ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ; ಯಗಚಿ ವಾಟೆಹೊಳೆ ಜಲಾಶಯ ಭರ್ತಿ, ನೀರು ‌ಹೊರಕ್ಕೆ

ತುರ್ತು ಸಂದರ್ಭಗಳಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕೊಠಡಿ ದೂರವಾಣಿ ಸಂಖ್ಯೆ: 08172-261111 ಹಾಗೂ ಉಚಿತಾ ಸಹಾಯವಾಣಿ 1077 ಗೆ ಕರೆ ಮಾಡಲು ತಿಳಿಸಿದೆ.

ಜಲಾಶಯ

ಜಲಾಶಯ

  • Share this:
ಹಾಸನ(ಆ.05): ಹಾಸನ ಜಿಲ್ಲೆಯ ಹಲವೆಡೆ ಸತತ ಎರಡು ದಿನದಿಂದ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಹೇಮಾವತಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಯಗಚಿ ಮತ್ತು ವಾಟೆಹೊಳೆ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿವೆ. ಬೇಲೂರು ತಾಲ್ಲೂಕಿನಲ್ಲಿರುವ ವಾಟೆಹೊಳೆ ಜಲಾಶಯ ಗರಿಷ್ಟ 1.5 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಅಣೆಕಟ್ಟೆಯಿಂದ ನೀರನ್ನು ಹೊರಬಿಡಲಾಗಿದೆ.

ಅದೇ ರೀತಿ ಆಲೂರು ತಾಲ್ಲೂನಲ್ಲಿರುವ ಯಗಚಿ ಜಲಾಶಯ ಗರಿಷ್ಟ 3.5 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಣೆಕಟ್ಟೆಯಿಂದ ನೀರು ಹೊರಬಿಡಲಾಗುತ್ತಿದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ. ಹೇಮಾವತಿ ಅಣೆಕಟ್ಟೆ ಗರಿಷ್ಟ 37.103 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಈಗ ಪ್ರಸ್ತುತ ಅಣೆಕಟ್ಟೆಯಲ್ಲಿ 21 ಟಿಎಂಸಿಯಷ್ಟು ನೀರು ಸಂಗ್ರಹವಿದೆ.

ಹೇಮಾವತಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೇಮಾವತಿ ನದಿಯ ಒಳ ಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದ್ದು ರೈತರ ಮೊಗದಲ್ಲಿ ಸಂತಸ ಮೂಡಿಸಿದೆ. ಆದರೆ ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕಲೇಶಪುರ ತಾಲ್ಲೂಕಿನ ಹಲವೆಡೆ ರಸ್ತೆಗೆ ಮರ ಉರುಳಿ ಬಿದ್ದಿದೆ. ಕೆಲವೆಡೆ ಮನೆ ಮೇಲೆ ಮರ ಬಿದ್ದಿದ್ದು ಜಖಂ ಆಗಿದೆ. ಬಿಸಿಲೆ ಸಮೀಪ ಚಲಿಸುತ್ತಿದ್ದ ಕಾರ್ ಮೇಲೆ ಮರ ಬಿದ್ದಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹುಬ್ಬಳ್ಳಿ- ಧಾರವಾಡ ಭಾಗದ ರಸ್ತೆಗಳು ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಪ್ರಗತಿಯ ಕುರಿತು‌ ವಿಡಿಯೋ ಸಂವಾದ

ವಾಟೆಹೊಳೆ ಜಲಾಶಯನ ಪ್ರದೇಶದಲ್ಲಿ ಮಳೆ ಸುರಿಯುತ್ತಿರುವುದರಿಂದ ಒಳ ಹರಿವು ಬರುತ್ತಿದ್ದು, ಪ್ರಸ್ತುತವಾಗಿ ಜಲಾಶಯವು ತುಂಬುವ ಹಂತದಲ್ಲಿದ್ದು ಯಾವುದೇ ಕ್ಷಣದಲ್ಲಿ ಜಲಾಶಯದಿಂದ ಹೊಳೆಗೆ ನೀರನ್ನು ಹೊರಬಿಡುವ ಸಂಭವವಿರುತ್ತದೆ. ಆದ್ದರಿಂದ ಅಣೆಕಟ್ಟೆಯ ಕೆಳಭಾಗದ ಹಾಗೂ ನದಿ ಪಾತ್ರದ ಪ್ರದೇಶದಲ್ಲಿ ಬರುವ ಎಲ್ಲಾ ಹಳ್ಳಿಗಳ ಸಾರ್ವಜನಿಕರು ಮತ್ತು ಜನ ಜಾನುವಾರು ಹಾಗೂ ಆಸ್ತಿ ಪಾಸ್ತಿ ವಗೈರೆಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಿಕೊಳ್ಳುವಂತೆ ಆಲೂರು ವಾಟೆಹೊಳೆ ಯೋಜನಾ ವಿಭಾಗ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ಹವಾಮಾನ ಇಲಾಖೆಯ ವರದಿಯಂತೆ ಹಾಸನ ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳವರೆಗೆ ಭಾರಿ ಮಳೆಯಾಗುವ ಸಂಭವ ಇದ್ದು, ಸಾರ್ವಜನಿಕರು ಅಗತ್ಯ ಎಚ್ಚರಿಕೆ ವಹಿಸಿ ಕೆರೆ-ಕಟ್ಟೆ ಹಾಗೂ ನದಿ ಪಾತ್ರಗಳ ಹತ್ತಿರ ಜನರು ಹೋಗದಿರಲು ಹಾಗೂ ಜಾನುವಾರುಗಳನ್ನು ಬಿಡದಿರಲು ಕೋರಿದೆ. ಜಿಲ್ಲೆಯಲ್ಲಿ ಗುಡ್ಡ ಕುಸಿತ ಪ್ರಕರಣಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಹಾಗೂ ಜಿಲ್ಲೆಯ ನದಿಗಳಲ್ಲಿ ನೀರಿನ ಹರಿಯುವಿಕೆ ಹೆಚ್ಚಾಗುವುದರಿಂದ ನದಿಪಾತ್ರಗಳ ಪ್ರದೇಶದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ತಿಳಿಸಿದೆ. ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಿರುವಂತೆ ಸಹಕರಿಸಲು ಈ ಮೂಲಕ ಕೋರಿದೆ.

ತುರ್ತು ಸಂದರ್ಭಗಳಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕೊಠಡಿ ದೂರವಾಣಿ ಸಂಖ್ಯೆ: 08172-261111 ಹಾಗೂ ಉಚಿತಾ ಸಹಾಯವಾಣಿ 1077 ಗೆ ಕರೆ ಮಾಡಲು ತಿಳಿಸಿದೆ.
Published by:Latha CG
First published: