ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ (National Herald Case) ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು (Rahul Gandhi) ED ಸತತ 3 ದಿನಗಳ ಕಾಲ ವಿಚಾರಣೆಗೆ ಒಳಪಡಿಸಿದ್ದನ್ನು ವಿರೋಧಿ ರಾಜ್ಯ ಕಾಂಗ್ರೆಸ್ನಿಂದ ಇಂದು ರಾಜಭವನ ಮುತ್ತಿಗೆಗೆ (Congress Protest) ಯೋಜಿಸಲಾಗಿದೆ. ಗುರುವಾರ ಬೆಳಗ್ಗೆ 10ಕ್ಕೆ ಆರಂಭವಾಗಲಿರುವ ಪಾದಯಾತ್ರೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ತೆರಳಲಿದೆ. ಕೆಪಿಸಿಸಿ ಕಚೇರಿ ಬಳಿ ಸೇರುವಂತೆ ಶಾಸಕರು, ಸಂಸದರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ರಾಜಭವನ ಮುತ್ತಿಗೆ ಕಾರ್ಯಕ್ರಮ ನಡೆಯಲಿದೆ. ಜೊತೆಗೆ ನಾಳೆ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡುವಂತೆ ಜಿಲ್ಲಾ ಘಟಕಗಳಿಗೆ ಸೂಚನೆ ನೀಡಲಾಗಿದೆ. ಸಾಂವಿಧಾನಿಕ ಸಂಸ್ಥೆಗಳನ್ನು ಕೇಂದ್ರ ಬಿಜೆಪಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ರಾಜಭವನ ಮುತ್ತಿಗೆ ಬಳಿಕ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಿದೆ.
ಮತ್ತೆ ಕೊರೊನಾ ಹೆಚ್ಚಾದ್ರೆ ಅವರೇ ಹೊಣೆ
ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಕೆ ಸುಧಾಕರ್, ಕಾಂಗ್ರೆಸ್ ನವರ ಹೋರಾಟದಿಂದ ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಆದರೆ ಅದಕ್ಕೆ ಅವರೇ ಹೊಣೆ ಎಂದು ಎಚ್ಚರಿಸಿದ್ದಾರೆ. ಕಾಂಗ್ರೆಸ್ ನವರೇ ನೈತಿಕ ಹೊಣೆ ಹೊರಬೇಕು. ಅವರು ಪ್ರತಿಭಟನೆ ಮಾಡಿದೋದಾದರೆ ಫ್ರೀಡಂ ಪಾರ್ಕ್ ನಲ್ಲಿ ಮಾಡಲಿ. ಅದು ಬಿಟ್ಟು ಜನರನ್ನು ಸೇರಿಸಿಕೊಂಡು ರಸ್ತೆಯಲ್ಲಿ ಪ್ರತಿಭಟನೆ ಮಾಡೋದು ಸರಿಯಲ್ಲ. ಇವತ್ತು ರಾಜಭವನ ಚಲೋ ಮಾಡ್ತಿದ್ದಾರೆ. ಇವತ್ತಿನ ಹೋರಾಟಕ್ಕೆ ಕೊವೀಡ್ ಉಲ್ಲಂಘನೆ ಅಡಿ ಕೇಸ್ ದಾಖಲಿಸುವ ಸಂಬಂಧ ಮುಖ್ಯಮಂತ್ರಿ ಗಳ ಜೊತೆ ಮಾತಾಡ್ತೇನೆ ಎಂದ ಸುಧಾಕರ್ ಹೇಳಿದರು.
ಇದನ್ನೂ ಓದಿ: Motamma: ಮತ್ತೆ ಸಿದ್ದರಾಮಯ್ಯ ವಿರುದ್ಧ ಮೋಟಮ್ಮ ಸಿಡಿಮಿಡಿ; ಅವ್ರೇ ಸಚಿವ ಸ್ಥಾನ ತಪ್ಪಿಸಿದ್ದು
ಖರ್ಗೆ ವಿಚಾರಣೆಗೆ ಪ್ರತಿಭಟನೆಯೇ ನಡೆಯಲಿಲ್ಲ..!
ವಾಗ್ದಾಳಿ ಮುಂದುವರೆಸಿ ಕಾಂಗ್ರೆಸ್ ನಾಯಕರ ನಡೆ ನಾಚಿಕೆ ತರಿಸುವಂತದ್ದು. ಒಂದು ಕಡೆ ಸಂವಿಧಾನದ ಬಗ್ಗೆ ಸಾಕಷ್ಟು ಭಾಷಣ ಮಾಡ್ತಾರೆ, ಇನ್ನೊಂದು ಕಡೆ ಸಂವಿಧಾನಕ್ಕೆ ಅಗೌರವ ತೋರುವ ಕೆಲಸ ಮಾಡ್ತಾರೆ ಎಂದು ಆರೋಪಿಸಿದರು. ಈ ಹಿಂದೆ ಮಾಜಿ ಪ್ರಧಾನಿ ಪಿವಿ ನರಂಸಿಹರಾವ್,ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೀತಾರಾಮ್ ಕೇಸರಿಯವರು ವಿರುದ್ದವೂ ವಿಚಾರಣೆ ನಡೆದಿತ್ತು. ನಮ್ಮ ಖರ್ಗೆಯವರ ವಿಚಾರಣೆ ಕೂಡ ನಡೀತು ಆಗ ಯಾರು ಚಕಾರ ಎತ್ತಿಲ್ಲ. ಆಗ ಯಾರೂ ಪ್ರತಿಭಟನೆಗೆ ಮುಂದಾಗಿಲ್ಲ. ಕಾಂಗ್ರೆಸ್ ನಾಯಕರು ಮಾಡ್ತಿರೋದು ಸರಿಯಲ್ಲ. ಈ ರೀತಿ ಮಾಡೋದ್ರಿಂದ ತಪ್ಪು ಸಂದೇಶ ಹೋಗ್ತಿದೆ. ಏನೇ ಇದ್ರೂ ವಿಚಾರಣೆ ಆಗಲಿ, ಸತ್ಯ ಹೊರಗಡೆ ಬರಲಿ ಎಂದು ಕಾಂಗ್ರೆಸ್ ನಾಯಕರಿಗೆ ಸಚಿವ ಸುಧಾಕರ್ ಟಾಂಗ್ ನೀಡಿದ್ರು.
ಕೊರೊನಾ ಬಗ್ಗೆ ಮುನ್ನೆಚ್ಚರಿಕೆ
ಬೆಂಗಳೂರಿನ ಶಾಲೆಗಳಲ್ಲಿ ಕೋವಿಡ್ ಹೆಚ್ಚಳ ವಿಚಾರವಾಗಿ ಮಾತನಾಡಿದ ಸಚಿವರು, ಒಂದೆರೆಡು ಶಾಲೆಗಳಲ್ಲಿ ಕೋವಿಡ್ ಕಾಣಿಸಿಕೊಂಡಿದೆ. ಆ ಶಾಲಾ ಮಕ್ಕಳಿಗೆ ರಜೆ ಕೊಟ್ಟಿದ್ದಾರೆ. ಅದು ಒಂದೊ ಎರಡೋ ಶಾಲೆ ಅಷ್ಟೇ. ಈಗಾಗಲೇ ಸ್ಪಷ್ಟವಾದ ನಿಯಮಾವಳಿ ರೂಪಿಸಿದ್ದೇವೆ. ವಿದ್ಯಾರ್ಥಿಗಳು ಬರುವಾಗ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಮಾಸ್ಕ್ ಚೆಕ್ ಮಾಡ್ತಿದ್ದೇವೆ. ಶಾಲೆಗಳಲ್ಲಿ ಎಲ್ಲಾ ನಿಯಮ ಪಾಲನೆ ಮಾಡ್ತಿದ್ದಾರೆ ಎಂದರು.
ಅಕ್ಟೋಬರ್‌ನಲ್ಲಿ ಕೊರೋನಾ ಪೀಕ್‌ಗೆ ಹೋಗುತ್ತೆ ಎಂಬ ಐಐಟಿ ಕಾನ್ಪುರದ ವರದಿ ವಿಚಾರವಾಗಿ ಪ್ರತಿಕ್ರಿಯಿಸಿ, ತಾಂತ್ರಿಕ ಸಲಹಾ ಸಮಿತಿ,IIT ಕಾನ್ಪುರದವರು ವರದಿ ನೀಡಿದ್ದಾರೆ. ಜೂನ್ ಮೂರನೇ ವಾರದಿಂದ ಅಕ್ಟೋಬರ್‌ವರೆಗೂ ಕರೋನಾ ಬರಬಹುದು ಎಂದು ವರದಿ ನೀಡಿದ್ದಾರೆ. ಈ ಹಿಂದೆ ಕೂಡ ಇವ್ರೇ ಪ್ರಿಡಿಕ್ಟ್ ಮಾಡಿ ವರದಿ ನೀಡಿದ್ರು. ನಾವು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅದಕ್ಕೆ ತಕ್ಕಂತೆ ಪೂರಕವಾಗಿ ಸಿದ್ದತೆ ಮಾಡಿಕೊಂಡಿದ್ದೇವೆ. ಈಗ ಬರುತ್ತಿರುವ ಕೋವಿಡ್ ಪ್ರಭೇದ ಸೌಮ್ಯ ಲಕ್ಷಣ ಇರೋದ್ರಿಂದ ಜನಸಾಮಾನ್ಯರು ಯಾವುದೇ ಆತಂಕ, ಭಯಪಡುವ ಅವಶ್ಯಕತೆ ಇಲ್ಲ ಎಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ