ಮಲೆನಾಡು ಭಾಗದಲ್ಲಿ ಮುಂದುವರೆದ ಮಳೆ ಅಬ್ಬರ; ಅಲ್ಲಲ್ಲಿ ಗುಡ್ಡ ಕುಸಿತ, ಮಲೆನಾಡಿಗರಲ್ಲಿ ಹೆಚ್ಚಿದ ಆತಂಕ

ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿಯಲ್ಲಿ ವಾಸವಾಗಿದ್ದ ಮನೆಯ ಮೇಲೆ ಬೃಹತ್ ಮರ ಬಿದ್ದು ಕುಟುಂಬವೊಂದು ಮನೆ ಕಳೆದುಕೊಳ್ಳುವಂತಾಗಿದೆ. ಇನ್ನು ಮಳೆಯಿಂದ ಜೀವನದಿಗಳಾದ ಹೇಮಾವತಿ, ತುಂಗಾ, ಭದ್ರಾ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದೆ. ಇನ್ನು ಕಳಸ ಸಮೀಪದ ಬಿಳಗೋಡುನಲ್ಲಿ ಗುಡ್ಡ ಕುಸಿತವಾಗಿದೆ. ದುರ್ಗದಹಳ್ಳಿಯಲ್ಲೂ ಗುಡ್ಡ ಕುಸಿತವಾಗಿದ್ದು ಗುಡ್ಡ ಕುಸಿತದಿಂದ ಮಲೆನಾಡಿಗರು ಭಯಗೊಂಡಿದ್ದಾರೆ. 

ವಾಹನ ಹಾಗೂ ಮನೆ ಮೇಲೆ ಮರ ಬಿದ್ದಿರುವ ದೃಶ್ಯ

ವಾಹನ ಹಾಗೂ ಮನೆ ಮೇಲೆ ಮರ ಬಿದ್ದಿರುವ ದೃಶ್ಯ

  • Share this:
ಚಿಕ್ಕಮಗಳೂರು(ಆ.05): ಕಾಫಿನಾಡಿನ ಮಲೆನಾಡಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕಳೆದ ಎರಡು ದಿನದಿಂದ ಸುರಿಯುತ್ತಿರೋ ಭಾರೀ ಮಳೆಗೆ 2019ರ ಮಳೆ ಮತ್ತೆ ಮರುಕಳಿಸುತ್ತಾ ಅನ್ನೋ ಆತಂಕ ಮಲೆನಾಡಿಗರಲ್ಲಿ ಎದುರಾಗಿದೆ. ನಿರಂತರವಾಗಿ ಸುರಿಯುತ್ತಿರೋ ಮಳೆಯಿಂದ ಅಲ್ಲಲ್ಲಿ ಗುಡ್ಡ ಕುಸಿತ್ತಿದ್ದು, ಭಾರೀ ಗಾಳಿ ಮಳೆಗೆ ನೂರಾರು ಮರಗಳು ನೆಲ್ಲಕುರುಳಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.   

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಧಾರಾಕಾರ ಮಳೆಗೆ ಮಲೆನಾಡು ಅಲ್ಲೋಲ-ಕಲ್ಲೋಲವಾಗಿದೆ.  ಮೊನ್ನೆಯಿಂದ ಆರಂಭವಾದ ಮಳೆ ಒಂದೇ ಸಮನೆ ಸುರಿಯುತ್ತಿರೋದ್ರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡು ಮಲೆನಾಡಿಗರು ಕಂಗಾಲಾಗಿದ್ದಾರೆ. ಜಿಲ್ಲೆಯ ಏಳು ತಾಲೂಕಿನಲ್ಲೂ ಧಾರಾಕಾರ ಮಳೆಯಾಗುತ್ತಿದ್ದು ಇಡೀ ಕಾಫಿನಾಡು ಮಳೆನೀರಿನಿಂದ ತೊಯ್ದಿದೆ. ಚಿಕ್ಕಮಗಳೂರು ತಾಲೂಕು ಸೇರಿದಂತೆ ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ, ಶೃಂಗೇರಿಯಲ್ಲಿ ಮಳೆ ಅಬ್ಬರಕ್ಕೆ ಜನಜೀವನ ಹೈರಾಣಾಗಿದೆ. ಮೂಡಿಗೆರೆ ತಾಲೂಕಿನ ಬಣಕಲ್, ಕೊಟ್ಟಿಗೆಹಾರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ವಿದ್ಯುತ್ ಕಂಬಗಳು ಹಾಗೂ ಮರಗಳು ಧರೆಗುರುಳಿವೆ. ಅಲ್ಲದೆ, ಕೊಟ್ಟಿಗೆಹಾರದಲ್ಲಿ ಅಂಗಡಿ ಮಳಿಗೆಗಳ ಮೇಲೆ ಹಾಕಿದ್ದ ಶೀಟ್ಗಳು ಗಾಳಿ ಹಾರಿ ಹೋಗಿದ್ದು ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಮಲೆನಾಡಿಗರು ಮನೆಯಿಂದ ಹೊರಬರೋದಕ್ಕೂ ಹಿಂದೇಟು ಹಾಕುವಂತಹಾ ಸ್ಥಿತಿ ನಿರ್ಮಾಣವಾಗಿದೆ.

ಇನ್ನು ಗೌಡಹಳ್ಳಿ, ಭೈರಾಪುರ, ಗುತ್ತಿ, ದೇವರಮನೆ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಊಹಿಸಲು ಆಗದಂತಹಾ ಮಳೆ ಸುರಿಯುತ್ತಿದೆ. ನಾಟಿ ಮಾಡಿದ ಗದ್ದೆಯ ಮೇಲೆ ಮೂರ್ನಾಲ್ಕು ಅಡಿ ನೀರು ನಿಂತಿದ್ದು, ಅನ್ನದಾತ ರೈತರು ಕಂಗಲಾಗಿದ್ದಾನೆ.
ಕುದುರೆಮುಖ ಕಳಸ ಭಾಗದಲ್ಲಿ ಭಾರೀ ಮಳೆಯಾಗ್ತಿದ್ದು ಭದ್ರಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ. ಇನ್ನು ಕಳಸ ಸಮೀಪದ ಕಳಸ ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು ಕಳಸ ಹೊರನಾಡು ಸಂಪರ್ಕ ಬಂದ್ ಆಗಿದೆ. ಇನ್ನು ಎನ್.ಆರ್.ಪುರದಲ್ಲೂ ಭಾರೀ ಮಳೆಯಿಂದ ಮುಡುಬ ರಸ್ತೆ ಮೇಲೆ ನೀರು ಹರಿದ ಪರಿಣಾಮ ಮುಡುಬ ರಸ್ತೆ ಸಂಪೂರ್ಣ ಬಂದ್ ಆಗಿದೆ. ಎರಡೇ ದಿನಕ್ಕೆ ಮಳೆರಾಯ ಮಲೆನಾಡಿಗರಿಗೆ ಈ ವರ್ಷ ಇನ್ನೇನು ಅವಾಂತರ ಸೃಷ್ಠಿಸ್ತಾನೋ ಎಂಬ ಆತಂಕದಲ್ಲಿ ಬದುಕುವಂತಾಗಿದೆ.

ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ; ಯಗಚಿ ವಾಟೆಹೊಳೆ ಜಲಾಶಯ ಭರ್ತಿ, ನೀರು ‌ಹೊರಕ್ಕೆ

ಇನ್ನು ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿಯಲ್ಲಿ ವಾಸವಾಗಿದ್ದ ಮನೆಯ ಮೇಲೆ ಬೃಹತ್ ಮರ ಬಿದ್ದು ಕುಟುಂಬವೊಂದು ಮನೆ ಕಳೆದುಕೊಳ್ಳುವಂತಾಗಿದೆ. ಇನ್ನು ಮಳೆಯಿಂದ ಜೀವನದಿಗಳಾದ ಹೇಮಾವತಿ, ತುಂಗಾ, ಭದ್ರಾ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದೆ. ಇನ್ನು ಕಳಸ ಸಮೀಪದ ಬಿಳಗೋಡುನಲ್ಲಿ ಗುಡ್ಡ ಕುಸಿತವಾಗಿದೆ. ದುರ್ಗದಹಳ್ಳಿಯಲ್ಲೂ ಗುಡ್ಡ ಕುಸಿತವಾಗಿದ್ದು ಗುಡ್ಡ ಕುಸಿತದಿಂದ ಮಲೆನಾಡಿಗರು ಭಯಗೊಂಡಿದ್ದಾರೆ.

ಬಾಳೆಹೊನ್ನೂರು ವ್ಯಾಪ್ತಿಯಲ್ಲಿ ಬಾರೀ ಮಳೆಯಾಗಿದ್ದು, ಭದ್ರಾನದಿ ದಡದಲ್ಲಿರುವ ಮಾಗುಂಡಿ, ಮಹಲ್ಗೋಡು ಗ್ರಾಮಗಳಿಗೆ ಸೇರಿದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ತಾಲ್ಲೂಕು ಆಡಳಿತ ಕ್ರಮಕೈಗೊಂಡಿದೆ. ನದಿಪ್ರಾತ್ರದ ಜಮೀನುಗಳಿಗೆ ನೀರು ನುಗ್ಗಿದೆ. ಕಳಸ ಮತ್ತು ಬಾಳೆಹೊನ್ನೂರು ಸಂಪರ್ಕ ರಸ್ತೆಗೆ ನೀರು ನುಗ್ಗಿದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದೆ.ಶೃಂಗೇರಿ ತಾಲೂಕು ಕೆರೆಕಟ್ಟೆ, ಕಿಗ್ಗಾ, ನೆಮ್ಮಾರ್, ಸೇರಿದಂತೆ ಪಟ್ಟಣ ಸುತ್ತಮುತ್ತ ಬಾರೀ ಮಳೆಯಾಗುತ್ತಿದ್ದು, ತುಂಗಾನದಿ ತುಂಬಿ ಹರಿಯುತ್ತಿದೆ. ನದಿಪಾತ್ರದ ಅಡಿಕೆ ತೋಟ, ಭತ್ತದ ಗದ್ದೆಗಳಿಗೆ ನೀರು ನುಗ್ಗಿದೆ. ಕೊಪ್ಪ ತಾಲ್ಲೂಕು ವ್ಯಾಪ್ತಿಯಲ್ಲಿ ಬಾರಿ ಮಳೆಯಾಗುತ್ತಿದೆ. ಚಿಕ್ಕಮಗಳೂರು ನಗರ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಮಳೆಯಾಗಿದೆ. ಬಾರಿ ಗಾಳಿಗೆ ಅನೇಕ ಮರಗಳು ಮುರಿದು ಬಿದ್ದಿವೆ. ಕಡೂರು, ತರೀಕೆರೆ ವ್ಯಾಪ್ತಿಯಲ್ಲೂ ಧಾರಾಕಾರ ಮಳೆಯಾಗಿದೆ. ತರೀಕೆರೆ ಎಪಿಎಂಸಿ ಆವರಣದಲ್ಲಿ ಟೀ ಅಂಗಡಿಯ ಮೇಲೆ ಮರ ಬಿದ್ದಿದ್ದು, ಅಂಗಡಿ ಮಾಲೀಕ ಯೋಗೀಶ್ಗೆ ಸೆಣ್ಣಪುಟ್ಟ ಗಾಯಗಳಾಗಿವೆ. ಅಂಗಡಿ ಜಖುಂಗೊಂಡಿದೆ.

ಹೆಬ್ಬಾಳೆ ಸೇತುವೆ ಮುಳುಗಡೆ

ಹೊರನಾಡು -ಕಳಸ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಈ ವರ್ಷ ಮೊದಲ ಬಾರೀ ಮುಳುಗಡೆಯಾಗಿದೆ. ಭದ್ರಾನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಬುಧವಾರ ಮಧ್ಯಾಹ್ನದ ವೇಳೆ ನದಿ ನೀರಿನ ಹರಿವು ಹೆಚ್ಚಳವಾಗಿ ಸೇತುವೆ ಮುಳುಗಡೆಯಾಗಿದೆ. ಕಳಸ ಹೊರನಾಡು ಸಂಪರ್ಕ ಸ್ಥಗಿತಗೊಂಡಿದ್ದು, ವಾಹನ ಸಂಚಾರ ಬಂದ್ ಮಾಡಲಾಗಿದೆ. ಹೊರನಾಡಿಗೆ ಪರ್ಯಾಯ ಮಾರ್ಗದಲ್ಲಿ ಹೋಗುವಂತಾಗಿದೆ.

ಒಟ್ಟಾರೆ, ಎಡಬಿಡದೆ ಸುರಿಯುತ್ತಿರೋ ಮಳೆಯಿಂದ ಬಹುತೇಕ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಇಲ್ಲದಂತಾಗಿದೆ. ಎಡಬಿಡದೆ ಸುರಿಯುತ್ತಿರೋ ಮಳೆಯಿಂದ ಮಲೆನಾಡು ಭಾಗದ ಜನ ಮನೆಯಿಂದ ಹೊರ ಬರೋಕು ಹಿಂದೇಟು ಹಾಕ್ತಿದ್ದಾರೆ.
Published by:Latha CG
First published: