H.D Kumaraswamy: ಶಾಲಾ ಪಠ್ಯವನ್ನು 'ಪಕ್ಷಪುಸ್ತಕ'ಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರಕ್ಕೆ ನನ್ನ ಧಿಕ್ಕಾರ

ಮಹಾನ್‌ ರಾಷ್ಟ್ರಪ್ರೇಮಿ, ಬ್ರಿಟೀಷರಿಗೆ ಸಿಂಹಸ್ವಪ್ನ, ಭಾರತಮಾತೆಯ ಹೆಮ್ಮೆಯ ಪುತ್ರ ಸರ್ದಾರ್‌ ಭಗತ್‌ ಸಿಂಗ್‌ ಅವರ ಪಠ್ಯಕ್ಕೆ ಕೊಕ್‌ ಕೊಟ್ಟು, ಆರೆಸ್ಸೆಸ್‌ ಸಂಸ್ಥಾಪಕ ಹೆಡಗೇವಾರ್‌ ಕುರಿತ ಮಾಹಿತಿಯನ್ನು ಪಠ್ಯಕ್ಕೆ ತುರುಕುತ್ತಿರುವ ಬಿಜೆಪಿ ಮತ್ತವರ ಪಟಾಲಂ ವಿಕೃತಿಗೆ ಇದು ಪರಾಕಾಷ್ಠೆ.

ಮಾಜಿ ಸಿಎಂ ಕುಮಾರಸ್ವಾಮಿ

ಮಾಜಿ ಸಿಎಂ ಕುಮಾರಸ್ವಾಮಿ

  • Share this:
ಬೆಂಗಳೂರು (ಮೇ 17): ಈ ಬಾರಿ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪಠ್ಯ  ಪುಸ್ತಕದಲ್ಲಿ (School Text Book) ಅನೇಕ ಬದಲಾವಣೆಗಳಾಗಿವೆ. ಕೆಲವು ಪಠ್ಯ ಹಾಗೂ ವಿಚಾರಗಳನ್ನು ಕೈ ಬಿಡಲಾಗಿದ್ದು,  ಕೆಲವು ಪ್ರಮುಖ ವಿಷಯಗಳನ್ನು ಸೇರ್ಪಡೆ ಮಾಡಲಾಗಿದೆ. ಇನ್ನು ಭಾರೀ ವಿವಾದ ಸೃಷ್ಟಿಸಿದ್ದ ಟಿಪ್ಪು ಸುಲ್ತಾನ್ (Tipu Sultan)​ ವೈಭವೀಕರಣವನ್ನು ಪಠ್ಯ ಪುಸ್ತಕದಿಂದ ತೆಗೆದು ಹಾಕಲಾಗಿದೆ. ಟಿಪ್ಪು ಪಾಠವನ್ನು 2 ಸಾಲಿನಲ್ಲಿ ಹೇಳಿ ಮುಗಿಸಿದ್ದಾರೆ. ಪಠ್ಯ ಪುಸ್ತಕದಲ್ಲಿ ಟಿಪ್ಪು ಪಾಠ ಕಡಿತಕ್ಕೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿದೆ.  ಮಾಜಿ ಸಿಎಂ ಕುಮಾರಸ್ವಾಮಿ (H.D Kumaraswamy) ಅವರು ಶಿಕ್ಷಣ ಇಲಾಖೆಯ ಕ್ರಮವನ್ನು ಖಂಡಿಸಿದ್ದಾರೆ. ಸರಣಿ ಟ್ವೀಟ್ (Tweet)​ ಮಾಡುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್​

ಪಠ್ಯಪುಸ್ತಕಗಳನ್ನು ʼಪಕ್ಷಪುಸ್ತಕʼಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರಕ್ಕೆ ನನ್ನ ಧಿಕ್ಕಾರವಿದೆ. ಬಿಜೆಪಿಯ ನೈಜ ಬಣ್ಣದ ವಿಸ್ತೃತರೂಪವೇ ಆಯ್ದ ಪಠ್ಯಗಳನ್ನು ಟಾರ್ಗೆಟ್‌ ಮಾಡಿ ಡಿಲೀಟ್‌ ಮಾಡುವುದು. ಬಿಜೆಪಿಯ ಈ ಬುಡಮೇಲು ಕೃತ್ಯಗಳ ಬಗ್ಗೆ ನನಗೆ ಅಚ್ಚರಿಯೇನೂ ಇಲ್ಲ. ನನ್ನ ಜತೆ ಮೈತ್ರಿ ಸರಕಾರ ಮಾಡಿದಾಗ ಅವರ ಬೇಳೆ ಬೇಯಲಿಲ್ಲ. ‘ಆಪರೇಷನ್‌ ಕಮಲʼದ ಅನೈತಿಕ ಮಾರ್ಗದಲ್ಲಿ ಅಧಿಕಾರಕ್ಕೆ ಬಂದ ʼಸ್ವಘೋಷಿತ ಡೋಂಗಿ ರಾಷ್ಟ್ರಭಕ್ತರುʼ ಇನ್ನೇನು ಮಾಡಲು ಸಾಧ್ಯ?

ಬಿಜೆಪಿ ಮತ್ತವರ ಪಟಾಲಂ ವಿಕೃತಿಗೆ ಇದು ಪರಾಕಾಷ್ಠೆ

ಮಹಾನ್‌ ರಾಷ್ಟ್ರಪ್ರೇಮಿ, ಬ್ರಿಟೀಷರಿಗೆ ಸಿಂಹಸ್ವಪ್ನ, ಭಾರತಮಾತೆಯ ಹೆಮ್ಮೆಯ ಪುತ್ರ ಸರ್ದಾರ್‌ ಭಗತ್‌ ಸಿಂಗ್‌ ಅವರ ಪಠ್ಯಕ್ಕೆ ಕೊಕ್‌ ಕೊಟ್ಟು, ಆರೆಸ್ಸೆಸ್‌ ಸಂಸ್ಥಾಪಕ ಹೆಡಗೇವಾರ್‌ ಕುರಿತ ಮಾಹಿತಿಯನ್ನು ಪಠ್ಯಕ್ಕೆ ತುರುಕುತ್ತಿರುವ ಬಿಜೆಪಿ ಮತ್ತವರ ಪಟಾಲಂ ವಿಕೃತಿಗೆ ಇದು ಪರಾಕಾಷ್ಠೆ. ಭಗತ್‌ ಸಿಂಗ್‌ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿ ಗಲ್ಲಿಗೇರಿದರು. ಸಂಘ ಪರಿವಾರಿಗಳು ಅದೇ ಬ್ರಿಟೀಷರಿಗೆ ಪರಿಚಾರಿಕೆ ಮಾಡಿಕೊಂಡು ಸ್ವಾತಂತ್ರ್ಯಕ್ಕಿಂತ ಗುಲಾಮಗಿರಿಯೇ ಲೇಸೆಂದುಕೊಂಡಿದ್ದರು. ಇಂಥವರು, ಭಗತ್‌ ಸಿಂಗ್‌ʼರಂಥ ರಾಷ್ಟ್ರಪ್ರೇಮಿಗಳನ್ನು ಸಹಿಸಿಕೊಳ್ಳುತ್ತಾರೆಯೇ?

ಇದನ್ನೂ ಓದಿ: School Text Book: 2 ಸಾಲಿನಲ್ಲಿ ಮುಗಿದು ಹೋಗುತ್ತೆ ಟಿಪ್ಪು ಪಾಠ; ಅವ್ರ ಹೆಸರಿರೋ ಕಡೆ ಏಕವಚನ ಬಳಕೆ

‘ಬಿಜೆಪಿಗರು ಮತ್ತು ಬ್ರಿಟೀಷರು ಇಬ್ಬರೂ ಒಂದೇ’

ಪ್ರಜಾಪ್ರಭುತ್ವ ವಿರೋಧಿ ನಡವಳಿಕೆ, ಚಾರಿತ್ರ್ಯಹೀನತೆಯೇ ಮೈವೇತ್ತ ಬಿಜೆಪಿಗೆ ರಾಜ್ಯದ ಬೆಳವಣಿಗೆಯಲ್ಲಿ ನಂಬಿಕೆ ಇಲ್ಲ. ಹಿಜಾಬ್‌, ಆಹಾರ, ವ್ಯಾಪಾರ, ಹಲಾಲ್‌ ಎಲ್ಲಾ ಆಯಿತು. ಈಗ ಪಠ್ಯಕ್ಕೆ ನೇತಾಡುತ್ತಿದೆ. ಅಭಿವೃದ್ಧಿ ಎಂದರೆ ಆ ಪಕ್ಷಕ್ಕೆ ಅಪಥ್ಯ. ಬಿಜೆಪಿಗರು ಮತ್ತು ಬ್ರಿಟೀಷರು ಇಬ್ಬರೂ ಒಂದೇ. ಒಡೆದು ಆಳುವುದೇ ಇವರ ನೀತಿ & ಧರ್ಮ. ಬ್ರಿಟೀಷ್‌ ಪರಂಪರೆಯನ್ನು ಬಿಜೆಪಿಗರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲೂ ಮುಂದುವರಿಸಿದ್ದಾರೆ. ಜನರ ಸ್ವಾತಂತ್ರ್ಯವನ್ನು ಸಹಿಸಲು ಅವರಿಗೆ ಆಗುತ್ತಿಲ್ಲ.

"ಅಯ್ಯೋ.. ಕರ್ನಾಟಕ ಕಟುಕರ  ಕೈಯಲ್ಲಿ ಸಿಕ್ಕಿಕೊಂಡಿದೆ

ಪಠ್ಯವನ್ನು ವಿಕೃತಿಗೊಳಿಸುತ್ತಿರುವುದು ಎಂದರೆ, ಕನ್ನಡ ಆಸ್ಮಿತೆಯನ್ನು ಹತ್ತಿಕ್ಕುವ ಪಾತಕ ಯತ್ನ. ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು, ಪ್ರಶ್ನಿಸಬೇಕು. ಹೋರಾಟಕ್ಕೂ ಇಳಿಯಬೇಕು. "ಅಯ್ಯೋ.. ಕರ್ನಾಟಕ ಕಟುಕರ  ಕೈಯಲ್ಲಿ ಸಿಕ್ಕಿಕೊಂಡಿದೆ!!" ಎಂದು ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಅವ್ರು, ಟಿಪ್ಪು ಪಠ್ಯ ಕಡಿತಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ಇಲಾಖೆ ಅಧಿಕಾರಿಗಳು ಕಚೇರಿಗಳಲ್ಲಿ ಕುಳಿತರೆ ಉಪಯೋಗವಿಲ್ಲ

ಶಾಲೆ ಆರಂಭವಾಗಿದ್ದು ಸರ್ಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಕಚೇರಿಗಳಲ್ಲಿ ಕುಳಿತರೆ ಉಪಯೋಗವಿಲ್ಲ. ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕುಂದು ಕೊರತೆಗಳನ್ನು ನೀಗಿಸಬೇಕು. ಸ್ವಚ್ಛತೆ - ನೈರ್ಮಲ್ಯ, ಮೂಲಸೌಕರ್ಯಗಳನ್ನು ಉತ್ತಮಪಡಿಸಲು ಶ್ರಮಿಸಬೇಕು ಎಂದು ಒತ್ತಾಯಿಸಿದ್ದಾರೆ. ಗ್ರಾಮೀಣ ಭಾಗದ ಅನೇಕ ಕಡೆ ಶಾಲಾ ಕಟ್ಟಡಗಳು ಶಿಥಿಲವಾಗಿವೆ. ಮಳೆ ಬಂದರೆ ಹಳ್ಳಿಶಾಲೆಗಳು ಸೋರುತ್ತಿವೆ.

ಇದನ್ನೂ ಓದಿ: Pratap Reddy: ‘ಪ್ರತಾಪ' ತೋರಿಸಿದ್ರೆ ಹುಷಾರ್! ರೌಡಿಗಳಿಗೆ ನೂತನ ಪೊಲೀಸ್ ಕಮಿಷ್‌ನರ್ ವಾರ್ನಿಂಗ್

ಕಿಟಕಿ ಬಾಗಿಲುಗಳೇ ಇಲ್ಲದ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಉತ್ತಮ ವಾತಾವರಣದಲ್ಲಿ ಮಕ್ಕಳು ಕಲಿಯುವ ವ್ಯವಸ್ಥೆ ಕಲ್ಪಿಸಬೇಕು. ಇದು ರಾಜ್ಯ ಸರ್ಕಾರದ ಹೊಣೆ ಎಂದಿದ್ದಾರೆ.
Published by:Pavana HS
First published: