• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ನಾವೆಲ್ಲಾ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರು - ಆದ್ರೆ ನಾನು ಡಿಸಿಎಂ ಆಗ್ಬೇಕಂತ ಜನರ ಅಪೇಕ್ಷೆ ; ಶ್ರೀರಾಮುಲು ಪುನರುಚ್ಚಾರ

ನಾವೆಲ್ಲಾ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರು - ಆದ್ರೆ ನಾನು ಡಿಸಿಎಂ ಆಗ್ಬೇಕಂತ ಜನರ ಅಪೇಕ್ಷೆ ; ಶ್ರೀರಾಮುಲು ಪುನರುಚ್ಚಾರ

ಆರೋಗ್ಯ ಸಚಿವ ಶ್ರೀರಾಮುಲು

ಆರೋಗ್ಯ ಸಚಿವ ಶ್ರೀರಾಮುಲು

ಮಂತ್ರಿ ಮಂಡಲ ವಿಸ್ತರಣೆ ವಿಚಾರದಲ್ಲಿ ಕಗ್ಗಂಟೇನು ಇಲ್ಲ. ಮಂತ್ರಿ ಮಂಡಲ ವಿಸ್ತರಣೆಯಾಗಲಿದೆ. ಮುಖ್ಯಮಂತ್ರಿಗಳಿಗೆ ಎಲ್ಲ ಅಧಿಕಾರವಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸುತ್ತಾರೆ

  • Share this:

ಹಾಸನ(ಜ.29) : ನಾವೆಲ್ಲರೂ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರು. ಭಗವಂತನ ಆಶೀರ್ವಾದದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾನು ಉಪ ಮುಖ್ಯಮಂತ್ರಿಯಾಗಬೇಕು ಎಂಬುದು ಜನರ ಬೇಡಿಕೆಯಾಗಿದೆ. ನಮಗೆ ಪಕ್ಷ ಮುಖ್ಯ ಹೊರತು, ಹುದ್ದೆ ಮುಖ್ಯವಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. 


ಜೆ ಸಿ ಮಾಧುಸ್ವಾಮಿಯವರು ನಮ್ಮ ಹಿರಿಯ ಸಚಿವರು ಅವರ ಹೇಳಿಕೆ ಅವರ ಅಭಿಪ್ರಾಯ, ಯಾವ ಸಮಯದಲ್ಲಿ ಹೇಳಿದ್ದಾರೆ ಎಂಬುದು ಗೊತ್ತಿಲ್ಲಾ. ಸಚಿವರು, ಹೆಚ್.ವಿಶ್ವನಾಥ್ ಎಲ್ಲರನ್ನೂ ಸಚಿವರನ್ನಾಗಿ ಮಾಡಬೇಕು ಎಂದು ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು.


ಸಚಿವ ಸಂಪುಟ ವಿಸ್ತರಣೆಯಾದರೆ ಬಿಜೆಪಿಯಲ್ಲಿ ಅಸಮಾಧಾನ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರ, ಸಿದ್ದರಾಮಯ್ಯ ಅವರಿದ್ದ ಸ್ಥಿತಿಗತಿಯಲ್ಲಿ ಅವರು ಹೇಳಿಕೆ ಕೊಡುವುದು ಸಹಜ, ಪಕ್ಷದ ತೀರ್ಮಾನಕ್ಕೆ ನಾವು ಬದ್ದರಾಗಿದ್ದೇವೆ. ಮೂರು ತಿಂಗಳ ಒಳಗೆ  2500 ವೈದ್ಯರು ಸೇರಿದಂತೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಸಿಬ್ಬಂದಿ ನೇಮಕ ಮಾಡಲಾಗುವುದು ಎಂದು ಸಚಿವ ಶ್ರೀರಾಮುಲು ತಿಳಿಸಿದರು.


ಮುಖ್ಯಮಂತ್ರಿಗಳಿಗೆ ಎಲ್ಲ ಅಧಿಕಾರವಿದೆ; ಡಿಸಿಎಂ 


ಮಂತ್ರಿ ಮಂಡಲ ವಿಸ್ತರಣೆ ವಿಚಾರದಲ್ಲಿ ಕಗ್ಗಂಟೇನು ಇಲ್ಲ. ಮಂತ್ರಿ ಮಂಡಲ ವಿಸ್ತರಣೆಯಾಗಲಿದೆ. ಮುಖ್ಯಮಂತ್ರಿಗಳಿಗೆ ಎಲ್ಲ ಅಧಿಕಾರವಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸುತ್ತಾರೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ.


ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಗೆದ್ದವರಿಗೆ ಮಂತ್ರಿ ಸ್ಥಾನ ಕೊಡಬೇಕು ಎಂದಿದೆ. ಹೀಗಾಗಿ ಸೋತವರ ಬಗ್ಗೆ ಮುಖ್ಯಮಂತ್ರಿ ತೀರ್ಮಾನ ಮಾಡುತ್ತಾರೆ ಎನ್ನುವ ಮೂಲಕ ಸೋತವರಿಗೆ ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಡಿಸಿಎಂ ಅಶ್ವಥ್​ ನಾರಾಯಣ್​ ಉಲ್ಟಾ ಹೊಡೆದರು.


ಇದನ್ನೂ ಓದಿ : ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರತೆಯಿಲ್ಲದ ರಾಜಕಾರಣಿ ; ಸಚಿವ ಶ್ರೀರಾಮುಲು ಕಿಡಿ


ಹಿಮ್ಸ್ ನಿರ್ದೇಶಕ ಡಾ.ರವಿಕುಮಾರ್ ನಕಲಿ ಸರ್ಟಿಫಿಕೇಟ್ ನೀಡಿ ಹುದ್ದೆ ಗಿಟ್ಟಿಸಿಕೊಂಡಿರುವ ವಿಚಾರ, ಹಾಸನ ಜೆಎಂಎಫ್ ಸಿ ಕೋರ್ಟ್ ನಲ್ಲಿ ಡಾ.ರವಿಕುಮಾರ್ ವಿರುದ್ದ ಎಫ್ ಐಆರ್ ದಾಖಲು ಮಾಡುವಂತೆ ಆದೇಶ ನೀಡಿದೆ. ಯಾವುದೇ ನಕಲಿ ಸರ್ಟಿಫಿಕೇಟ್ ಆಗಿಲ್ಲಾ, ಎಲ್ಲವೂ ಸರಿಯಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್​​ ಸಮಜಾಯಿಷಿ ನೀಡಿದರು.

top videos
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು