‘ನನ್ನ ಮತ್ತು ಡಿ.ಕೆ ಶಿವಕುಮಾರ್​​​​ ಮಧ್ಯೆ ಹುಳಿ ಹಿಂಡುವವರ ನಾಟಕ ಫಲಿಸದು‘ - ಎಚ್​​.ಡಿ ಕುಮಾರಸ್ವಾಮಿ

ತನ್ನ ಬೇಳೆ ಬೇಯಿಸಿಕೊಳ್ಳಲು ಮಸಾಲೆ ಅರೆಯುತ್ತಿರುವ ವ್ಯಕ್ತಿಯ ಕುತಂತ್ರ ರಾಜಕಾರಣಕ್ಕೆ ರಾಮನಗರ ಜಿಲ್ಲೆಯ ಜನತೆ ಸೊಪ್ಪು ಹಾಕುವುದಿಲ್ಲ ಎನ್ನುವ ಮೂಲಕ ಎಚ್​​ಡಿಕೆ ನೂತನ ಬಿಜೆಪಿ ಎಂಎಲ್​​ಸಿ ಸಿಪಿ ಯೋಗೇಶ್ವರ್​​ಗೆ ನೇರವಾಗಿ ತಿರುಗೇಟು ನೀಡಿದರು.

news18-kannada
Updated:July 30, 2020, 7:45 PM IST
‘ನನ್ನ ಮತ್ತು ಡಿ.ಕೆ ಶಿವಕುಮಾರ್​​​​ ಮಧ್ಯೆ ಹುಳಿ ಹಿಂಡುವವರ ನಾಟಕ ಫಲಿಸದು‘ - ಎಚ್​​.ಡಿ ಕುಮಾರಸ್ವಾಮಿ
ಯೋಗೇಶ್ವರ್​, ಎಚ್​ಡಿಕೆ, ಡಿಕೆಎಸ್​
  • Share this:
ಬೆಂಗಳೂರು(ಜು.30): ನಾನು ಅಡ್ಜಸ್ಟ್​ಮೆಂಟ್​​ ರಾಜಕಾರಣವನ್ನು ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡಲ್ಲ. ಡಿ.ಕೆ. ಶಿವಕುಮಾರ್ ಮತ್ತು ನನ್ನ ನಡುವಣ ರಾಜಕಾರಣವೇ ಬೇರೆ, ವೈಯಕ್ತಿಕ ವಿಶ್ವಾಸವೇ ಬೇರೆ. ಹಿಂಬಾಗಿಲ ರಾಜಕಾರಣದ ಮೂಲಕ ನೆಲೆ ಕಂಡುಕೊಂಡವರಿಂದ ಯಾವುದೇ ಡ್ಯಾಮೇಜ್ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿ ಬಿಜೆಪಿ ನಾಯಕರ ವಿರುದ್ಧ ಸರಣಿ ಟ್ವೀಟ್​​ ಮೂಲಕ ದಾಳಿ ನಡೆಸಿದ್ಧಾರೆ.


ಡಿ.ಕೆ ಶಿವಕುಮಾರ್ ಮತ್ತು ನಮ್ಮ ನಡುವಣ ಹಿಂದಿನ ಹಾಗೂ ಇಂದಿನ ರಾಜಕಾರಣ ಬೇರೆ. ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಎಲ್ಲರೂ ಒಂದು ಗುರಿ ಇಟ್ಟು ಕೊಂಡೆ ದುಡಿಮೆ ಮಾಡುತ್ತಾರೆ. ಈ ಮಧ್ಯೆ ಹುಳಿ ಹಿಂಡುವವರ ನಾಟಕ ಫಲಿಸದು ಎಂದು ಮತ್ತೊಂದು ಟ್ವೀಟ್​​ನಲ್ಲಿ ಎಚ್​​ಡಿಕೆ ಕುಟುಕಿದ್ದಾರೆ.

ತನ್ನ ಬೇಳೆ ಬೇಯಿಸಿಕೊಳ್ಳಲು ಮಸಾಲೆ ಅರೆಯುತ್ತಿರುವ ವ್ಯಕ್ತಿಯ ಕುತಂತ್ರ ರಾಜಕಾರಣಕ್ಕೆ ರಾಮನಗರ ಜಿಲ್ಲೆಯ ಜನತೆ ಸೊಪ್ಪು ಹಾಕುವುದಿಲ್ಲ ಎನ್ನುವ ಮೂಲಕ ಎಚ್​​ಡಿಕೆ ನೂತನ ಬಿಜೆಪಿ ಎಂಎಲ್​​ಸಿ ಸಿಪಿ ಯೋಗೇಶ್ವರ್​​ಗೆ ನೇರವಾಗಿ ತಿರುಗೇಟು ನೀಡಿದರು.

ನೆರೆಹಾವಳಿ, ಕೊರೋನಾ ಸಂಕಷ್ಟ ಸಮಯದಲ್ಲಿ ರಾಜಕಾರಣ ಬಿಟ್ಟು ರಾಜ್ಯದ ಜನತೆಯ ಹಿತಕಾಯುವ ದೃಷ್ಟಿಯಿಂದ ಸರ್ಕಾರಕ್ಕೆ ಬೆಂಬಲ ಇದೆ. ಹೀಗೆ ಎಂದಾಕ್ಷಣ ಅದನ್ನು ತಮ್ಮ ಮೂಗಿನ ನೇರಕ್ಕೆ ವ್ಯಾಖ್ಯಾನಿಸುವ ಕೀಳು ಅಭಿರುಚಿಯ ಹೇಳಿಕೆ ನೀಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದರು.

ತನಗೆ ಮುನಿದವರಿಗೆ ತಾ ಮುನಿಯಲೇಕಯ್ಯಾ? ತನಗಾದ ಆಗೇನು? ಅವರಿಗಾದ ಚೇಗೆಯೇನು? ತನುವಿನ ಕೋಪ ತನ್ನ ಹಿರಿಯತನದ ಕೇಡು. ಮನದ ಕೋಪ ತನ್ನ ಅರಿವಿನ ಕೇಡು. ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆಮನೆಯಸುಡದು, ಕೂಡಲಸಂಗಮದೇವಾ ಎಂದು ಎಚ್​​ಡಿಕೆ ವ್ಯಂಗ್ಯವಾಡಿದರು.
ಇದನ್ನೂ ಓದಿ: ಎಚ್​ಡಿ ಕುಮಾರಸ್ವಾಮಿ ಮತ್ತು ಡಿಕೆಶಿವಕುಮಾರ್​​ ಬಿಜೆಪಿ ಸೇರುವಂತೆ ಬಹಿರಂಗ ಆಹ್ವಾನ ನೀಡಿದ ಸಿಪಿ ಯೋಗೇಶ್ವರ್

ಈ ಮುನ್ನ ಡಿ.ಕೆ ಶಿವಕುಮಾರ್ ಹಾಗೂ ಎಚ್.ಡಿ ಕುಮಾರಸ್ವಾಮಿ ಅನುಕೂಲ ರಾಜಕಾರಣಿಗಳು.ಇಷ್ಟು ದಿನ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಬಂದಿದ್ದರು. ಈಗ ಇಬ್ಬರಿಗೂ ಅಸ್ತಿತ್ವದ ಪ್ರಶ್ನೆಯಾಗಿದೆ. ಹೀಗಾಗಿ ಒಬ್ಬರ ಮೇಲೊಬ್ಬರು ಆರೋಪ ಮಾಡುತ್ತಿದ್ದಾರೆ. ಕುಮಾರಸ್ವಾಮಿಯವರಿಗೆ ಈಗ ಅಸ್ತಿತ್ವದ ಪ್ರಶ್ನೆ ಆಗಿರುವುದರಿಂದ ಮಾತನಾಡುತ್ತಿದ್ದಾರೆ. ಅವರ ಮಾತುಗಳನ್ನು ಮೇಲ್ನೋಟಕ್ಕೆ ನೋಡಿದರೆ ಬಿಜೆಪಿಗೆ ಬೆಂಬಲ ಕೊಡುತ್ತಿದ್ದಾರೆ ಎಂಬಂತೆ ಕಾಣಿಸುತ್ತಿದೆ. ನಮ್ಮ ಸರ್ಕಾರದಲ್ಲಿ ಕುಮಾರಸ್ವಾಮಿ ಹೇಳಿರುವ ಎಲ್ಲ ಕೆಲಸಗಳು ನಡೆಯುತ್ತಿವೆ. ಅವರು ಸೂಚಿಸಿದ ಅಧಿಕಾರಿಗಳನ್ನು ವರ್ಗಾವಣೆ ಮಾಡಿಕೊಡಲಾಗುತ್ತಿದೆ. ಹೀಗಾಗಿ ಅವರೂ ಬಿಜೆಪಿಗೆ ಸಫೋರ್ಟ್ ಮಾಡಲು ಮುಂದಾಗಿದ್ದಾರೆ ಎಂದು ನೂತನ ಬಿಜೆಪಿ ಎಂಎಲ್​​ಸಿ ಸಿಪಿ ಯೋಗೇಶ್ವರ್​​​ ಎಚ್​​​ಡಿಕೆ ಮತ್ತು ಡಿಕೆಶಿ ವಿರುದ್ಧ ಕಿಡಿಕಾರಿದ್ದರು.
Published by: Ganesh Nachikethu
First published: July 30, 2020, 7:43 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading