ನೂರರ ಸಂಭ್ರಮ: ರಾಹುಲ್​ ಗಾಂಧಿಗೆ ಧನ್ಯವಾದ ತಿಳಿಸಿದ ಸಿಎಂ ಕುಮಾರಸ್ವಾಮಿ

news18
Updated:August 30, 2018, 11:41 AM IST
ನೂರರ ಸಂಭ್ರಮ: ರಾಹುಲ್​ ಗಾಂಧಿಗೆ ಧನ್ಯವಾದ ತಿಳಿಸಿದ ಸಿಎಂ ಕುಮಾರಸ್ವಾಮಿ
ಸಾಂದರ್ಭಿಕ ಚಿತ್ರ
news18
Updated: August 30, 2018, 11:41 AM IST
ನ್ಯೂಸ್​ 18 ಕನ್ನಡ

ಬೆಂಗಳೂರು (ಆ.30): ಕಾಂಗ್ರೆಸ್​-ಜೆಡಿಎಸ್​ ,ಮೈತ್ರಿ ಸರ್ಕಾರ ನೂರುದಿನ ಪೂರೈಸಿದ ಹಿನ್ನೆಲೆ ಸಿಎಂ ಕುಮಾರಸ್ವಾಮಿ  ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿಯನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದರು.

ರಾಹುಲ್​ ಗಾಂಧಿ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಎಚ್​ಡಿ ಕುಮಾರಸ್ವಾಮಿ ಸರ್ಕಾರ ನಡೆಸಲು ಅವಕಾಶ ನೀಡಿದ್ದಕ್ಕೆ ಹಾಗೂ ಮೈತ್ರಿ ಸರ್ಕಾರ ನಡೆಸಲು ಸಂಪೂರ್ಣ ಸ್ವಾತಂತ್ರ ನೀಡಿದ್ದಕ್ಕೆ ಕೃತಜ್ಞತೆ ತಿಳಿಸಿದರು.

ಸಮ್ಮಿಶ್ರ ಸರ್ಕಾರ ಯಶಸ್ವಿಯಾಗಿ ನೂರು ದಿನ ಪೂರೈಸಿದೆ. ನಾಡಿನ ಜನತೆಗೆ ಕೃತಜ್ಞತೆಗಳು. ಹಲವಾರು ನಿರೀಕ್ಷೆಗಳನ್ನು ಈಡೆರಿಸುವತ್ತ ನಾವು ಕೆಲಸ ಮಾಡುತ್ತಿದೆ.  ಅಧಿಕಾರಿಗಳ ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ರೈತ ಸಮುದಾಯ ಬಯಸಿದಂತೆ ಸಾಲಮನ್ನಾ ಮಾಡಿದ್ದೇವೆ. ಮೈತ್ರಿ ಸರ್ಕಾರ ಆದಾಯ ಸಂಗ್ರಹದಲ್ಲಿಯೂ ಹಿಂದೆ ಬಿದ್ದಿಲ್ಲ ಎಂದರು.

 

ಮೈತ್ರಿ ಸರ್ಕಾರಕ್ಕೆ ಧಕ್ಕೆ ತರುವ ರೀತಿಯಲ್ಲಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದು, ಅವರ ವಿರುದ್ಧ ದೂರು ನೀಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,  ಸಿದ್ದರಾಮಯ್ಯ ವಿರುದ್ದ ದೂರು ನೀಡಿಲ್ಲ.  ಸಿದ್ದರಾಮಯ್ಯ ನೇತೃತ್ವದಲ್ಲೇ ಸರ್ಕಾರ ನಡೆಯುತ್ತಿದೆ. ರಾಜ್ಯದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಇದು ರಾಹುಲ್ ಗಾಂಧಿಯವರ ಬಳಿ ಚರ್ಚಿಸುವ ವಿಷಯವೂ ಅಲ್ಲ ಎಂದರು.

ಸಿದ್ದರಾಮಯ್ಯ ಈಗಾಗಲೇ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ಕೊಟ್ಟಿದಾರೆ. ಅವರು ಮತ್ತೊಮ್ಮೆ ಸಿಎಂ ಆಗುತ್ತೇನೆ ಎಂದರೆ ತಪ್ಪೇನು ಎಂದು ಪ್ರಶ್ನಿಸಿದ ಅವರು ಕೆಲವರು ಹಿರಿಯರಾದ ಆರ್.ವಿ. ದೇಶಪಾಂಡೆ ಸಿಎಂ ಆಗಬೇಕು ಅಂತಾರೆ ಎಂದರು. ಈ ಮೂಲಕ ಕುಮಾರಸ್ವಾಮಿ ದೇಶಪಾಂಡೆಗೆ ಸಿಎಂ ಆಗುವ ಆಸೆ ಹುಟ್ಟಿಸಿದರು.

ಮೈತ್ರಿ ಸರ್ಕಾರದಲ್ಲಿ ಎರಡು ಪಕ್ಷದ ನಾಯಕರು ಟೀಂ ಆಗಿ ಕೆಲಸ ಮಾಡಿದ್ದೇವೆ. ನೂರು ದಿನ ಹನಿಮೂನ್ ಪೀರಿಯಡ್ ಮುಗಿಸಿದ್ದೇವೆ. ಒಟ್ಟಾಗಿ ಮುಂದಿನ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ. ರಾಹುಲ್​ ಗಾಂಧಿ ಅವರ ಜೊತೆ ಯಾವುದೇ  ವಿಷಯ ಚರ್ಚೆ ಮಾಡಿಲ್ಲ. ಇದು ಕೇವಲ ಸೌಹಾರ್ದಯುತ ಭೇಟಿ ಅಷ್ಟೆ ಎಂದರು

ಸಚಿವ ಸಂಪುಟ ವಿಸ್ತರಣೆ ಕುರಿತು ಕೂಡ ಚರ್ಚೆ ನಡೆಸಿದ್ದು, ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡುವಂತೆ ಹಾಗೂ ನಿಗಮ ಮಂಡಳಿಗಳಿಗೆ ನೇಮಕ ಮಾಡುವಂತೆ ಮನವಿ ಮಾಡಿದ್ದೇನೆ ಎಂದರು.

ರಾಹುಲ್ ಗಾಂಧಿ ಕುಮಾರಸ್ವಾಮಿ ಭೇಟಿ ವೇಳೆ ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷ ಡ್ಯಾನಿಷ್​ ಆಲಿ ಕೂಡ ಉಪಸ್ಥಿತರಿದ್ದರು.

ರಾಹುಲ್ ಭೇಟಿ  ಬಳಿಕ‌ ಮಧ್ಯಾಹ್ನ 12ಕ್ಕೆ ಕೇಂದ್ರ ಸಚಿವ ಜಿತೇಂದರ್ ಸಿಂಗ್ ನಂತರ  ಋಣಮುಕ್ತ ಕಾಯ್ದೆಗೆ ಅಂಕಿತ ಕೋರಲು ಮಧ್ಯಾಹ್ನ 1ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ಮಾಡಲಿದ್ದಾರೆ.

ಸಂಜೆ 4ಗಂಟೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿಯಾಗಿ ಕೊಡಗಿನ ಅತಿವೃಷ್ಟಿ ಹಾನಿ ಪರಿಹಾರಕ್ಕಾಗಿ ಮನವಿ ಮಾಡಲಿದ್ದಾರೆ.ಕೊಡಗಿನಲ್ಲಿ 3.500ಕೋಟಿ ನಷ್ಟ ಉಂಟಾಗಿದ್ದು, ಕೇವಲ 8 ಕೋಟಿ ನೀಡಲಾಗಿದೆ ಇನ್ನು ಹೆಚ್ಚಿನ ಪರಿಹಾರ ನೀಡುವಂತೆ ಮನವಿ ಮಾಡಲಿದ್ದಾರೆ.

 
First published:August 30, 2018
ಮತ್ತಷ್ಟು ಓದಿರಿ
ಮುಂದಿನ ಸುದ್ದಿ