ಹಿಜಾಬ್, ಕೇಸರಿ ಶಾಲು, ಶಿವಮೊಗ್ಗ ಕೊಲೆಯ ಟೂಲ್ ಕಿಟ್ ರೂವಾರಿಗಳು ಯಾರು? HD Kumaraswamy ಪ್ರಶ್ನೆ

ʼನಾನು ಹೊಡೆದಂಗೆ ಮಾಡುತ್ತೇನೆ, ನೀನು ಅತ್ತಂಗೆ ಮಾಡುʼ ಎನ್ನುವಂತೆ ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಕುಮ್ಮಕ್ಕಾಗಿ ʼಕಲಾಪಕ್ಕೆ ಕುಣಿಕೆʼ ಬಿಗಿದು ಜನರ ಆಶೋತ್ತರಗಳನ್ನು ಸದನದಲ್ಲೇ ಸಮಾಧಿ ಮಾಡಿದವು ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ

ಹೆಚ್ ಡಿ ಕುಮಾರಸ್ವಾಮಿ

  • Share this:
ರಾಜ್ಯದಲ್ಲಿ ಉಂಟಾಗಿರುವ ಹಿಜಾಬ್ ಸಂಘರ್ಷ (Karnataka Hijab Row) ಮತ್ತು ಶಿವಮೊಗ್ಗದಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತ ಹರ್ಷನ ಕೊಲೆಯ (Shivamogga Murder Case) ಕುರಿತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (Former CM HD Kumaraswamy) ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಕೃತಾರ್ಥವಾಗುತ್ತಿದೆ. ರಾಷ್ಟ್ರೀಯ ಪಕ್ಷಗಳೆರಡೂ (National Political Party Congress And BJP) ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ ಇಟ್ಟು ʼವಿಕೃತ ಕೇಕೆʼ ಹಾಕುತ್ತಿವೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಶಿಕ್ಷಣದ ಕಾಶಿ ಕರ್ನಾಟಕದ ಶಾಲೆ-ಕಾಲೇಜುಗಳಲ್ಲಿ ಸಂಘರ್ಷದ ವಾತಾವರಣ ಸೃಷ್ಟಿಸಿ ಮಕ್ಕಳಲ್ಲಿ ದ್ವೇಷದ ವಿಷವುಕ್ಕಿಸಲಾಗುತ್ತಿದೆ. ಎರಡು  ವರ್ಷದಿಂದ ಕೋವಿಡ್‌ ಹೊಡೆತದಿಂದ ಮಲಗಿರುವ ವಿದ್ಯಾರಂಗವನ್ನು ಸರ್ವನಾಶ ಮಾಡುವ ಹುನ್ನಾರವಷ್ಟೇ ಇದು. ಬಡವರ ಮಕ್ಕಳು ಓದಿ ವಿದ್ಯಾವಂತರಾಗಬಾರದೇ ಎಂದು ಪ್ರಶ್ನೆ ಮಾಡಿದ್ದಾರೆ.

ಕಲಾಪ ಆಪೋಶನಕ್ಕೆ HDK ಆಕ್ರೋಶ

ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯಾದ್ಯಂತ ʼರಾಜಕೀಯ ಕೊರೊನಾʼವನ್ನು ಹಬ್ಬಿಸುತ್ತಿವೆ. ಆ ಮೂಲಕ ಜನರ ಮನಸ್ಸುಗಳನ್ನು ಹಾಳು ಮಾಡುತ್ತಿವೆ. ಈ ಮಹಾಮಾರಿಗೆ ಲಸಿಕೆ ಇಲ್ಲ. ಜನರು ಈ ಹುನ್ನಾರವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು. ಅಧಿಕೃತ ಪ್ರತಿಪಕ್ಷದ ಸ್ವಪ್ರತಿಷ್ಠೆ, ಆಡಳಿತ ಪಕ್ಷದ ಅಸಮರ್ಥತೆಗೆ ವಿಧಾನ ಕಲಾಪ ಆಪೋಶನವಾಯಿತು. ʼನಾನು ಹೊಡೆದಂಗೆ ಮಾಡುತ್ತೇನೆ, ನೀನು ಅತ್ತಂಗೆ ಮಾಡುʼ ಎನ್ನುವಂತೆ ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಕುಮ್ಮಕ್ಕಾಗಿ ʼಕಲಾಪಕ್ಕೆ ಕುಣಿಕೆʼ ಬಿಗಿದು ಜನರ ಆಶೋತ್ತರಗಳನ್ನು ಸದನದಲ್ಲೇ ಸಮಾಧಿ ಮಾಡಿದವು ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ:  ಇದು ರೀಲ್ ಅಲ್ಲ, ರಿಯಲ್ 'Jogi' ಕಥೆ! "ಎಲ್ಲಿದ್ದೀಯೋ ಕೂಸೇ" ಅಂತ ಮಗನನ್ನು ಹುಡುಕುತ್ತಿದ್ದಾಳೆ ಈ ತಾಯಿ

ನಿಗದಿತ ವೇಳಾಪಟ್ಟಿಗಿಂತ 3 ದಿನ ಮೊದಲೇ ಮುಗಿದ ಅಧಿವೇಶನದಲ್ಲಿ ಆರೂವರೆ ಕೋಟಿ ಕನ್ನಡಿಗರಿಗೆ ಸೊನ್ನೆ ಸುತ್ತಲಾಗಿದೆ. ಜನಪ್ರತಿನಿಧಿಗಳ ಕೇವಲ ಟಿಎ-ಡಿಎಗಾಗಿ ಮತ್ತು ವೇತನ, ಭತ್ಯೆ ಏರಿಸಿಕೊಳ್ಳಲಷ್ಟೇ ಅಧಿವೇಶನ ನಡೆದಿದೆ. ಜನರು ಏನೆಂದುಕೊಂಡಾರು? ಎಂಬ ಕನಿಷ್ಠ ಭಯವೂ ಇಲ್ಲದ ʼಆತ್ಮವಂಚನೆಯ ಪರಾಕಾಷ್ಠೆʼ ಇದು.

ಈ ಟೂಲ್ ಕಿಟ್ ರೂವಾರಿಗಳು ಯಾರು?

ಹಿಜಾಬ್, ಕೇಸರಿ ಶಾಲು ಮತ್ತು ಶಿವಮೊಗ್ಗದಲ್ಲಿ ನಡೆದ ಯುವಕನ ಕೊಲೆ... ಇವೆಲ್ಲಾ ಯಾರಿಂದ ಯಾರಿಗಾಗಿ ನಡೆಯುತ್ತಿವೆ? ಈ ʼಟೂಲ್ʼಕಿಟ್ʼ ರೂವಾರಿಗಳು ಯಾರು? ಅಧಿವೇಶನವನ್ನು ಹಳ್ಳ ಹಿಡಿಸಿದ್ದಕ್ಕೂ ಈ ಎಲ್ಲಾ ಪ್ರತಿಗಾಮಿ ಘಟನೆಗಳಿಗೆ ಸಂಬಂಧ ಇದೆ ಎನ್ನುವ ಅನುಮಾನ ನನ್ನದು. ಸತ್ಯವೇನೆಂಬುದು ಜನರಿಗೆ ಗೊತ್ತಾಗಬೇಕು.ಸಾವಿನ ಮನೆಯಲ್ಲಿ ಮತಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ. ಶಾಂತಿಯನ್ನು ಕದಡಿದ ಪಾಪ ಸುಮ್ಮನೆ ಬಿಡುವುದಿಲ್ಲ. ಹಚ್ಚಹಸರಿನ ನಿರ್ಮಲ ಮಲೆನಾಡಿನಲ್ಲಿ ಹೊತ್ತಿ ಉರಿಯುತ್ತಿರುವ ʼದ್ವೇಷದಳ್ಳುರಿʼ ಇಡೀ ರಾಜ್ಯಕ್ಕೇ ಶಾಪವಾಗಿ ಪರಿಣಮಿಸಲಿದೆ.

ರಾಜ್ಯಪಾಲರ ಯಾರ ಕೈಗೊಂಬೆ ಆಗಬಾರದು

ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಬೇಕು. ಅವರು ಯಾರ ಕೈಗೊಂಬೆಯೂ ಆಗಬಾರದು ಎಂದು ನಾನು ಮತ್ತೊಮ್ಮೆ ಆಗ್ರಹಿಸುತ್ತಿದ್ದೇನೆ. ಶಾಂತಿ-ಭದ್ರತೆ ನಿರ್ವಹಣೆಯಲ್ಲಿ ವಿಫಲವಾಗಿರುವ ಸರಕಾರಕ್ಕೆ ರಾಜ್ಯಪಾಲರು ಕಿವಿ ಹಿಂಡಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

JDSನಿಂದ ಕಲಾಪಕ್ಕೆ ಅಡ್ಡಿಯಾದ ಉದಾಹರಣ ಇಲ್ಲ

ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ,  ಅಧಿವೇಶನ ರಾಜ್ಯಪಾಲರ‌ ಭಾಷಣಕ್ಕೆ‌ ಸೀಮಿತವಾಯ್ತು. ಜೆಡಿಎಸ್‌ ನಿಂದ ಸದನ ಕಲಾಪಕ್ಕೆ ಅಡ್ಡಿಯಾದ ಉದಾಹರಣೆ ಇಲ್ಲ. ಹಿಂದೆ‌ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಸಹಕರಿಸಿದ್ದೆವು. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕಲ್ಲಪ್ಪ, ಗಣಪತಿ ಸಾವು ಸೇರಿದಂತೆ ಹಲವಾರು ಪ್ರಕರಣ ಬಂದವು. ಆದರೂ ನಾವು ಕಲಾಪ ನಡೆಯಲು ಸಹಕರಿಸಿದೆವು‌ ಎಂದು ಹೇಳಿದರು.

ಇತಿಹಾಸ ಇರುವ ಕಾಂಗ್ರೆಸ್ ಅಂತಾರೆ. ಹೋರಾಟ ಮಾಡಿದ ಹಿಂದಿನ ಕಾಂಗ್ರೆಸ್ ನಾಯಕರು ಬೇರೆ. ಈಗಿರುವ ಕಾಂಗ್ರೆಸ್‌‌ ನಾಯಕರೇ ಬೇರೆ. ಇವರಿಗೆ ವಿಶೇಷವಾದ ಬಹುಮಾನ ಇದ್ರೆ ಕೊಟ್ಟುಬಿಡಿ ಎಂದು ವ್ಯಂಗ್ಯ ಮಾಡಿದರು.

ಇದನ್ನೂ ಓದಿ:  JP Naddaಗೆ ಅಭಿನಂದನೆ ಸಲ್ಲಿಸಿ, HDK ಬಳಿ ಟ್ರೈನಿಂಗ್ ತೊಗೊಳೋದಾಗಿ ಹೇಳಿದ DK Shivakumar

ನಿಮ್ಮನ್ನು ಕಲ್ಲಿನ ಮಕ್ಕಳು ಅಂತಾರೆ

ಮೇಕೆದಾಟು ಎರಡನೇ ಹಂತದ ಪಾದಯಾತ್ರೆ ಈಗ ಯಾಕೆ? ನೀವೆ ಮಣ್ಣಿನ ಮಕ್ಕಳೆಂದು ಬೋರ್ಡ್ ಹಾಕೊಂಡು ಹೋಗಿ ನಾವೆಂದು ಮಣ್ಣಿನ‌ಮಕ್ಕಳು ಅಂತ ಹೇಳಿಕೊಂಡಿಲ್ಲ. ನಿಮಗೆ ಕಲ್ಲಿನ ಮಕ್ಕಳು ಅಂತ ಕರೆಯುತ್ತಾರೆ. ಈಗೇನೋ ಮಣ್ಣಿನ ಮಕ್ಕಳು ಅಂತ ಬಿಂಬಿಸಿಕೊಳ್ಳಲು ಹೋಗ್ತಿದ್ದೀರ, ಬೋರ್ಡ್ ಹಾಕಿಕೊಳ್ಳಿ ಎಂದು ಡಿಕೆ ಸೋದರರಿಗೆ ಟಾಂಗ್ ನೀಡಿದರು.
Published by:Mahmadrafik K
First published: