HDK, ಸಿದ್ದರಾಮಯ್ಯ ಸೇರಿ 61 ಮಂದಿಗೆ ಜೀವ ಬೆದರಿಕೆ ಪತ್ರ! ಅಪರಿಚಿತರು ಬರೆದ ಲೆಟರ್‌ನಲ್ಲಿ ಏನಿದೆ ಗೊತ್ತಾ?

ಹಿಬಾಜ್‌ ವಿವಾದದಲ್ಲಿ ಬೆಂಬಲ ನೀಡಿದ್ದ ಸಾಹಿತಿಗಳು, ಹೋರಾಟಗಾರರ ಜೊತೆಗೆ ಎಚ್‌ಡಿಕೆ ಹಾಗೂ ಸಿದ್ದರಾಮಯ್ಯ ಅವರ ಹೆಸರು ಸೇರಿದಂತೆ 61 ಮಂದಿ ಹೆಸರನ್ನು ಜೀವ ಬೆದರಿಕೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಎಚ್‌ಡಿಕೆ-ಸಿದ್ದರಾಮಯ್ಯ ಸಂಗ್ರಹ ಚಿತ್ರ

ಎಚ್‌ಡಿಕೆ-ಸಿದ್ದರಾಮಯ್ಯ ಸಂಗ್ರಹ ಚಿತ್ರ

  • Share this:
ಮಾಜಿ ಸಿಎಂಗಳಾದ (Ex-CM) ಎಚ್.ಡಿ. ಕುಮಾರಸ್ವಾಮಿ (H.D. Kumaraswamy), ಸಿದ್ದರಾಮಯ್ಯ (Siddaramaiah) ಸೇರಿದಂತೆ ಒಟ್ಟು 61 ಮಂದಿಗೆ ಜೀವ ಬೆದರಿಕೆ ಪತ್ರ (Life threatening letter) ಬಂದಿದೆ. ಬಳ್ಳಾರಿಯ (Bellary) ಕೊಟ್ಟೂರಿನಲ್ಲಿರುವ ಸಾಹಿತಿ ಕುಂ. ವೀರಭದ್ರಪ್ಪ ಅವರ ನಿವಾಸಕ್ಕೆ ಈ ಜೀವ ಬೆದರಿಕೆ ಪತ್ರ ತಲುಪಿದೆ. ಹಿಬಾಜ್‌ ವಿವಾದದಲ್ಲಿ (Hijab Controversy) ಬೆಂಬಲ ನೀಡಿದ ಸಾಹಿತಿಗಳು, ಹೋರಾಟಗಾರರ ಜೊತೆಗೆ ಎಚ್‌ಡಿಕೆ ಹಾಗೂ ಸಿದ್ದರಾಮಯ್ಯ ಅವರ ಹೆಸರು ಸೇರಿದಂತೆ 61 ಮಂದಿ ಹೆಸರನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. “ನಿಮ್ಮ ಸರ್ವನಾಶ ನಿಶ್ಚಿತ. ನಿಮ್ಮೆಲ್ಲರ ಸಾವು ಹತ್ತಿರವಿದೆ. ಅದು ಯಾವ ರೂಪದಲ್ಲಾದರೂ ಬರಬಹುದು. ಅದಕ್ಕೆ ಸಿದ್ಧರಾಗಿ, ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಿ” ಅಂತ ಪತ್ರದಲ್ಲಿ ಬೆದರಿಕೆ ಹಾಕಲಾಗಿದೆ.

 ಜೀವ ಬೆದರಿಕೆ ಪತ್ರ ಬಂದಿದ್ದು ಎಲ್ಲಿಂದ?

 ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಿಂದ ಪತ್ರ ಪೋಸ್ಟ್‌ ಮಾಡಲಾಗಿದೆ ಎನ್ನಲಾಗಿದೆ. ಪತ್ರದಲ್ಲಿ ಆ ಪತ್ರ ಬರೆದವರ ವಿವರ, ಅಡ್ರೆಸ್ ಯಾವುದೂ ನಮೂದಿಸಿಲ್ಲ. ಇನ್ನು ‘ಸಹಿಷ್ಣು ಹಿಂದು’ ಎಂದಷ್ಟೇ ಪತ್ರದೊಳಗೆ ಉಲ್ಲೇಖಿಸಲಾಗಿದೆ.

ಜೀವ ಬೆದರಿಕೆ ಪತ್ರದಲ್ಲಿ ಏನಿದೆ?

‘ಕುಂ. ವೀರಭದ್ರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ಹಾಗೂ 61 ಜನ ಎಡಬಿಡಂಗಿ ಬುದ್ಧಿಜೀವಿ ಸಾಹಿತಿಗಳಿಗೇ..  ಹಿಜಾಬ್‌, ಮುಸ್ಲಿಮರ ಪರವಾಗಿ, ಭಗವದ್ಗೀತೆ ವಿರುದ್ಧವಾಗಿ ಸರ್ಕಾರಕ್ಕೆ ಪತ್ರ ಬರೆದಿದ್ದೀರಿ. ನೀವು ನಮ್ಮ ದೇಶದ ಅನ್ನ ಉಂಡು, ದೇಶದ ಗಾಳಿ ತೆಗೆದುಕೊಂಡು ದೇಶಕ್ಕೆ ದ್ರೋಹ ಬಗೆಯುತ್ತಿದ್ದೀರಿ. ನಿಮ್ಮ ಸರ್ವನಾಶ ನಿಶ್ಚಿತ. ನಿಮ್ಮೆಲ್ಲರ ಸಾವು ಹತ್ತಿರವಿದೆ. ಅದು ಯಾವ ರೂಪದಲ್ಲಾದರೂ ಬರಬಹುದು. ಅದಕ್ಕೆ ಸಿದ್ಧರಾಗಿ. ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಿ’ ಅಂತ ಪತ್ರದಲ್ಲಿ ಬೆದರಿಕೆ ಹಾಕಲಾಗಿದೆ.

ಇದನ್ನೂ ಓದಿ: Ananth Kumar Hegde: ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಡ್ತಾರಾ ಅನಂತ್ ಕುಮಾರ್ ಹೆಗಡೆ? ಶುರುವಾಗಿದೆ ಹೊಸ ಚರ್ಚೆ!

ಮಾಜಿ ಮುಖ್ಯಮಂತ್ರಿ, ಸಾಹಿತಿಗಳ ವಿರುದ್ಧ ಟೀಕೆ

ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಇಬ್ಬರನ್ನೂ ಟೀಕಿಸಲಾಗಿದೆ. ಜೊತೆಗೆ ಕುಂ. ವೀರಭದ್ರಪ್ಪ ಸೇರಿ ಹಲವು ಸಾಹಿತಿಗಳನ್ನೂ ಟೀಕಿಸಲಾಗಿದೆ. ಸರ್ಕಾರಕ್ಕೆ ಪತ್ರ ಬರೆದ 61+ ಎಡಬಿಡಂಗಿ ಸಾಹಿತಿಗಳು ಅಂತ ಉಲ್ಲೇಖಿಸಲಾಗಿದೆ.

ಜೀವ ಬೆದರಿಕೆ ಪತ್ರ


ಭದ್ರತೆ ನೀಡುವಂತೆ ಎಚ್‌ಡಿಕೆ ಆಗ್ರಹ

61 ಮಂದಿಗೆ ಬಂದಿರುವ ಜೀವ ಬೆದರಿಕೆ ಪತ್ರವನ್ನು ಗಂಭೀರವಾಗಿ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಇಂತಹ ಬೆದರಿಕೆ ಪತ್ರವನ್ನು ಲಘುವಾಗಿ ಪರಿಗಣಿಸಬೇಡಿ. ಕುಂ.ವೀರಭದ್ರಪ್ಪ ಸೇರಿ ಜೀವ ಬೆದರಿಕೆ ಒಡ್ಡಲಾಗಿರುವ ಎಲ್ಲ ಸಾಹಿತಿಗಳಿಗೆ ತಕ್ಷಣವೇ ಸರಕಾರವು ರಕ್ಷಣೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

“ನನಗೆ ಅಂಜಿಕೆ ಇಲ್ಲ, ನಾನು ದೇವರನ್ನು ನಂಬುತ್ತೇನೆ”

ನನಗೆ ಈ ವಿಚಾರದಲ್ಲಿ ಅಂಜಿಕೆ ಇಲ್ಲ ಅಂತ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ದೇವರನ್ನು ನಾನು ನಂಬಿರುವೆ. ನನ್ನ ನಿಲುವಿನಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಅಂಜಿ ಸತ್ಯವನ್ನು ಮರೆಮಾಚಲಾರೆ. ಹಣೆಯಲ್ಲಿ ಬರೆದಿರುವುದನ್ನು ತಿದ್ದಲು ಇವರಿಂದ ಆಗುವುದಿಲ್ಲ ಎಂದಿದ್ದಾರೆ. ನೇರವಾಗಿ ಮಾತನಾಡುತ್ತಿದ್ದರು ಎಂಬ ಕಾರಣಕ್ಕೆ ಎಂ ಎಂ ಕಲಬುರ್ಗಿ ಸೇರಿ ಕೆಲವರನ್ನು ಹತ್ಯೆ ಮಾಡಿದ ಉದಾಹರಣೆ ನಮ್ಮ ಮುಂದೆ ಇದೆ. ರಾಜ್ಯದಲ್ಲಿ ಮತ್ತೆ ಅಂಥ ಘಟನೆಗಳು ಮರುಕಳಿಸಬಾರದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: C.T.Ravi: ಹೋಲಿಕೆ ಮಾಡುವುದಾದರೆ ಕಾಂಗ್ರೆಸ್-ಅಲ್​​​ಖೈದಾ ಮಧ್ಯೆ ಹೋಲಿಕೆ ಮಾಡಿಕೊಳ್ಳಲಿ: ಸಿ.ಟಿ.ರವಿ

ಭದ್ರತೆ ನೀಡುವಂತೆ ಕುಂ. ವೀರಭದ್ರಪ್ಪ ಮನವಿ

ಇನ್ನು ತಮಗೆ ಭದ್ರತೆ ನೀಡುವಂತೆ ಸಾಹಿತಿ ಕುಂ. ವೀರಭದ್ರಪ್ಪ ಮನವಿ ಮಾಡಿದ್ದಾರೆ.  ‘ಮೊದಲಿನಿಂದಲೂ ನನಗೆ ಬೆದರಿಕೆ ಕರೆಗಳು ಬರುತ್ತಿದ್ದವು. ಈಗ ನನ್ನ ಸೇರಿದಂತೆ 61 ಜನರನ್ನು ಉಲ್ಲೇಖಿಸಿ ಪತ್ರ ಬರೆಯಲಾಗಿದೆ. ಇದನ್ನು ಗಂಭೀರವಾಗಿ ತೆಗೆದುಕೊಂಡಿರುವೆ. ಈ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ಕೊಡಲು ನಿರ್ಧರಿಸಿರುವೆ. ಈಗಾಗಲೇ ಕೊಟ್ಟೂರು ಪೊಲೀಸ್‌ ಇನ್‌ಸ್ಪೆಕ್ಟರ್‌ ನನಗೆ ಕರೆ ಮಾಡಿ, ಭದ್ರತೆ ಕೊಡುವುದಾಗಿ ತಿಳಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.
Published by:Annappa Achari
First published: