಗದ್ದಲ, ವಾಕ್ಸಮರಕ್ಕೆ ಸಾಕ್ಷಿಯಾಗಲಿದೆ. 10 ದಿನಗಳ ಅಧಿವೇಶನದಲ್ಲಿ (Session) ಆರೋಪ-ಪ್ರತ್ಯಾರೋಪಕ್ಕೆ ಬೇಕಾದ ಅಸ್ತ್ರಗಳನ್ನ ಕಾಂಗ್ರೆಸ್​​-ಜೆಡಿಎಸ್​-ಬಿಜೆಪಿ ರೆಡಿ ಮಾಡಿಕೊಂಡಿವೆ. ಸರ್ಕಾರದ ವಿರುದ್ಧ ಕಾಂಗ್ರೆಸ್ 40% ಕಮಿಷನ್ (Commission Allegation)​​ ದಂಧೆ, PSI ನೇಮಕಾತಿ ಹಗರಣ (PSI Scam), ಬೆಂಗಳೂರು ನೆರೆಹಾನಿ (Bengaluru Flood) ಬಗ್ಗೆಯೂ ಪ್ರಸ್ತಾಪಿಸುವ ಸಾಧ್ಯತೆಯಿದೆ. ಇದೀಗ ಅಧಿವೇಶನದಲ್ಲಿ  ಕುಮಾರಸ್ವಾಮಿ ಬಿಜೆಪಿ ಸರ್ಕಾರದ ಬಹುದೊಡ್ಡ ಹಗರಣ ಬಯಲಿಗೆಳೆಯೋದಾಗಿ ಹೇಳಿದ್ದಾರೆ. 

ಹೊಸ ಬಾಂಬ್​ ಸಿಡಿಸಿದ ಎಚ್.ಡಿ ಕುಮಾರಸ್ವಾಮಿ

ರಾಜ್ಯ ಸರ್ಕಾರದ ಅತಿದೊಡ್ಡ ಹಗರಣವನ್ನು ವಿಧಾನಸಭೆ ಕಲಾಪದಲ್ಲಿ ಬಹಿರಂಗಪಡಿಸುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್​ ಸಿಡಿಸಿದ್ದಾರೆ. ವಿಧಾನಸೌಧದ ಜೆಡಿಎಸ್‍ ಕಚೇರಿಯಲ್ಲಿ ಇಂದು ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿದೆ.

ಅತಿದೊಡ್ಡ ಅಕ್ರಮದ ಬಗ್ಗೆ ದಾಖಲೆ ಬಿಡುಗಡೆ ಮಾಡುವೆ

ಸಭೆ ಬಳಿಕ ಮಾತಾಡಿದ ಕುಮಾರಸ್ವಾಮಿ ಅವರು, ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ಕೊಡಿ ಎಂದು ಹಲವು ಬಾರಿ ಕೆಣಕಿದ್ದಾರೆ. ಸಾವಿರಾರು ಕೋಟಿ ಬೆಲೆಬಾಳುವ ಸರ್ಕಾರಿ ಆಸ್ತಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ಹೊರಟ ಅತಿದೊಡ್ಡ ಅಕ್ರಮದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದಾರೆ.

DK Shivakumar, HD Kumaraswamy Dosti on Kempegowda Jayanti
ಡಿಕೆ ಶಿವಕುಮಾರ್​, ಕುಮಾರಸ್ವಾಮಿ


ಇದು ಜಸ್ಟ್​ ಸ್ಯಾಂಪಲ್​ ಅಷ್ಟೆ- ಎಚ್​ಡಿಕೆ 

ಬಿಜೆಪಿ ಹಗರಣ ಬಯಲಿಗೆಳೆಯಲು ಒಂದಾಗಿದ್ಯಾ ಜೆಡಿಎಸ್​, ಕಾಂಗ್ರೆಸ್​ ಅನ್ನೋ ಪ್ರಶ್ನೆ ಉದ್ಬವವಾಗಿದೆ. ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆ ಮಾಡಲು‌‌ ಕಾಂಗ್ರೆಸ್ ಪಕ್ಷ ಸಹಕರಿಸಬೇಕು. ಈ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನರಿಗೆ ಗೊತ್ತಾಗಬೇಕು. ನಾನು ಈ ದಾಖಲೆಗಳನ್ನು ಬಿಡುಗಡೆ ಮಾಡುತ್ತಿರುವುದು ಈ ಸರ್ಕಾರದ ಹಗರಣಗಳ ಒಂದು ಸ್ಯಾಂಪಲ್ ಮಾತ್ರ. ಇದನ್ನು ಬಿಜೆಪಿಯವರು ಅರಗಿಸಿಕೊಳ್ಳಲಿ ಸಾಕು ಎಂದು ಎಚ್​​ಡಿಕೆ ಗುಡುಗಿದರು.

ಇದನ್ನೂ ಓದಿ:  Rajakaluve: ರಾಜಕಾಲುವೆ ಒತ್ತುವರಿ ತೆರವಿಗೆ ಮುಂದಾದ ಬಿಬಿಎಂಪಿ; ದಿಢೀರ್ ಹೇಳಿಕೆ ಬದಲಿಸಿದ ಆಯುಕ್ತರು

ಮಳೆಯಿಂದ ಭಾರೀ ನಷ್ಟವಾಗಿದೆ

ನಾನು ಸುಖಾಸುಮ್ಮನೆ ಸದನದ ಸಮಯ ಹಾಳು ಮಾಡುವುದಿಲ್ಲ. ಇವತ್ತಿನ ಜೆಡಿಎಸ್‍ ಶಾಸಕಾಂಗ ಪಕ್ಷದ ಸಭೆಯಲ್ಲಿಯೂ ಈ ವಿಷಯ ಸೇರಿ ಹಲವಾರು ವಿಚಾರವಾಗಿ ಚರ್ಚೆ ಮಾಡಲಾಗಿದೆ. ರಾಜ್ಯದಲ್ಲಿ ಇತ್ತೀಚೆಗೆ ಬೆಂಗಳೂರು ನಗರ ಸೇರಿ 22 ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿದೆ. ಇದರಿಂದ ದೊಡ್ಡ ಮಟ್ಟದ ನಷ್ಟವಾಗಿದೆ ಎಂದು ಹೇಳಿದರು.

ಅಧಿವೇಶನ ವೇಳೆಯೇ ಕಾಂಗ್ರೆಸ್‌ನಿಂದ ವಿಡಿಯೋ ಬಾಂಬ್

ವಿಧಾನಮಂಡಲ ಅಧಿವೇಶನದ ಮೊದಲ ದಿನವೇ ಸರ್ಕಾರದ ವಿರುದ್ಧ ವಿಡಿಯೋ ಅಸ್ತ್ರವನ್ನು ಪ್ರಯೋಗಿಸಿದೆ. ಕಳೆದ ಎರಡು ದಿನಗಳ ಹಿಂದೆ ಬಿಜೆಪಿ ಶಾಸಕ ಬಸವರಾಜ್ ದಡೇಸುಗೂರು ಅವರ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಲೀಕ್ ಆಗಿತ್ತು. ಈ ಆಡಿಯೋದಲ್ಲಿ ಪಿಎಸ್​​ಐ ಹುದ್ದೆಗಾಗಿ ಹಣಕ್ಕೆ ಬೇಡಿಕೆ ಇರಿಸಲಾಗಿದೆ.

ಇದನ್ನೂ ಓದಿ:  BJP vs Congress: ನಿಮ್ಮನ್ನು ಖೆಡ್ಡಾಕ್ಕೆ ಬೀಳಿಸಲು ತುದಿಗಾಲಲ್ಲಿ ನಿಂತಿದ್ದಾರೆ ಡಿಕೆಶಿ, ಖರ್ಗೆ, ಪರಮೇಶ್ವರ್‌: ಬಿಜೆಪಿ ಟ್ವೀಟ್

ಬಿಜೆಪಿ ಶಾಸಕರ ಮೇಲೆ ಡೀಲ್​ ಆರೋಪ

ಪಿಎಸ್‌ಐ ಹಗರಣ ಸಂಬಂಧ ಬಿಜೆಪಿ ಶಾಸಕ ಬಸವರಾಜ ದಡೇಸುಗೂರು ಡೀಲ್ ಮಾಡಿದ್ದಾರೆ ಅಂತ ಕಾಂಗ್ರೆಸ್ ಆರೋಪಿಸಿದೆ. ಇದಕ್ಕೆ ಸಾಕ್ಷ್ಯ ಇದೆ ಎಂದು ಹೇಳಿರುವ ಕಾಂಗ್ರೆಸ್ ನಾಯಕ ಶಿವರಾಜ್ ತಂಗಡಗಿ, ಪ್ರಿಯಾಂಕ್ ಖರ್ಗೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ.  ಶಾಸಕರೇ ಆಡಿಯೋ ನನ್ನದೇ ಅಂತ ಒಪ್ಪಿಕೊಂಡಿದ್ದಾರೆ. ಇಷ್ಟಾದ್ರೂ ಸುಮೊಟೋ ಕೇಸ್ ಯಾಕೆ ಹಾಕಿಲ್ಲ? ಶಾಸಕರನ್ನು ಕರೆಯಿಸಿ ಯಾಕೆ ಮಾತನಾಡಿಲ್ಲ ಎಂದು ಕಾಂಗ್ರೆಸ್ ನಾಯಕರು ಸರ್ಕಾರವನ್ನು (BJP Government) ಪ್ರಶ್ನೆ ಮಾಡಿದ್ದಾರೆ.
Published by:ಪಾವನ ಎಚ್ ಎಸ್
First published: