ಪವಿತ್ರ, ಸುಭದ್ರ ಸರ್ಕಾರಕ್ಕೆ ಮುದ್ರೆ ಒತ್ತಿದ ಪ್ರಜ್ಞಾವಂತ ಮತದಾರರಿಗೆ ಮನದಾಳದ ಅಭಿನಂದನೆ ತಿಳಿಸಿದ ಎಚ್​ಡಿಕೆ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಹತ್ತು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆದುಕೊಳ್ಳುವಂತೆ ವೈದ್ಯರು ಕಟ್ಟುನಿಟ್ಟಾಗಿ ಸೂಚಿಸಿದ ಬಳಿಕ ಎಚ್​ಡಿಕೆ ಕಳೆದ ಐದು ದಿನಗಳಿಂದ ವಿಶ್ರಾಂತಿಯಲ್ಲಿದ್ದರು. ಈ ವೇಳೆ ಯಾವ ರಾಜಕೀಯ ಮುಖಂಡರು ಹಾಗೂ ಸಾರ್ವಜನಿಕರನ್ನು ಭೇಟಿ ಮಾಡಿರಲಿಲ್ಲ. ಇದೀಗ ಫಲಿತಾಂಶದ ಬಗ್ಗೆ ಟ್ವಿಟರ್​ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

HR Ramesh | news18-kannada
Updated:December 9, 2019, 3:48 PM IST
ಪವಿತ್ರ, ಸುಭದ್ರ ಸರ್ಕಾರಕ್ಕೆ ಮುದ್ರೆ ಒತ್ತಿದ ಪ್ರಜ್ಞಾವಂತ ಮತದಾರರಿಗೆ ಮನದಾಳದ ಅಭಿನಂದನೆ ತಿಳಿಸಿದ ಎಚ್​ಡಿಕೆ
ಕುಮಾರಸ್ವಾಮಿ
  • Share this:
ಬೆಂಗಳೂರು: ರಾಜ್ಯ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಜೆಡಿಎಸ್​ಗೆ ಭಾರೀ ಮುಖಭಂಗವಾಗಿದೆ. ಕನಿಷ್ಠ ಎರಡು ಕ್ಷೇತ್ರದಲ್ಲಿ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದ ಜೆಡಿಎಸ್​ ಒಂದರಲ್ಲೂ ಖಾತೆ ತೆರೆಯುವಲ್ಲಿಯೂ ವಿಫಲವಾಗಿದೆ. ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್​ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಅನರ್ಹ ಶಾಸಕರನ್ನು ಗೆಲ್ಲಿಸಿದ ಮತದಾರರಿಗೆ ಮಾರ್ಮಿಕವಾಗಿ ಅಭಿನಂದನೆ ತಿಳಿಸಿದ್ದಾರೆ.

"ಇದೊಂದು "ಅಸಹ್ಯ" ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದ ಮಾತಿಗೆ ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು 'ಪವಿತ್ರ' ಮತ್ತು 'ಸುಭದ್ರ' ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆಗಳು." ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಫಲಿತಾಂಶದ ಬಳಿಕ ಟ್ವೀಟ್ ಮಾಡಿದ್ದಾರೆ.



ಉಪಚುನಾವಣೆಯಲ್ಲಿ ಪಕ್ಷದ ಪರ ನಿರಂತರ ಪ್ರಚಾರ ನಡೆಸಿದ್ದ ಎಚ್​ಡಿಕೆ ಅನಾರೋಗ್ಯಕ್ಕೆ  ತುತ್ತಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಹತ್ತು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆದುಕೊಳ್ಳುವಂತೆ ವೈದ್ಯರು ಕಟ್ಟುನಿಟ್ಟಾಗಿ ಸೂಚಿಸಿದ ಬಳಿಕ ಎಚ್​ಡಿಕೆ ಕಳೆದ ಐದು ದಿನಗಳಿಂದ ವಿಶ್ರಾಂತಿಯಲ್ಲಿದ್ದರು. ಈ ವೇಳೆ ಯಾವ ರಾಜಕೀಯ ಮುಖಂಡರು ಹಾಗೂ ಸಾರ್ವಜನಿಕರನ್ನು ಭೇಟಿ ಮಾಡಿರಲಿಲ್ಲ. ಇದೀಗ ಫಲಿತಾಂಶದ ಬಗ್ಗೆ ಟ್ವಿಟರ್​ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.ಇದನ್ನು ಓದಿ: ಉಪಚುನಾವಣೆಯಲ್ಲಿ ಗೆದ್ದವರು ಯಾರು? ಎಷ್ಟು ಮತಗಳ ಅಂತರದಿಂದ? ಇಲ್ಲಿದೆ ಪೂರ್ಣ ವಿವರ

ಉಪಚುನಾವಣೆಯಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ 2 ಹಾಗೂ ಓರ್ವ ಪಕ್ಷೇತರ ಅಭ್ಯರ್ಥಿ ಗೆಲುವು ಪಡೆದಿದ್ದಾರೆ.
First published: December 9, 2019, 3:42 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading