HOME » NEWS » State » HD KUMARASWAMY URGES BS YEDIYURAPPA GOVERNMENT TO PROVIDE FERTILIZER TO FARMERS OF FLOODED DISTRICTS SCT

ಮಳೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ರಸಗೊಬ್ಬರ ಪೂರೈಕೆ ಮಾಡಿ; ಸರ್ಕಾರಕ್ಕೆ ಎಚ್​.ಡಿ. ಕುಮಾರಸ್ವಾಮಿ ಒತ್ತಾಯ

ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಎಚ್​.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

news18-kannada
Updated:August 20, 2020, 12:52 PM IST
ಮಳೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ರಸಗೊಬ್ಬರ ಪೂರೈಕೆ ಮಾಡಿ; ಸರ್ಕಾರಕ್ಕೆ ಎಚ್​.ಡಿ. ಕುಮಾರಸ್ವಾಮಿ ಒತ್ತಾಯ
ಮಾಜಿ ಸಿಎಂ ಕುಮಾರಸ್ವಾಮಿ
  • Share this:
ಬೆಂಗಳೂರು (ಆ. 20): ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರದ ಕೊರತೆ ಎದುರಾಗಿದ್ದು, ಗೊಬ್ಬರ ಸಿಗದೆ ರೈತರು ಹಿಡಿಶಾಪ ಹಾಕುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಅತಿವೃಷ್ಟಿಯಿಂದ ತೊಂದರೆಗೆ ಸಿಲುಕಿರುವ ರೈತರಿಗೆ ಸರ್ಕಾರ ಸಹಾಯ ಮಾಡಬೇಕು ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ, ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವುದಕ್ಕೆ ಸರ್ಕಾರ ಏದುಸಿರು ಬಿಡುತ್ತಿದೆ‌. ಈಗ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.


ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ವಿರೋಧ; ದ್ವಿಭಾಷಾ ನೀತಿಗೆ ಒತ್ತಾಯಿಸಿ ಟ್ವಿಟ್ಟರ್​ ಅಭಿಯಾನ

ವಾಡಿಕೆಗಿಂತ ಈ ಬಾರಿ ರಾಜ್ಯದಾದ್ಯಂತ ಶೇಕಡ 25ರಷ್ಟು ಹೆಚ್ಚು ಬಿತ್ತನೆ ಆಗಿದೆ. ಕೃಷಿ ಇಲಾಖೆ ಇದನ್ನು ಅಂದಾಜಿಸುವಲ್ಲಿ ಎಡವಿರುವುದು ಮೇಲ್ನೋಟಕ್ಕೆ ಗೋಚರವಾಗುತ್ತದೆ. ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಎಚ್​.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.ಅತಿವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತೊಂದರೆಯಲ್ಲಿರುವ ರೈತರು ಗೊಬ್ಬರದ ಕೊರತೆಯಿಂದ ಬಿತ್ತನೆ ಕಾರ್ಯ ನಿಲ್ಲಿಸದಂತೆ ತುರ್ತು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಟ್ವಿಟರ್​ನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
Published by: Sushma Chakre
First published: August 20, 2020, 12:50 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories