HOME » NEWS » State » HD KUMARASWAMY SAYS HD DEVE GOWDA WILL FILE NOMINATION FOR RAJYA SABHA ELECTION TOMORROW SNVS

ರಾಜ್ಯಸಭಾ ಚುನಾವಣೆಗೆ ದೇವೇಗೌಡರಿಂದ ನಾಳೆ ನಾಮಪತ್ರ: ಹೆಚ್​ಡಿಕೆ ಟ್ವೀಟ್

ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿ ಮೇರೆಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

news18
Updated:June 8, 2020, 12:25 PM IST
ರಾಜ್ಯಸಭಾ ಚುನಾವಣೆಗೆ ದೇವೇಗೌಡರಿಂದ ನಾಳೆ ನಾಮಪತ್ರ: ಹೆಚ್​ಡಿಕೆ ಟ್ವೀಟ್
ದೇವೇಗೌಡರ ಜೊತೆ ಸಿದ್ದರಾಮಯ್ಯ
  • News18
  • Last Updated: June 8, 2020, 12:25 PM IST
  • Share this:
ಬೆಂಗಳೂರು(ಜೂನ್ 09): ಹಿಂಬಾಗಿಲ ಮೂಲಕ ವಿಧಾನಸಭೆ ಅಥವಾ ಸಂಸತನ್ನು ಪ್ರವೇಶಿಸಲು ಇಚ್ಛಿಸದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮುಂಬರುವ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಅನುಮಾನ ಎನ್ನಲಾಗುತ್ತಿತ್ತು. ಆದರೆ, ಕುಮಾರಸ್ವಾಮಿ ಅವರು ಈ ಅನುಮಾನಗಳನ್ನು ಬಗೆಹರಿಸುವ ಟ್ವೀಟ್​ಗಳನ್ನು ಮಾಡಿದ್ಧಾರೆ. ಹೆಚ್.ಡಿ. ದೇವೇಗೌಡರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೆಚ್​ಡಿಕೆ ತಮ್ಮ ಟ್ವೀಟ್​ನಲ್ಲಿ ಸ್ಪಷ್ಟಪಡಿಸಿದ್ದಾರೆ.

“ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನ ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರನ್ನು ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ. ಆದರೆ, ಎಲ್ಲರ ಆಶೋತ್ತರಗಳಿಗೆ ಪ್ರೀತಿಪೂರ್ವಕವಾಗಿ ಮಣಿದಿದ್ದಾರೆ” ಎಂದು ಕುಮಾರಸ್ವಾಮಿ ಮೊದಲ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

“ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿ ಮೇರೆಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ನಾಳೆ ಅವರು ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡುವರು. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳು” ಎಂದು ಹೆಚ್.ಡಿ.ಕೆ. ಎರಡನೇ ಟ್ವೀಟ್​ನಲ್ಲಿ ಹೇಳಿಕೆ ನೀಡಿದ್ಧಾರೆ.

ಇದನ್ನೂ ಓದಿ: ಖರ್ಗೆಯವರನ್ನು ಅಭ್ಯರ್ಥಿಯಾಗಿಸಿದ್ದೇವೆ, ಕಾಂಗ್ರೆಸ್​ನಿಂದ ಎರಡನೇ ಅಭ್ಯರ್ಥಿ ಹಾಕಲ್ಲ; ಸಿದ್ದರಾಮಯ್ಯಕರ್ನಾಟಕದಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇದರಲ್ಲಿ ಬಿಜೆಪಿಗೆ 2 ಸ್ಥಾನ ದಕ್ಕುವುದು ಖಚಿತವಿದೆ. ಇನ್ನುಳಿದ ಎರಡು ಸ್ಥಾನಗಳನ್ನ ಕಾಂಗ್ರೆಸ್ ಮತ್ತು ಜೆಡಿಎಸ್ ಹಂಚಿಕೊಳ್ಳಲಿವೆ. ಕಾಂಗ್ರೆಸ್​ನಿಂದ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಲಿದ್ದಾರೆ. ಜೂನ್ 19ರಂದು ಚುನಾವಣೆ ನಡೆಯಲಿದೆ.

Youtube Video
First published: June 8, 2020, 12:17 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories