ದೀಪಾವಳಿ ಸಂಭ್ರಮಕ್ಕೆ ವರುಣನ ಅಡ್ಡಿ; ಇಂದಿನಿಂದ 4 ದಿನ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ

ಇಂದಿನಿಂದ ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾದರೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ಸಂಜೆ ಮಳೆಯಾದ್ದರಿಂದ ದೀಪಾವಳಿ ಸಂಭ್ರಮಕ್ಕೆ ಅಡ್ಡಿಯಾಗಿದೆ. ಮನೆ ಮುಂದೆ ರಂಗೋಲಿ ಬಿಡಿಸಿ, ದೀಪ ಹಚ್ಚಿ, ಹಸಿರು ಪಟಾಕಿ ಹೊಡೆಯಲು ಸಿದ್ಧತೆ ಮಾಡಿಕೊಂಡಿದ್ದವರಿಗೆ ವರುಣ ಅಡ್ಡಿಯಾಗಿದ್ದಾನೆ. ಜೊತೆಗೆ ಹಬ್ಬದ ಸಂಭ್ರಮಕ್ಕೆ, ವೀಕೆಂಡ್ ಔಟಿಂಗ್, ಶಾಪಿಂಗ್ ಗೆ ವರುಣರಾಯ ಬ್ರೇಕ್ ಹಾಕಿದ್ದಾನೆ.ದೀಪಾವಳಿ ಸಂಭ್ರಮಕ್ಕೆ ವರುಣನ ಅಡ್ಡಿ; ಇಂದಿನಿಂದ 4 ದಿನ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ.

  ಸಂಜೆ 5 ಗಂಟೆಯಿಂದ ಮಳೆ ಆರಂಭವಾಗಿ ಸತತವಾಗಿ ಒಂದು ಗಂಟೆಯವರೆಗೆ ಸುರಿಯಿತು. ಇದರಿಂದ ವಾಹನ ಸವಾರರಿಗೆ ಹಾಗೂ ಸಂಜೆ ಮನೆಯಿಂದ ಹೊರಗೆ ಹೋಗಿದ್ದವರಿಗೆ ಕಿರಿಕಿರಿ ಉಂಟಾಯಿತು. ಇಳಿ ಸಂಜೆಯ ಜಿಟಿಜಿಟಿ ಮಳೆಯಲ್ಲಿ ಸಿಲುಕಿಕೊಂಡ ದ್ವಿಚಕ್ರ ವಾಹನ ಸವಾರರು, ಪಾದಚಾರಿಗಳು ಕಿರಿಕಿರಿ ಅನುಭವಿಸಿದರು.

  ಇದನ್ನು ಓದಿ: ಕ್ರಿಕೆಟ್ ಬೆಟ್ಟಿಂಗ್ ಆರೋಪ; ಶಾಸಕ ಬಸವರಾಜ ಮತ್ತಿಮೋಡ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

  ಇಂದಿನಿಂದ ನಾಲ್ಕು ದಿನ ಮಳೆ, 

  ಇಂದಿನಿಂದ ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾದರೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

  ಸ್ಪೆಸಿಫಿಕ್ ಮಹಾಸಾಗರದಲ್ಲಿ 'ಲಾ ನಿನಾ' ಏರಿಳಿತದಿಂದ ಚಳಿಯೂ ಹೆಚ್ಚುವ ಸಂಭವವಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನಾ ವಿಭಾಗದ ನಿರ್ದೇಶಕ ಚನ್ನಬಸವ ಅವರು ನ್ಯೂಸ್ 18 ಕನ್ನಡಕ್ಕೆ ತಿಳಿಸಿದ್ದಾರೆ.
  Published by:HR Ramesh
  First published: