Heatwave: ಬಿಸಿಗಾಳಿಯಿಂದ ಉತ್ತರ ಭಾರತದಲ್ಲಿ ರೆಡ್ ಅಲರ್ಟ್​ ಘೋಷಣೆ; ಕರ್ನಾಟಕದಲ್ಲೂ ಎಚ್ಚರಿಕೆ!

HeatWave: ಇದೇ ಮೊದಲ ಬಾರಿಗೆ ಹವಾಮಾನ ಇಲಾಖೆಯಿಂದ ಬಿಸಿಯಾದ ತಾಪಮಾನದ ಕಾರಣಕ್ಕೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಇದರ ಪರಿಣಾಮ ಕರ್ನಾಟಕದ ಕೆಲವು ಭಾಗಗಳ ಮೇಲೂ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Sushma Chakre | news18-kannada
Updated:May 24, 2020, 10:34 PM IST
Heatwave: ಬಿಸಿಗಾಳಿಯಿಂದ ಉತ್ತರ ಭಾರತದಲ್ಲಿ ರೆಡ್ ಅಲರ್ಟ್​ ಘೋಷಣೆ; ಕರ್ನಾಟಕದಲ್ಲೂ ಎಚ್ಚರಿಕೆ!
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ (ಮೇ 24): ಒಂದೆಡೆ ಒರಿಸ್ಸಾ, ಪಶ್ಚಿಮ ಬಂಗಾಳ, ಅಸ್ಸಾಂ ಮುಂತಾದ ಕೆಲವು ರಾಜ್ಯಗಳಲ್ಲಿ ಅಂಫಾನ್ ಚಂಡಮಾರುತದಿಂದ ಭಾರೀ ಪ್ರವಾಹ ಉಂಟಾಗಿದೆ. ಇನ್ನೊಂದೆಡೆ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ವಿಪರೀತ ತಾಪಮಾನದಿಂದ ಜನರು ಕಂಗಾಲಾಗಿದ್ದಾರೆ. ಉತ್ತರ ಭಾರತದ ಕೆಲವು ಪ್ರದೇಶಗಳಲ್ಲಿ 45 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ರೆಡ್ ಅಲರ್ಟ್​ ಘೋಷಣೆ ಮಾಡಿದೆ.

ಉತ್ತರ ಭಾರತದ ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಢ, ರಾಜಸ್ಥಾನ ರಾಜ್ಯಗಳಲ್ಲಿ ಬಿಸಿ ಗಾಳಿ ಅಧಿಕವಾಗಿದೆ. ಅಲ್ಲದೆ, ಇಲ್ಲಿನ ತಾಪಮಾನ 45 ಡಿಗ್ರಿ ಸೆಲ್ಷಿಯಸ್ ತಲುಪಿದೆ. ಹೀಗಾಗಿ, ಈ 5 ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 2 ದಿನಗಳ ಕಾಲ ಈ ರಾಜ್ಯಗಳಲ್ಲಿ ರೆಡ್ ಅಲರ್ಟ್​ ಘೋಷಣೆ ಮಾಡಿ ಹವಾಮಾನ ಇಲಾಖೆ ಆದೇಶ ಹೊರಡಿಸಿದೆ.

ಇದನ್ನೂ ಓದಿ: Murder News: ಮಹಾರಾಷ್ಟ್ರದ ಆಶ್ರಮದಲ್ಲಿ ಬಳ್ಳಾರಿ ಮೂಲದ ಸಾಧು ಬರ್ಬರ ಹತ್ಯೆ

ಇದರ ಜೊತೆಗೆ, ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಆರೆಂಜ್ ಅಲರ್ಟ್​ ಕೂಡ ಘೋಷಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಇನ್ನೆರಡು ದಿನಗಳ ಕಾಲ ಬಿಸಿ ಗಾಳಿ ಬೀಸಲಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರದ ಮುಖ್ಯಸ್ಥ ಕುಲದೀಪ್ ಶ್ರೀವಾಸ್ತವ ತಿಳಿಸಿದ್ದಾರೆ. ಇದೇ ಮೊದಲ ಬಾರಿಗೆ ಹವಾಮಾನ ಇಲಾಖೆಯಿಂದ ಬಿಸಿಯಾದ ತಾಪಮಾನದ ಕಾರಣಕ್ಕೆ ರೆಡ್ ಅಲರ್ಟ್​ ಘೋಷಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಶನಿವಾರ ರಾಜಸ್ಥಾನದ ಪಿಲಾನಿಯಲ್ಲಿ 46.7 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗಿತ್ತು.

ಈ ಬಿಸಿ ಗಾಳಿಯ ಪರಿಣಾಮ ಛತ್ತೀಸ್‌ಗಢ, ಒರಿಸ್ಸಾ, ಗುಜರಾತ್, ಮಧ್ಯ ಮಹಾರಾಷ್ಟ್ರ ಮತ್ತು ವಿದರ್ಭ, ಕರಾವಳಿ ಆಂಧ್ರಪ್ರದೇಶ, ರಾಯಲ್​ಸೀಮೆ ಮತ್ತು ಕರ್ನಾಟಕದ ಕೆಲವು ಭಾಗಗಳ ಮೇಲೂ ಆಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
First published: May 24, 2020, 9:26 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading