ಸಿದ್ದರಾಮಯ್ಯ ಯಾರನ್ನ ಭೇಟಿ ಮಾಡ್ತಾರೋ ಅದನ್ನ ಕಟ್ಕೊಂಡು ನನಗೇನು? HD Kumaraswamy

ಬಹಳಷ್ಟು ಜನ ಮುಖಂಡರು ಜೆಡಿಎಸ್ ನಲ್ಲಿ ಬೆಳೆದಿದ್ದಾರೆ . ನಂತರ ಪಕ್ಷವನ್ನ ಬಿಟ್ಟು ಹೋಗಿದ್ದಾರೆ. ಜೆಡಿಎಸ್ ಕಾರ್ಯಕರ್ತರಿಗೆ ಮುಖಂಡರನ್ನ ಬೆಳೆಸೋ ಶಕ್ತಿಯಿದೆ. 2023ಕ್ಕೆ ಜೆಡಿಎಸ್ ಶಕ್ತಿ ಏನೆಂದು ತಿಳಿಯಲಿದೆ ಎಂದು ತಿರುಗೇಟು ನೀಡಿದರು.

ಎಚ್​.ಡಿ.ಕುಮಾರಸ್ವಾಮಿ

ಎಚ್​.ಡಿ.ಕುಮಾರಸ್ವಾಮಿ

  • Share this:
 ಇಂದು ರಾಮನಗರದ ಚನ್ನಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ(HD Kumaraswamy),  ಜೆಡಿಎಸ್ ರೆಬಲ್ ಲೀಡರ್ (JDS Rebel Leaders)  ಗಳಿಗೆ ಟಾಂಗ್ ನೀಡಿದರು. ಸಿ.ಎಸ್.ಪುಟ್ಟರಾಜು (CS Puttaraju)ಹಾಗೂ ಇತರೆ ಜೆಡಿಎಸ್ ನಾಯಕರು ಸಿದ್ದರಾಮಯ್ಯ (Siddaramaiah) ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಇದು ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಯಾರನ್ನ ಭೇಟಿ ಮಾಡ್ತಾರೋ ಅದನ್ನ ಕಟ್ಟಿಕೊಂಡು ನನಗೇನು? ಯಾರು ಯಾರನ್ನ ಬೇಕಾದರೂ ಭೇಟಿ ಮಾಡಬಹುದು, ಚರ್ಚೆ ಮಾಡಬಹುದು. ನನಗೆ ನನ್ನ ಪಕ್ಷ, ಕಾರ್ಯಕರ್ತರು, ಜನ ಮುಖ್ಯ. ಕಾರ್ಯಕರ್ತರಿದ್ದರೆ ಅಷ್ಟೇ ಮುಖಂಡರು ಬೆಳೆಯೋದು. ಕಾರ್ಯಕರ್ತರಿಂದ ಮುಖಂಡರು ಉದ್ಭವ ಆಗ್ತಾರೆ ಎಂದರು.

ಬಹಳಷ್ಟು ಜನ ಮುಖಂಡರು ಜೆಡಿಎಸ್ ನಲ್ಲಿ ಬೆಳೆದಿದ್ದಾರೆ . ನಂತರ ಪಕ್ಷವನ್ನ ಬಿಟ್ಟು ಹೋಗಿದ್ದಾರೆ. ಜೆಡಿಎಸ್ ಕಾರ್ಯಕರ್ತರಿಗೆ ಮುಖಂಡರನ್ನ ಬೆಳೆಸೋ ಶಕ್ತಿಯಿದೆ. 2023ಕ್ಕೆ ಜೆಡಿಎಸ್ ಶಕ್ತಿ ಏನೆಂದು ತಿಳಿಯಲಿದೆ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ತೊರೆದಿರುವ ಸಿ.ಎಂ.ಇಬ್ರಾಹಿಂ ಜೆಡಿಎಸ್ ಸೇರ್ತಾರ ಪ್ರಶ್ನೆಗೆ ಉತ್ತರಿಸಿದರ. ಅವರು ನಮಗೆ ಹಳಬರು, ದೇವೇಗೌಡರ ಗರಡಿಯಲ್ಲಿ ಬೆಳೆದವರು. ನಾನು ಸಿದ್ದರಾಮಯ್ಯ ಜೊತೆ ಹೋಗಿ ದೇವೇಗೌಡರನ್ನ ದೂರ ಮಾಡಿಕೊಂಡೆ. ಅವರ ಕೊನೆ ಆಸೆಯಂತೆ ಮುಂದಿನ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು. ಹಾಗಾಗಿ ನಾನು ಜೆಡಿಎಸ್ ಸೇರ್ತೇನೆಂದು ಹೇಳಿದ್ದಾರೆ. ಅವರನ್ನು ಪಕ್ಷಕ್ಕೆ ಸ್ವಾಗತ ಮಾಡಿಕೊಳ್ಳುತ್ತೇವೆ ಎಂದರು.

ಡಿ.ಕೆ.ಬ್ರದರ್ಸ್ ವಿರುದ್ಧ ವಾಗ್ದಾಳಿ

ನಾನು ಡಿಕೆ ಬ್ರದರ್ಸ್ ಅವರನ್ನು ಟಾರ್ಗೆಟ್ ಮಾಡ್ತಿಲ್ಲ, ನನಗೂ ಅವರಿಗೂ ಸಂಬಂಧ ಇಲ್ಲ. ಆದರೆ ನನ್ನನ್ನ ಅವರು ಟಾರ್ಗೆಟ್ ಮಾಡಿದ್ದಾರೆ. ಅವರು ಕುಮಾರಸ್ವಾಮಿನ ರಾಮನಗರದಿಂದ ಖಾಲಿ ಮಾಡಿಸಬೇಕಂತೆ. ನನ್ನನ್ನ ಖಾಲಿ ಮಾಡಿಸಲು ಆಗುತ್ತ, ಅವರಿಗೆ ಗೊತ್ತಿಲ್ಲ. ರಾಮನಗರ ಜಿಲ್ಲೆಗೂ ನನಗೂ ಇರುವ ಸಂಬಂಧ ಸಾವಿರಾರು ಬಾರಿ ಹೇಳಿದ್ದೇನೆ. ನನಗೂ ಈ ಜಿಲ್ಲೆಗೂ ತಾಯಿ ಮಗನ ಸಂಬಂಧ ಇದೆ. ಅವರು ಹಣದ ಮೂಲಕ, ದಬ್ಬಾಳಿಕೆ ಮೂಲಕ ಕುಮಾರಸ್ವಾಮಿ ನ ಬಗ್ಗುಬಡಿಯಲು ಇನ್ನು ಹತ್ತು ಜನ್ಮ ಎತ್ತಿ ಬರಬೇಕು ಎಂದು ಗುಡುಗಿದರು.

ಇದನ್ನೂ ಓದಿ:  D.K. Shivakumar: ಇಬ್ರಾಹಿಂ ಬಹಳ ಸೀನಿಯರ್ ಲೀಡರ್ - ಮಾತನಾಡಿ ಎಲ್ಲಾ ಸಮಸ್ಯೆ ಬಗೆಹರಿಸಲಾಗುವುದು ಎಂದ ಡಿಕೆಶಿ


ಈ ಜಿಲ್ಲೆಯ ಜನರಿಗೂ ದೇವೇಗೌಡರ ಕುಟುಂಬಕ್ಕೆ ಪೂರ್ವ ಜನ್ಮದ ಸಂಬಂಧ ಇದೆ. ಪಾದಯಾತ್ರೆ ಬಳಿಕ ಜೆಡಿಎಸ್ ಭದ್ರಕೋಟೆ ಛಿದ್ರ ಆಗತ್ತೆ ಅಂತ ಹೇಳ್ತಿದ್ದಾರೆ. ಇಲ್ಲಿಂದಲೇ ಮತ್ತೆ ಪಾದಯಾತ್ರೆ ಪ್ರಾರಂಭ ಮಾಡ್ತೇವೆ ಎಂದಿದ್ದಾರೆ. ಇನ್ನು ಹತ್ತು‌ ಪಾದಯಾತ್ರೆ ಮಾಡಲಿ ಎಂದು ಸವಾಲು ಹಾಕಿದರು.

ಇದು ದುರಂಹಕಾರದ ಮಾತಲ್ಲ. ಅವರ ನಡವಳಿಕೆಗಳನ್ನ‌ ಅರ್ಥ ಮಾಡಕೊಂಡಿದ್ದೇನೆ. ಈ ಜಿಲ್ಲೆಯ ಜನರನ್ನ ಗೆಲ್ಲೋದು ಅಷ್ಟು ಸುಲಭವಲ್ಲ. ಪ್ರೀತಿ, ವಿಶ್ವಾಸ, ದುಡಿಮೆ ಇದ್ದರಷ್ಟೇ ಜಿಲ್ಲೆಯಲ್ಲಿ ಉಳಿಯಲು ಸಾಧ್ಯ. ಹಣಕ್ಕೆ, ವ್ಯಾಮೋಹಕ್ಕೆ ಇಲ್ಲಿ ಬೆಲೆ ಸಿಗಲ್ಲ ಎಂದರು.

ಸರ್ಕಾರದ ಕಾರ್ಯವೈಖರಿ ಬಗ್ಗೆ ಜನರು ತೀರ್ಮಾನ ಮಾಡ್ತಾರೆ, ಇನ್ನು 1 ವರ್ಷ ಇದೆ, ಅದರ ಬಗ್ಗೆ ನಾನೇಕೆ ಹೇಳಲಿ. ಅವರು ಈಗಾಗಲೇ ದೊಡ್ಡ ದೊಡ್ಡ ಜಾಹಿರಾತುಗಳ ಮೂಲಕ ಅವರ ಪ್ರಚಾರ ಪಡೆಯುತ್ತಿದ್ದಾರೆ. ಆದರೆ ಜನ ಸಾಮಾನ್ಯರ ಪರಿಸ್ಥಿತಿ ಬಗ್ಗೆ ಯಾರು ನೋಡ್ತಿಲ್ಲ. ಈ 6 ತಿಂಗಳು ಸರ್ಕಾರ ಇತ್ತು ಅನ್ನೋ ಭಾವನೆ ಜನರಲ್ಲಿ ಇಲ್ಲ ಎಂದರು,

2023 ಕ್ಕೆ ಯಾರ ಜೊತೆಗೂ ಮೈತ್ರಿ ಇಲ್ಲ

2023ರಲ್ಲಿ ಯಾರ ಜೊತೆಯೂ ಮೈತ್ರಿ ಇಲ್ಲ. 123 ಸ್ಥಾನಗಳನ್ನ ಗೆಲ್ಲುವ ವಿಶ್ವಾಸವಿದ್ದು, ಅದಕ್ಕೆ ಇನ್ನು 1 ವರ್ಷ 2 ತಿಂಗಳು ಅವಕಾಶ ಇದೆ. ಕೋವಿಡ್ ವಾತವರಣ ಮುಗಿದ ನಂತರ ಮುಂದಿನ 1 ವರ್ಷ ಪಕ್ಷ ಸಂಘಟನೆ ಮಾಡ್ತೇವೆ. ರಾಜ್ಯಾದ್ಯಂತ ಪ್ರವಾಸ ಮಾಡ್ತೇವೆ, ಜೆಡಿಎಸ್ ಮುಗಿದೇ ಹೋಯ್ತು ಅನ್ನೋರಿಗೆ ಜನ ಉತ್ತರ ಕೊಡ್ತಾರೆ ಎಂದು ಹೇಳಿದರು.

BSY ಮೊಮ್ಮಗಳ ಆತ್ಮಹತ್ಯೆ HDK ಸಂತಾಪ

ಯಡಿಯೂರಪ್ಪನವರು ತುಂಬಾ ಆತ್ಮೀಯ, ಭಾವನಾತ್ಮಕ ಸಂಬಂಧ ಉಳ್ಳವರು. ಅವರ ಕುಟುಂಬದಲ್ಲಿ ಇವತ್ತು ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಯಾವ ಕುಟುಂಬದಲ್ಲಿಯೂ ನಡೆಯಬಾರದು. ಇದು ಅತ್ಯಂತ ಕೆಟ್ಟ ಸುದ್ದಿ, ಅವರಿಗೆ ಈ ದುಖ ಭರಿಸುವ ಶಕ್ತಿಯನ್ನ ಭಗವಂತ ಕೊಡಲಿ ಎಂದು ಸಂತಾಪ ಸೂಚಿಸಿದರು.

ಇದನ್ನೂ ಓದಿ:  BSY: ಆತ್ಮಹತ್ಯೆಗೆ ಶರಣಾದ ಮಾಜಿ ಸಿಎಂ ಬಿಎಸ್​ವೈ ಮೊಮ್ಮಗಳು

ಸಿಎಂ ಇಬ್ರಾಹಿಂ ಕಾಂಗ್ರೆಸ್ ಬಿಡಲ್ಲ ಅಂದ್ರು ಸಿದ್ದರಾಮಯ್ಯ

ಸಿಎಂ ಇಬ್ರಾಹಿಂ ಕಾಂಗ್ರೆಸ್ ಬಿಡಲ್ಲ, ಬೇರೆ ಪಕ್ಷಕ್ಕೆ ಹೋಗಲ್ಲ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.  ಇಬ್ರಾಹಿಂ ನನ್ನ ಆಪ್ತ ಸ್ನೇಹಿತ, ನನಗೆ ಇಬ್ರಾಹಿಂ ಬಗ್ಗೆ ಗೊತ್ತಿದೆ. ಇಬ್ರಾಹಿಂ ನನ್ನನ್ನು ಮಾತನಾಡಲು ಕರೆಯುತ್ತಾನೆ.  ಈ ಹಿಂದೆ ಇಬ್ರಾಹಿಂ ನಿವಾಸಕ್ಕೆ ಬಹಳಷ್ಟು ಬಾರಿ ಹೋಗಿದ್ದೇನೆ. ನನಗಾಗಿಯೇ ಸ್ಪೆಷಲ್ ಬಿರಿಯಾನಿ ಮಾಡಿಸಿತ್ತಾನೆ. ಈ ಬಾರಿಯೂ ಬಿರಿಯಾನಿ ತಿನ್ನಲು ಕರೆಯುತ್ತಾನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Published by:Mahmadrafik K
First published: