"BJP ಅಂದರೆ ಬಲ್ಲಿದ ಜನರ ಪಕ್ಷ"! ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸರಣಿ ಟ್ವೀಟ್

ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಗುಡುಗಿದ್ದಾರೆ. ಹಲವು ವಿಚಾರಗಳಲ್ಲಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು, "ಬಿಜೆಪಿ ಅಂದರೆ ಭಾರತೀಯ ಜನತಾ ಪಾರ್ಟಿಯಲ್ಲ, ಬದಲಾಗಿ ಬಲ್ಲಿದ ಜನರ ಪಕ್ಷ" ಅಂತ ವ್ಯಂಗ್ಯವಾಡಿದ್ದಾರೆ. 

ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ

ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ

  • Share this:
ಬೆಂಗಳೂರು: ಮಾಜಿ ಸಿಎಂ (Ex CM) ಎಚ್‌.ಡಿ. ಕುಮಾರಸ್ವಾಮಿ (H.D. Kumaraswamy) ರಾಜ್ಯ ಬಿಜೆಪಿ (State BJP) ಹಾಗೂ ರಾಜ್ಯ ಸರ್ಕಾರದ (State Government) ವಿರುದ್ಧ ಮತ್ತೆ ಗರಂ ಆಗಿದ್ದಾರೆ. ಹಲಾಲ್ ಕಟ್ (Halal Cut) ಹಾಗೂ ಜಟ್ಕಾ ಕಟ್ (Jhatka Cut) ವಿವಾದ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಬಿಸಿ ಸೇರಿದಂತೆ ಹಲವು ವಿಚಾರಗಳಲ್ಲಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸರಣಿ ಟ್ವೀಟ್ (Tweet) ಮಾಡಿರುವ ಅವರು, ಬಿಜೆಪಿ ಅಂದರೆ ಭಾರತೀಯ ಜನತಾ ಪಾರ್ಟಿಯಲ್ಲ ಬದಲಾಗಿ ಬಲ್ಲಿದ ಜನರ ಪಕ್ಷ ಅಂತ ವ್ಯಂಗ್ಯವಾಡಿದ್ದಾರೆ.  ಹಲಾಲ್ ಹಾಲಾಹಲದ ನಡುವೆಯೇ ಇಂದು ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ. ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ; 13 ದಿನಗಳಲ್ಲಿ 8 ರೂ. ಜಿಗಿತ! ಇದಪ್ಪಾ ʼಬಹುಜನ ಹಿತಾಯ, ಬಹುಜನ ಸುಖಾಯʼ ಎಂದು ಭಾಷಣ ಬಿಗಿಯುವ ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್!! ಅಂತ ವ್ಯಂಗ್ಯವಾಡಿದ್ದಾರೆ.

“ಪೆಟ್ರೋಲ್ ದರ ಏರಿಕೆಗೆ ಅಂದು ಕೂಗಾಡಿದ್ದರು”

2018ರಲ್ಲಿ ನಾನು ಸಿಎಂ ಆಗಿದ್ದಾಗ ಸಾಲ ಮನ್ನಾಕ್ಕಾಗಿ ಪೆಟ್ರೋಲ್ ಲೀಟರಿಗೆ 1.12 ಪೈಸೆ, & ಡೀಸೆಲ್ ಬೆಲೆಯಲ್ಲಿ ಲೀಟರಿಗೆ 1.14 ಪೈಸೆ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿ ನಾಯಕರು ಕೂಗಾಡಿ ಗಲಾಟೆ ಎಬ್ಬಿಸಿದ್ದರು. ಬೆಲೆ ಹೆಚ್ಚಳದ ಈ ಹಣ ರೈತರಿಗೆ ಹೋಗಿಬಿಡುತ್ತದಲ್ಲ ಎಂದು ಅವರ ಹೊಟ್ಟೆ ಉರಿದುಹೋಯಿತು ಅಂತ ಎಚ್‌ಡಿಕೆ ವ್ಯಂಗ್ಯವಾಡಿದ್ದಾರೆ.

“ಬಿಜೆಪಿಗರು ಈಗೇಕೆ ಮೌನವಾಗಿದ್ದಾರೆ?”

ಹಾದಿಬೀದಿಯಲ್ಲಿ ಖಾಲಿ ಸಿಲಿಂಡರುಗಳನ್ನು ಹೊತ್ತ ಬಿಜೆಪಿಗರು ಈಗೇಕೆ ಮೌನಕ್ಕೆ ಶರಣಗಾಗಿದ್ದಾರೆ? ಬೆಲೆ ಏರಿಕೆಯಿಂದ ಬಡವರ ಹೊಟ್ಟೆ ಉರಿದರೆ ನಿಮಗೆ ಖುಷಿಯಾ? ಬನ್ನಿ, ಬೀದಿಗೆ ಬಂದು ಪ್ರತಿಭಟನೆ ಮಾಡಿ, ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಅಂತ ಎಚ್‌ಡಿಕೆ ಕಾಲೆಳೆದಿದ್ದಾರೆ.

ಇದನ್ನೂ ಓದಿ: #LuckyDipCM, ವಚನಭ್ರಷ್ಟ: ಕುಮಾರಸ್ವಾಮಿ ವಿರುದ್ಧ ಬಿಜೆಪಿ ಸರಣಿ ಟ್ವೀಟ್ ದಾಳಿ

 “ಬಡವನ ಜೇಬು ಖಾಲಿಯಾಗುತ್ತಿದೆ”

ಮುಂದುವರೆದು ಟ್ವೀಟ್ ಮಾಡಿರುವ ಅವರು, ಸಿಮೆಂಟ್, ಕಬ್ಬಿಣ, ಆಹಾರ ಪದಾರ್ಥ ಸೇರಿ ಸಾಮಾನ್ಯ ವ್ಯಕ್ತಿ ಬಳಸುವ ಪ್ರತಿ ವಸ್ತುವಿನ ಬೆಲೆ ನಿತ್ಯವೂ ಜಿಗಿಯುತ್ತಿದೆ. ಶ್ರೀಸಾಮಾನ್ಯನು ಮನೆ ಕಟ್ಟುವ ಕನಸು ಇನ್ನು ಬರೀ ಕನಸೇ. ಅವನ ಜೇಬು ಖಾಲಿಯಾಗುತ್ತಿದೆ, ಕೆಲವರ ಜೇಬು ತುಂಬುತ್ತಿದೆ ಅಂತ ಕಿಡಿಕಾರಿ್ದದಾರೆ.

“ಮೌನಂ ಶರಣಂ ಗಚ್ಛಾಮಿ” ಅಂತ ಎಚ್‌ಡಿಕೆ ವ್ಯಂಗ್ಯ!

ಹಿಜಾಬ್, ಕೇಸರಿ ಶಾಲು, ಟಿಪ್ಪು ಪಠ್ಯ, ಮುಸ್ಲಿಂ ವರ್ತಕರಿಗೆ ನಿಷೇಧ, ಹಲಾಲ್ ಕಟ್ ಬಗ್ಗೆ ಅಬ್ಬರಿಸಿ ಬೊಬ್ಬಿರಿಯುವ ʼಶ್ರೀಮಂತರ ಪಕ್ಷ ಬಿಜೆಪಿʼಯು ಬೆಲೆ ಏರಿಕೆ ಬಗ್ಗೆ ಮಾತ್ರ ಮೌನವಾಗಿದೆ! ರಾಜ್ಯ ಸರಕಾರವೂ ಮೌನ, ಮುಖ್ಯಮಂತ್ರಿಗಳೂ ಮೌನ!, ಮೌನಂ ಶರಣಂ ಗಚ್ಛಾಮಿ ಮೌನಿ ಪಕ್ಷ! ಮೌನಿ ಸರಕಾರ! ಮೌನಿ ಮುಖ್ಯಮಂತ್ರಿ!!! ಡಾ.ಮನಮೋಹನ್ ಸಿಂಗ್ ಅವರನ್ನು ʼಮೌನಿ ಪ್ರಧಾನಿʼ ಎಂದ ಇವರ ಅಬ್ಬರ ಎಲ್ಲಿ ಉಡುಗಿ ಹೋಗಿದೆ? ದನಿಯೆತ್ತಿ ಬೆಲೆ ಏರಿಕೆ ವಿರುದ್ಧ. ಇದು ನನ್ನ ಆಗ್ರಹ ಅಂತ ಹೇಳಿದ್ದಾರೆ.





ಸದಾನಂದ ಗೌಡರ ವಿರುದ್ಧ ಎಚ್‌ಡಿಕೆ ಆಕ್ರೋಶ

ಘನವೇತ್ತ ಮಾಜಿ ಸಿಎಮ್ಮು, ಮಾಜಿ ಕೇಂದ್ರಮಂತ್ರಿಗಳೂ ಡಿ.ವಿ.ಸದಾನಂದಗೌಡರು, ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರಕಾರ ಕಾರಣ ಎಂದಿದ್ದಾರೆ. 8 ವರ್ಷವಾದರೂ ಯುಪಿಎ ಮಾಡಿದ ತಪ್ಪು ಸರಿ ಮಾಡಲಿಲ್ಲ, ಏಕೆ? ಅಡುಗೆ ಮನೆಗಳಲ್ಲಿ ತಾಯಂದಿರು, ʼಬೆಲೆ ಏರಿಕೆ ಬೆಂಕಿʼಯಲ್ಲಿ ಬೇಯುತ್ತಿದ್ದರೆ ನಿಮಗೆ ರಾಜಕೀಯ ಮುಖ್ಯವಾಗಿದೆ. ನಾಚಿಕೆಯಾಗಬೇಕು ಅಂತ ಎಚ್‌ಡಿಕೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಎಂದಿನಂತೆ ಯುಗಾದಿ, ವರ್ಷತೊಡಕು ಆಚರಿಸಿ, ಇವರ ಸೋಗಲಾಡಿತನಕ್ಕೆ ಇತಿಶ್ರೀ ಹಾಡೋಣ: HD Kumaraswamy ಕರೆ

"ಬಿಜೆಪಿ ಎಂದರೆ ಬಲ್ಲಿದ ಜನರ ಪಕ್ಷ"

ಬಿಜೆಪಿ ಎಂದರೆ ಭಾರತೀಯ ಜನತಾ ಪಕ್ಷವಲ್ಲ, ಬಡವರ ರಕ್ತಹೀರಿ ಸಿರಿವಂತರ ಖಜಾನೆ ಭರ್ತಿ ಮಾಡುವ ʼಬಲ್ಲಿದ ಜನರ ಪಕ್ಷʼ. ಬೆಲೆ ಶೂಲದಿಂದ ಬಡಜನರನ್ನು ಬರ್ಬಾದ್ ಮಾಡುತ್ತಿರುವ ಪಕ್ಷ ಅಂತ ಸರಣಿ ಟ್ವೀಟ್ ಮೂಲಕ ಎಚ್‌ಡಿಕೆ ಆಕ್ರೋಶ ಹೊರಹಾಕಿದ್ದಾರೆ.
Published by:Annappa Achari
First published: