ಬೆಂಗಳೂರು: ಮಾರ್ಚ್‌ನಿಂದ ಮೇ ಋತುವಿನಲ್ಲಿ ಬಿಸಿಗಾಳಿಯು (Heat Wave) ಮಧ್ಯ ಮತ್ತು ವಾಯುವ್ಯ ಭಾರತದ ಹಲವು ಪ್ರದೇಶಗಳಲ್ಲಿ ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಣೆ ಹೊರಡಿಸಿದೆ. ಇದರ ಬೆನ್ನಲ್ಲೇ ರಾಜ್ಯದ ಕರಾವಳಿ ಮತ್ತು ರಾಜಧಾನಿಯ ಜನರಿಗೆ ಬಿಸಿಗಾಳಿ ತಟ್ಟಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯದ ಜನರಿಗೆ ಆರೋಗ್ಯ ಇಲಾಖೆ (Health Department) ಮುನ್ಸೂಚನೆ ನೀಡಿದೆ.
ಅರಬ್ಬೀ ಸಮುದ್ರದ ಮೇಲೆ ಆಂಟಿಸೈಕ್ಲೋನ್ ಗಾಳಿ ಬೀಸಿದ ಪರಿಣಾಮ ರಾಜ್ಯದ ಕರಾವಳಿ, ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಬಿಸಿಗಾಳಿ ಹೆಚ್ಚುತ್ತಿದ್ದು, ಬೇಸಿಗೆ ಕಾಲವೂ ಆಗಿರೋದ್ರಿಂದ ಉಷ್ಣಾಂಶದಿಂದ ಜನರಿಗೆ ನಾನಾ ರೀತಿಯಲ್ಲಿ ಅನಾರೋಗ್ಯ ಉಂಟಾಗುವ ಸಾಧ್ಯತೆ ಇದ್ದು, ಜನರು ಕೂಡಲೇ ನಿರ್ಲಕ್ಷ್ಯ ತೋರದೆ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯ ಆರೋಗ್ಯ ಇಲಾಖೆ ಸೂಚನೆ ನಿಡಿದೆ. ಇದಕ್ಕಾಗಿ ಗೈಡ್‌ಲೈನ್ಸ್ ಅನ್ನು ರಾಜ್ಯ ಸರ್ಕಾರ ಹೊರಡಿಸಿದ್ದು, ಬಾಯಾರಿಕೆ ಇಲ್ಲದಿದ್ದರೂ ಪದೇ ಪದೇ ನೀರು ಕುಡಿಯಬೇಕು ಸೇರಿದಂತೆ ಹತ್ತಾರು ಸೂಚನೆಗಳನ್ನು ನೀಡಲಾಗಿದೆ.
ಇದನ್ನೂ ಓದಿ: Karnataka Weather: ಮುಂದಿನ 2 ದಿನ ರಾಜ್ಯದಲ್ಲಿ ಚಳಿ ಹೆಚ್ಚಾಗಲಿದೆ; ಹವಾಮಾನ ಇಲಾಖೆ ಮುನ್ಸೂಚನೆ
ಆರೋಗ್ಯ ಇಲಾಖೆಯ ಗೈಡ್‌ಲೈನ್ಸ್‌ನಲ್ಲಿ ಏನಿದೆ?
ಹವಾಮಾನ ವೈಪರೀತ್ಯ ಉಂಟಾಗಿ ಉಷ್ಣಾಂಶದಿಂದ ರಾಜ್ಯದಲ್ಲಿ ಜನರು ನಾನಾ ರೀತಿಯ ಅನಾರೋಗ್ಯಕ್ಕೆ ತುತ್ತಾಗುವ ಸಂಭವ ಇರೋದ್ರಿಂದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಆ ಪೈಕಿ ಪ್ರಮುಖ ಸೂಚನೆಗಳು ಇಲ್ಲಿವೆ.
ರಾಜ್ಯದ ಕರಾವಳಿ ಜಿಲ್ಲೆಗಳಿಗೂ ತಟ್ಟಿದ ಎಫೆಕ್ಟ್
ಇನ್ನು ಈ ಬಿಸಿಗಾಳಿಯ ಎಫೆಕ್ಟ್ ಕರಾವಳಿ ಪ್ರದೇಶದ ಎರಡು ಜಿಲ್ಲೆಗಳಾದ ದಕ್ಷಿಣ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶುಕ್ರವಾರದಿಂದ ಸೋಮವಾರದವರೆಗೂ ಇರಲಿದ್ದು, ದೇಶದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ವಾತಾವರಣ ಸೃಷ್ಟಿಯಾಗಿದೆ. ಮಾ.4ರಂದು ದೇಶದ ವಿವಿಧ ಭಾಗಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಇತ್ತ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮತ್ತು ಹೊನ್ನಾವರದಲ್ಲಿ 39 ರಿಂದ 40.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಇದು ಸಾಮಾನ್ಯ ತಾಪಮಾನಕ್ಕಿಂತ 6 ಡಿಗ್ರಿ ಸೆಲ್ಸಿಯಸ್ ಹೆಚ್ಚಿತ್ತು.
ಪಶ್ಚಿಮ ಕರಾವಳಿಯ ಪ್ರದೇಶಗಳಲ್ಲಿ ಮಾರ್ಚ್‌ನಲ್ಲಿ ಬಿಸಿ ಗಾಳಿ ಬೀಸುತ್ತದೆ. ಮತ್ತು ಏಪ್ರಿಲ್ ಅಂತ್ಯ ಮತ್ತು ಮೇ ಆರಂಭದಲ್ಲಿ ಪೂರ್ವ ಕರಾವಳಿ ಪ್ರದೇಶಗಳಾದ ಒಡಿಶಾ ಮತ್ತು ಆಂಧ್ರಪ್ರದೇಶಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ಫೆಬ್ರವರಿಯಲ್ಲಿ ಆಂಟಿಸೈಕ್ಲೋನ್‌ನಿಂದ ಪಶ್ಚಿಮ ಕರಾವಳಿಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. ಮಾ.7ರಿಂದ ರಾಜ್ಯದ ಕರಾವಳಿ ಪ್ರದೇಶದಲ್ಲಿ ಬಿಸಿ ಗಾಳಿ ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನಶಾಸ್ತ್ರಜ್ಞ ಮಹೇಶ್ ಪಲಾವತ್ ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ