Karnataka Weather Today: ಇಂದು ಗುಡುಗು ಸಹಿತ ಧಾರಾಕಾರ ಮಳೆ ಸಾಧ್ಯತೆ- ಬೆಂಗಳೂರಿನ ಹವಾಮಾನ ಹೀಗಿದೆ

Rainfall; ಕಳೆದ 24 ಗಂಟೆಗಳಲ್ಲಿ, ವಾಯುವ್ಯ, ಪಶ್ಚಿಮ ಮತ್ತು ಮಧ್ಯ ಭಾರತದ ಮೇಲೆ ಕನಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಉತ್ತರ ಕರಾವಳಿ ಆಂಧ್ರ ಪ್ರದೇಶ, ಕರಾವಳಿ ಒಡಿಶಾ, ಗಂಗಾ ಪಶ್ಚಿಮ ಬಂಗಾಳ ಭಾಗಗಳು ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಭಾರೀ ಮಳೆಯಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today ಬೆಂಗಳೂರು(ಅ.16):ನೈರುತ್ಯ ಮುಂಗಾರು(Southwest Monsoon) ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ತೀವ್ರವಾಗಿದ್ದು, ರಾಜ್ಯದ ಕರಾವಳಿ(Coastal Karnataka) ಪ್ರದೇಶಗಳಲ್ಲಿ ಸಕ್ರಿಯವಾಗಿದೆ. ಹಾಗಾಗಿ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು ಹಾಗೂ ಕರಾವಳಿ(Coastal) ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ  ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ ಸಾಧ್ಯತೆ?

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ  ಅಧಿಕ ಮಳೆಯ ನಿರೀಕ್ಷೆ ಇರುವುದರಿಂದ ಎರಡೂ ದಿನ ‘ಯೆಲ್ಲೊ ಅಲರ್ಟ್‌’ ಘೋಷಣೆ ಮಾಡಲಾಗಿದೆ.

ಕರ್ನಾಟಕ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿನ ಕಡಿಮೆ ಒತ್ತಡದ ಪ್ರದೇಶದ ಕಾರಣ, ರಾಜ್ಯದ ಕರಾವಳಿ ಭಾಗಗಳಲ್ಲಿ ಕೂಡ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಸೈಕ್ಲೋನಿಕ್ ಸರ್ಕ್ಯುಲೇಷನ್ ಅರೇಬಿಯನ್ ಸಮುದ್ರದ ಮೇಲೆ ಕರ್ನಾಟಕ ಕರಾವಳಿಯಲ್ಲಿದೆ ಮತ್ತು ಇನ್ನೊಂದು ಪರಿಚಲನೆಯು ಬಂಗಾಳ ಕೊಲ್ಲಿಯಲ್ಲಿದೆ, ಇದರ ಪ್ರಭಾವದ ಕಾರಣ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ನಿರೀಕ್ಷೆಯಿದ್ದು, ಅದು ಅಧಿಕ ಮಳೆಗೆ ಕಾರಣವಾಗಲಿದೆ.

ಇದನ್ನೂ ಓದಿ; ರಾಜ್ಯದಲ್ಲಿ ಅ.17ರವರೆಗೆ ಮಳೆ, ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ..!

ನೈರುತ್ಯ ಮಾನ್ಸೂನ್ ಗೆ(Southwest Monsoon.) ಹೋಲಿಸಿದರೆ ಕರ್ನಾಟಕದಲ್ಲಿ ಈಶಾನ್ಯ ಮಾನ್ಸೂನ್( Northeast Monsoon) ಅವಧಿಯಲ್ಲಿ ಹೆಚ್ಚು ಮಳೆಯಾಗುತ್ತದೆ. ವಾಸ್ತವವಾಗಿ, ಈಶಾನ್ಯ ಮಾನ್ಸೂನ್ ಆರಂಭವಾಗುವ ಮುನ್ನವೇ ಕರ್ನಾಟಕದ(Karnataka) ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದೆ. 

ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆ ಇದ್ದು, ಮುಂದಿನ ಐದು ದಿನಗಳವರೆಗೆ ಮಳೆಯಾಗುವ ಯಾವುದೇ ಸೂಚನೆಗಳಿಲ್ಲ ಎಂದು ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನ ಹವಾಮಾನ ಹೇಗಿರಲಿದೆ?

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ಸಹ ನಗರದ  ವಿವಿಧೆಡೆ ಅಧಿಕ ಮಳೆಯಾಗಿದ್ದು, ಟ್ರಾಫಿಕ್ ಸಮಸ್ಯೆ ಎದುರಾಗಿತ್ತು. ಅಲ್ಲದೇ ಬೆಂಗಳೂರಿನಲ್ಲಿ ಇಂದು ಕೂಡ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಹವಾಮಾನ ಚಟುವಟಿಕೆ ಹೇಗಿತ್ತು?

ಕಳೆದ 24 ಗಂಟೆಗಳಲ್ಲಿ, ವಾಯುವ್ಯ, ಪಶ್ಚಿಮ ಮತ್ತು ಮಧ್ಯ ಭಾರತದ ಮೇಲೆ ಕನಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಉತ್ತರ ಕರಾವಳಿ ಆಂಧ್ರ ಪ್ರದೇಶ, ಕರಾವಳಿ ಒಡಿಶಾ, ಗಂಗಾ ಪಶ್ಚಿಮ ಬಂಗಾಳ ಭಾಗಗಳು ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಭಾರೀ ಮಳೆಯಾಗಿದೆ.

ಒಡಿಶಾದ ಒಳಭಾಗ, ಜಾರ್ಖಂಡ್‌ನ ಪೂರ್ವ ಭಾಗಗಳು, ಕೇರಳ, ಲಕ್ಷದ್ವೀಪ ಮತ್ತು ತಮಿಳುನಾಡುಗಳಲ್ಲಿ ಸಾಧಾರಣ ಮಳೆಯಾಗಿದ್ದು,  ಅಸ್ಸಾಂ, ಮೇಘಾಲಯ ಮತ್ತು ದಕ್ಷಿಣ ಛತ್ತೀಸಗಡದಲ್ಲಿ ಲಘು ಮಳೆಯಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ  ಎಲ್ಲೆಲ್ಲಿ ಮಳೆ  ?

ಮುಂದಿನ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಡಿಶಾದ ಕೆಲವು ಭಾಗಗಳು, ಉತ್ತರ ಆಂಧ್ರ ಪ್ರದೇಶ, ದಕ್ಷಿಣ ಒಳ ಕರ್ನಾಟಕ, ಕೇರಳ, ಗಂಗಾ ಪಶ್ಚಿಮ ಬಂಗಾಳ, ಮರಾಠವಾಡ ಮತ್ತು ತೆಲಂಗಾಣ ಮತ್ತು ಛತ್ತೀಸ್‌ಗಢದ ಪ್ರತ್ಯೇಕ ಪಾಕೆಟ್‌ಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಶಿಥಿಲಾವಸ್ಥೆಯತ್ತ ಸಾಗುತ್ತಿದ್ದ ಸರ್ಕಾರಿ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಹೈ ಟೆಕ್ ಸ್ಪರ್ಶ.

ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ, ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಮಧ್ಯಪ್ರದೇಶ, ತಮಿಳುನಾಡು ಮತ್ತು ಲಕ್ಷದ್ವೀಪದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಹಾಗೂ ಉತ್ತರ ಪ್ರದೇಶ, ಕರಾವಳಿ ಕರ್ನಾಟಕ ಮತ್ತು ರಾಯಲಸೀಮದಲ್ಲಿ  ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
Published by:Sandhya M
First published: