• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Basavaraj Bommai: ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಆರೋಗ್ಯ ಯೋಜನೆಯ ವಿಸ್ತರಣೆ- ಸಿಎಂ

Basavaraj Bommai: ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಆರೋಗ್ಯ ಯೋಜನೆಯ ವಿಸ್ತರಣೆ- ಸಿಎಂ

ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ

ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆ ಜಾರಿಗೊಳಿಸಬೇಕು ಎನ್ನುವ ಬೇಡಿಕೆ ಬಹಳ ದಿನದಿಂದ ಇದೆ. ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗನೆ ಈ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

  • Share this:

ಬೆಂಗಳೂರು (ಜು.08): ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ (Government Retired Employees Association) ಆಯೋಜಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ನಿವೃತ್ತ ನೌಕರರಿಗೆ ಗುಡ್​ ನ್ಯೂಸ್ ಕೊಟ್ಟಿದ್ದಾರೆ. ಇದೀಗ ಸರ್ಕಾರಿ ನೌಕರರಿಗೆ ಇರುವಂತೆ ನಿವೃತ್ತ ಸರ್ಕಾರಿ ನೌಕರರಿಗೂ ಆರೋಗ್ಯ ಯೋಜನೆಯ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆ ಜಾರಿಗೊಳಿಸಬೇಕು ಎನ್ನುವ ಬೇಡಿಕೆ ಬಹಳ ದಿನದಿಂದ ಇದೆ. ಆರ್ಥಿಕ ಇಲಾಖೆ (Department of Finance) ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗನೆ ಈ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.


ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆ


ಇದೇ ವೇಳೆ ಮಾತಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಿವೃತ್ತಿ ಎನ್ನುವುದು ಸರ್ಕಾರದ ಕಾನೂನಿನ ಅನುಸಾರ ಅಷ್ಟೇ. ವ್ಯಕ್ತಿಗೆ ನಿವೃತ್ತಿ ಎನ್ನುವುದು ಮನಸ್ಥಿತಿ. ಕೆಲವರು ನೌಕರಿಯಲ್ಲಿದ್ದೆ ನಿವೃತ್ತಿಯಾಗುತ್ತಾರೆ. ಇನ್ನು ಕೆಲವು ನಿವೃತ್ತ ನೌಕರರು ಇತರರಿಗೆ ಮಾರ್ಗದರ್ಶನ ಮಾಡುತ್ತಾರೆ. ಈಗಲೂ ಕ್ರಿಯಾಶೀಲರಾಗಿದ್ದಾರೆ. ಮಾನಸಿಕವಾಗಿ ನಿವೃತ್ತರಾಗದವರು ಜೀವನದಲ್ಲಿ ಎಂದೂ ನಿವೃತ್ತರಾಗುವುದಿಲ್ಲ ಎಂದ್ರು.


ನಿವೃತ್ತ ನೌಕರರ ಕೊಡುಗೆ ಬಹಳಷ್ಟಿದೆ


ಆಡಳಿತದ ವಿಚಾರದಲ್ಲಿ ಕರ್ನಾಟಕ ಮುಂದಿದೆ, ಇದಕ್ಕೆ ನಿವೃತ್ತ ನೌಕರರ ಕೊಡುಗೆಯೂ ಬಹಳಷ್ಟಿದೆ. ಆಡಳಿತ ಚಕ್ರ ಸುಗಮವಾಗಿ ಸಾಗಲು ಸರ್ಕಾರಿ ನೌಕರರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದಾಗ ಮಾತ್ರ ಸಾಧ್ಯ. ಇಲ್ಲದಿದ್ದರೆ ಪ್ರಗತಿಯ ಚಕ್ರ ಮುಂದುವರೆಯುವುದಿಲ್ಲ. ನಮ್ಮ ಜವಾಬ್ದಾರಿಗಳನ್ನು ಅರ್ಥ ಮಾಡಿಕೊಂಡು ನಡೆದರೆ ಸುಲಭವಾಗಿ ಆಡಳಿತ ಚಕ್ರ ಮುಂದುವರೆಯುತ್ತದೆ ಎಂದರು.


ಇದನ್ನೂ ಓದಿ: 2nd PUC: ಉತ್ತರ ಪತ್ರಿಕೆ ಪಡೆಯಲು ವಿದ್ಯಾರ್ಥಿಗಳ ಪರದಾಟ; 5 ದಿನಗಳ ಕಾಲ ದಿನಾಂಕ ವಿಸ್ತರಣೆ


ಜನಪರವಾಗಿ ಕೆಲಸ ಮಾಡಬೇಕು


ಆಧುನಿಕ ತಂತ್ರಜ್ಞಾನ, ತಂತ್ರಾಂಶ ಬಳಕೆ, ಇನ್ನಷ್ಟು ಪ್ರಾಮಾಣಿಕವಾಗಿ, ದಕ್ಷತೆಯಿಂದ ಕೆಲಸ ಮಾಡುವ ಅವಶ್ಯಕತೆ ಇದೆ. ಜಾಗತೀಕರಣದ, ಉದಾರೀಕರಣ, ಖಾಸಗೀಕರಣವಾದ ಬಳಿಕ ಅಂತಃಕರಣ ಮರೆತ್ತಿದ್ದೇವೆ. ಹೀಗಿರುವ ಕಾಲದಲ್ಲಿ ಜನಪರವಾಗಿ ಕೆಲಸ ಮಾಡಬೇಕು. ಆಗ ಮಾತ್ರ ಕಲ್ಯಾಣ ರಾಜ್ಯ ಸಾಧ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.


ಶೂ, ಸಾಕ್ಸ್ ವಿತರಿಸಲು ₹ 132 ಕೋಟಿ ಮೊತ್ತದ ಪ್ರಸ್ತಾವನೆ


ಶಾಲಾ ಮಕ್ಕಳಿಗೆ (School Students) ಶೂ ಮತ್ತು ಸಾಕ್ಸ್ ವಿತರಿಸಲು ₹ 132 ಕೋಟಿ ಮೊತ್ತದ ಪ್ರಸ್ತಾವನೆಗೆ (Proposal) ಅನುಮೋದನೆ (Approval) ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು. ಸರ್ಕಾರ ಈಗಾಗಲೇ ಸಮವಸ್ತ್ರ ವಿತರಿಸಲು ಅನುಮೋದನೆ ನೀಡಿದೆ. ಸಮವಸ್ತ್ರ (Uniform) ತಯಾರಾಗಲು ಸ್ವಲ್ಪ ಸಮಯ (Time) ಬೇಕಾಗುತ್ತದೆ. ನಂತರ ವಿತರಣೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ.


ಭಿಕ್ಷೆ ಬೇಡಿರುವ ಹಣ ಎಲ್ಲಿ?

 ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,‘ಈ ಹಿಂದೆ ಕೋವಿಡ್ ಸಮಯದಲ್ಲಿ ಭಿಕ್ಷೆ ಬೇಡಿ ಜನರಿಗೆ ಕೊಡುತ್ತೇವೆ ಎಂದು ಅವರು ಹೇಳಿದ್ದರು‌. ಆ ಹಣ ಎಲ್ಲಿ? ಎಂದಿನಂತೆಯೇ ಇದು ಕೂಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ರು.
ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ , ಬಟ್ಟೆ ಕೊಡುವುದು ಅಗತ್ಯ ಇಲ್ಲ ಅಂತಾ ಸಚಿವ ನಾಗೇಶ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿಕೆಗೆ ಕಾಂಗ್ರೆಸ್ ವಿರೋಧವಿದೆ. ಸಚಿವ ನಾಗೇಶ ಹೇಳಿಕೆ ಸರಿಯಾದುದಲ್ಲ. ಇದು ಅಗೌರವದ ಹೇಳಿಕೆ. ಅವರು ನೀಡಿದ ಹೇಳಿಕೆ ಮಾನವೀಯತೆಗೆ ಮಾಡಿದ ಅವಮಾನ ಎಂದು ಕಿಡಿಕಾರಿದ್ದಾರೆ.

top videos
    First published: