Rama Navami: ನಮ್ಮ ರಾಮಸ್ಮರಣೆ ಇನ್ನೊಬ್ಬರಿಗೆ ನೋವುಂಟು ಮಾಡದಂತೆ ಎಚ್ಚರ ವಹಿಸೋಣ: HDK ಮನವಿ

ಎಲ್ಲರೂ ರಾಮಸ್ಮರಣೆ ಮಾಡೋಣ, ಪ್ರತಿಯೊಬ್ಬರ ಹೃದಯದಲ್ಲಿ ಆ ರಾಮನು ಚಿರಸ್ಥಾಯಿಯಾಗಿ ನಿಲ್ಲಬೇಕು ಎನ್ನುವುದೇ ನನ್ನ ಆಶಯ ಎಂದು ತಿಳಿಸಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ

ಹೆಚ್ ಡಿ ಕುಮಾರಸ್ವಾಮಿ

  • Share this:
ಇಂದು ನಾಡಿನೆಲ್ಲಡೆ ಶ್ರೀರಾಮ ನವಮಿ(Sri Rama Navami)ಯನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ (Former CM HD Kumaraswamy) ಅವರು ಜನತೆಗೆ ಹಬ್ಬದ ಶುಭಾಶಯಗಳನ್ನು ತಿಳಿಸುವದರ ಜೊತೆಗೆ ಕೆಲವೊಂದು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.  ಶ್ರೀರಾಮಚಂದ್ರ (Lord Sir ramachandra) ಮಹಾಪ್ರಭು ನಮ್ಮೆಲ್ಲರ ಆರಾಧ್ಯ ದೈವ. ಅಷ್ಟೇ ಅಲ್ಲ; ಮನುಕುಲಕ್ಕೆ ಆದರ್ಶ, ತ್ಯಾಗ, ಸರಳತೆ, ಶಾಂತಿ, ಸಹನೆ, ಮೌಲ್ಯಗಳ ದಿವ್ಯಬೆಳಕು ತೋರಿದ ನಮ್ಮೊಳಗಿನ ದೈವ. ರಾಮರಾಜ್ಯವು ಸರ್ವ ಜನಾಂಗದ ಶಾಂತಿಯ ತೋಟವಾಗಿತ್ತು ನಾಡಿನ ಸಮಸ್ತ ಜನತೆಯಲ್ಲಿ ನನ್ನ ವಿನಮ್ರ ಮನವಿ ಇಷ್ಟೆ. ರಾಮನವಮಿ ಹಬ್ಬ(Rama navami Festival)ವನ್ನು ಭಕ್ತಿ-ಶ್ರದ್ಧೆಯಿಂದ ಆಚರಿಸೋಣ. ಆದರೆ, ನಮ್ಮ ರಾಮಸ್ಮರಣೆ ಇನ್ನೊಬ್ಬರಿಗೆ ನೋವುಂಟು ಮಾಡದಂತೆ ಎಚ್ಚರ ವಹಿಸೋಣ ಎಂದು ಮನವಿ ಮಾಡಿಕೊಂಡಿದ್ದಾರೆ.

ರಾಮನ ಹೆಸರಿನಲ್ಲಿ ಶೋಭಾಯಾತ್ರೆ ನಡೆಸಲು ನನ್ನದೇನೂ ಅಭ್ಯಂತರ ಇಲ್ಲ, ಅದಕ್ಕೆ ನನ್ನದೂ ಬೆಂಬಲ ಇದೆ.  ಶೋಭಾಯಾತ್ರೆ ಹೆಸರಿನಲ್ಲಿ ಇನ್ನೊಂದು ಸಮುದಾಯ ವಾಸ ಮಾಡುವ ಬೀದಿಗಳಲ್ಲಿ ಅಥವಾ ಅವರ ಪ್ರಾರ್ಥನಾ ಮಂದಿರಗಳ ಮುಂದೆ ಡಿಜೆ ಸೆಟ್ಟುಗಳನ್ನು ಹಾಕಿಕೊಂಡು 15-20 ನಿಮಿಷ ಕಾಲ ಕುಣಿಯುವುದು, ಕೇಕೆ ಹಾಕುವುದು ಇತ್ಯಾದಿ ಬೇಡ.

ಶಾಂತಿಗೆ ಭಂಗ ತರುವುದು ಬೇಡ

ಇದರಿಂದ ಶಾಂತಿ ಕದಡುತ್ತದೆ. ಹೀಗೆ ಆಗುವುದು ಬೇಡ. ಬಡಾವಣೆಗಳಿಗೆ ಹೋಗಿ ಶಾಂತಿಗೆ ಭಂಗ ತರುವುದು ಬೇಡ. ಅದಕ್ಕೆ ಅವಕಾಶವನ್ನೂ ಕೊಡಬಾರದು ಎಂದು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ನನ್ನ ಮನವಿ.

ಇದನ್ನೂ ಓದಿ:  ಶ್ರೀರಾಮ ಸೇನೆಯಿಂದ ಮುಸ್ಲಿಂ ವ್ಯಾಪಾರಿಗಳ ಕಲ್ಲಂಗಡಿ ನಾಶ: ಭಯೋತ್ಪಾದಕರಿಗೂ, ಈ ಕಿರಾತಕರಿಗೆ ವ್ಯತ್ಯಾಸವಿಲ್ಲ ಅಂದ್ರು HDK

ಶೋಭಾಯಾತ್ರೆಯನ್ನು ಹಿಂದುಗಳು ವಾಸ ಮಾಡುವ ಬಡಾವಣೆ, ಬೀದಿಗಳಲ್ಲಿ ಮಾಡಿ, ಅಲ್ಲೆಲ್ಲ ಅರ್ಧ ಗಂಟೆ ಸಾಲದಿದ್ದರೆ, ಒಂದು ಗಂಟೆ ಮಾಡಿ. ಇದಕ್ಕೆ ನನ್ನ ಬೆಂಬಲವಿದೆ.

ಹಿಂದುಗಳು ಬಡವಾಣೆಯಲ್ಲಿಯೇ ಶೋಭಾಯಾತ್ರೆ ನಡೆಯಲಿ

ಎಲ್ಲರೂ ರಾಮಸ್ಮರಣೆ ಮಾಡೋಣ, ಪ್ರತಿಯೊಬ್ಬರ ಹೃದಯದಲ್ಲಿ ಆ ರಾಮನು ಚಿರಸ್ಥಾಯಿಯಾಗಿ ನಿಲ್ಲಬೇಕು ಎನ್ನುವುದೇ ನನ್ನ ಆಶಯಶೋಭಾಯಾತ್ರೆಯನ್ನು ಹಿಂದುಗಳು ವಾಸ ಮಾಡುವ ಬಡಾವಣೆ, ಬೀದಿಗಳಲ್ಲಿ ಮಾಡಿ, ಅಲ್ಲೆಲ್ಲ ಅರ್ಧ ಗಂಟೆ ಸಾಲದಿದ್ದರೆ, ಒಂದು ಗಂಟೆ ಮಾಡಿ. ಇದಕ್ಕೆ ನನ್ನ ಬೆಂಬಲವಿದೆ.

ಎಲ್ಲರೂ ರಾಮಸ್ಮರಣೆ ಮಾಡೋಣ, ಪ್ರತಿಯೊಬ್ಬರ ಹೃದಯದಲ್ಲಿ ಆ ರಾಮನು ಚಿರಸ್ಥಾಯಿಯಾಗಿ ನಿಲ್ಲಬೇಕು ಎನ್ನುವುದೇ ನನ್ನ ಆಶಯ ಎಂದು ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ನಡೆಯುವ ಶೋಭಾಯತ್ರೆಗಳ ವಿವರ ಹೀಗಿದೆ

1.ಹೊಸಕೆರೆಹಳ್ಳಿ ಭವಾನಿ ಶಂಕರ ದೇವಸ್ಥಾನದಿಂದ ಹರೆಹಳ್ಳಿಯ ಹನುಮಗಿರಿವರೆಗೆ ಶೋಭಾಯಾತ್ರೆ. ಉಡುಪಿ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಶೋಭಾಯಾತ್ರೆ ನಡೆಯಲಿದೆ. ಯಾತ್ರೆಯಲ್ಲಿ ಡೊಳ್ಳು ಕುಣಿತ, ಕಂಸಾಳೆ, ವೀರಗಾಸೆ ಹಾಗೂ  ವಿವಿಧ ಜಾನಪದಕಲಾತಂಡಗಳ ನೃತ್ಯ ಪ್ರಕಾರಗಳು ಇರಲಿವೆ. ಎಜಿಎಸ್ ಬಡಾವಣೆ ಮುಖ್ಯ ರಸ್ತೆ ಇಟ್ಟಮಡು ರಸ್ತೆಯಿಂದ ಹನುಮಗಿರಿ ಬೆಟ್ಟ ತಲುಪುತ್ತದೆ. ಬೆಳಗ್ಗೆ ಎಂಟು ಗಂಟೆಗೆ ವೀರಾಂಜನೇಯ ಮತ್ತು ಅರ್ಕೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನೇರವೇರಿಸಲಾಗುತ್ತದೆ.

2.ಸುಮಾರು 800 ವರ್ಷಗಳ ಇತಿಹಾಸವುಳ್ಳ ಬಸವನಗುಡಿಯ ಕಾರಂಜಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸೀತಾ,ರಾಮ, ಲಕ್ಷ್ಮಣರಿಗೆ ಬೆಳಗ್ಗೆ 6 ಗಂಟೆಯಿಂದ ವಿಶೇಷ ಮಹಾಅಭಿಷೇಕ ವಜ್ರವಸ್ತ್ರಾಲಂಕಾರ

3.ಸಂಜೆ ನಾಲ್ಕು ಗಂಟೆಗೆ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದಿಂದ ಅಶ್ವತ್ ನಗರದ ಪ್ರಸನ್ನ ಆಂಜನೇಯ ಸ್ವಾಮಿ ದೇವಾಲಯದಿಂದ ಸಂಜಯ ನಗರದ ಮುಖ್ಯ ರಸ್ತೆಯ ಮೂಲಕ ಶೋಭಾಯಾತ್ರೆ ಮೆರವಣಿಗೆ ನಡೆಯುತ್ತದೆ. ಭೂಪಸಂದ್ರದಲ್ಲಿ ವೇದಿಕೆ ಕಾರ್ಯಕ್ರಮದೊಂದಿಗೆ ಶೋಭಾಯಾತ್ರೆ ಮುಕ್ತಾಯವಾಗಲಿದೆ.

ಇದನ್ನೂ ಓದಿ:  Amit Shah ಅವರಿಗೆ ಇಂಗ್ಲಿಷ್ ಬರಲ್ವಾ? ಹುಳಿ ಹಿಂಡುವ ಹೇಳಿಕೆ ಆಘಾತಕಾರಿ: HD Kumaraswamy

ಶೋಭಾಯಾತ್ರೆಯಲ್ಲಿ ಭಜರಂಗದಳದ ರಾಷ್ಟ್ರೀಯ ಸಹ ಸಂಯೋಜಕ್ ಸೂರ್ಯ ನಾರಾಯಣ ಮತ್ತು ಗುರುಭಕ್ತ ದಾಸ್ ಸ್ವಾಮಿ ಹಾಗೂ ಬೆಂಗಳೂರು ನಗರದ ಆರ್ ಎಸ್ ಎಸ್ ಕಾರ್ಯವಾಹಕ ಕರುಣಾಕರ ರೈ ಭಾಗಿಯಾಗಲಿದ್ದಾರೆ
Published by:Mahmadrafik K
First published: