ಬೆಂಗಳೂರು (ಜು.18): ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು ರಾಜ್ಯದ 5 ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ, ಈ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗದ ಕೆಲ ಭಾಗಗಳಲ್ಲಿ ಹಾಗೂ ಚಿಕ್ಕಮಗಳೂರಿನಲ್ಲಿ ಇಂಧು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಮುಂಜಾಗೃತೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಇನ್ನು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಕೊಡಗು, ಹಾಸನ, ಚಾಮರಾಜನಗರ ಭಾಗದಲ್ಲಿ ಇಂದು ಸಾಮಾನ್ಯ ಮಳೆ ಆಗಲಿದೆ.
ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಆಗುತ್ತಿದೆ. ಅಲ್ಲದೆ, ಕಡಲ ತೀರದಲ್ಲಿ ವೇಗವಾಗಿ ಗಾಳಿ ಬೀಸುತ್ತಿದೆ. ಪರಿಣಾಮ, ಸಮುದ್ರದಲ್ಲಿ ದೊಡ್ಡ ದೊಡ್ಡ ಅಲೆಗಳು ಕಾಣಿಸಿಕೊಳ್ಳುತ್ತಿವೆ. ಇದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಪ್ರವಾಹ ಭೀತಿ:
ಮಲೆನಾಡು ಭಾಗದಲ್ಲಿ ಭಾರೀ ಮಳೆ ಆಗುತ್ತಿರುವದರಿಂದ ನೇತ್ರಾವತಿ, ಅಘನಾಶಿನಿ ನದಿಗಳು ಉಕ್ಕಿ ಹರಿಯುತ್ತಿವೆ. ಹೀಗಾಗಿ ನದಿ ಅಂಚಿನ ಭಾಗದಲ್ಲಿರುವ ಗ್ರಾಮಗಳಿಗೆ ಮುಳುಗುವ ಭೀತಿ ಎದುರಾಗಿದೆ.
ಯಾವ ಯಾವ ಜಿಲ್ಲೆಗಳಲ್ಲಿ ಮಳೆ?:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ