Heavy Rain: ಚಿಕ್ಕಮಗಳೂರಿನಲ್ಲಿ ನಿಲ್ಲದ ಮಳೆ; ರಸ್ತೆಯಲ್ಲಿ ಬಿರುಕು, ಮನೆಗಳು ಕುಸಿತ 

ಜಿಲ್ಲಾದ್ಯಂತ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಮೂಡಿಗೆರೆ, ಕೊಪ್ಪ, ಕಳಸ, ಶೃಂಗೇರಿ, ಎನ್.ಆರ್.ಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗಿದ್ದು, ನಿರಂತರ ಮಳೆಯಿಂದಾಗಿ ಮಲೆನಾಡು ಭಾಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಚಿಕ್ಕಮಗಳೂರಲ್ಲಿ ಭಾರೀ ಮಳೆ, ಸೇತುವೆ ಮುಳುಗಡೆ

ಚಿಕ್ಕಮಗಳೂರಲ್ಲಿ ಭಾರೀ ಮಳೆ, ಸೇತುವೆ ಮುಳುಗಡೆ

  • Share this:
ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮುಂಗಾರು ಮಳೆಯ (Monsoon Rain) ಆರ್ಭಟ  ಮುಂದುವರಿದಿದ್ದು, ಭಾರೀ ಮಳೆಯಿಂದಾಗಿ ಮಲೆನಾಡು ಭಾಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು ಭಾಗದ ಹಲವು ಗ್ರಾಮಗಳಲ್ಲಿ (village) ಭಾರೀ ಮಳೆಯಿಂದಾಗಿ ಹಲವು ಮನೆಗಳಿಗೆ ಹಾನಿಯಾಗಿದ್ದರೇ, ಅಲ್ಲಲ್ಲಿ ಭೂಕುಸಿತ (Landslide) ಉಂಟಾಗಿದೆ. ಜಿಲ್ಲೆಯ ಮಲೆನಾಡು ಭಾಗದ ಮೂಡಿಗೆರೆ, ಕೊಪ್ಪ, ಕಳಸ, ಶೃಂಗೇರಿ, ಎನ್.ಆರ್.ಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗಿದ್ದು, ನಿರಂತರ ಮಳೆಯಿಂದಾಗಿ ಮಲೆನಾಡು ಭಾಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಲೆನಾಡು ಭಾಗದಲ್ಲಿ ಹರಿಯುವ ಭದ್ರಾ, ತುಂಗಾ, ಹೇಮಾವತಿ ಸೇರಿದಂತೆ ಸಣ್ಣಪುಟ್ಟ ಹಳ್ಳಕೊಳ್ಳಗಳೂ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕೆಲ ಗ್ರಾಮಗಳಲ್ಲಿ ನದಿ, ಹಳ್ಳಗಳ ನೆರೆ ನೀರು , ಕಾಫಿ, ಅಡಿಕೆ, ಭತ್ತದ ಗದ್ದೆಗಳಿಗೆ ನುಗ್ಗಿ ಅಪಾರ ನಷ್ಟ ಸಂಭವಿಸಿದೆ. ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಹಲವು ಮನೆಗಳಿಗೆ ಹಾನಿಯಾಗಿದ್ದರೇ, ಭೂ ಕುಸಿತದಿಂದಾಗಿ ಹಲವು ಗ್ರಾಮಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದೆ.



ಮನೆ ಮೇಲೆ ಕುಸಿದ ಮಣ್ಣು

ಕಳಸ ತಾಲೂಕಿನ ಹೊರನಾಡು ಗ್ರಾಪಂ ವ್ಯಾಪ್ತಿಯಲ್ಲಿರುವ ಕವನಹಳ್ಳ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ಮಳೆಯಿಂದಾಗಿ ಯಶೋಧ ಎಂಬುವರ ಮನೆಯ ಹಿಂಬದಿಯಲ್ಲಿ ಭೂ ಕುಸಿತ ಸಂಭವಿಸಿದೆ. ಭೂ ಕುಸಿತದಿಂದಾಗಿ ಧರೆಯ ಮಣ್ಣು ಯಶೋಧ ಅವರ ಮನೆಯ ಹಿಂಬದಿಯ ಗೋಡೆ ಮೇಲೆ ಉರುಳಿದ ಪರಿಣಾಮ ಗೋಡೆ ಕುಸಿದು ಮನೆ ಜಖಂಗೊಂಡಿದೆ.

ಇದನ್ನೂ ಓದಿ: Heavy Rain: ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ; ಸಾಕಪ್ಪ ಸಾಕು ನಿಲ್ಲೋ ಮಳೆರಾಯ

ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆ ಭೀತಿ

ಮನಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಕುಟುಂಬದ ಸದಸ್ಯರು ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ. ಮನೆಯಲ್ಲಿದ್ದ ಸಾಮಗ್ರಿಗಳನ್ನು ಸ್ಥಳಾಂತರ ಮಾಡಿದ್ದು, ಈ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಭೂಕುಸಿತ ಹೆಚ್ಚಾಗಿ ಮನೆ ಸಂಪೂರ್ಣವಾಗಿ ಮಣ್ಣುಪಾಲಾಗುವ ಭೀತಿ ಕುಟುಂಬಸ್ಥರದ್ದಾಗಿದೆ.ಕಳಸ ಸುತ್ತಮುತ್ತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಕಳಸ-ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆಯಾಗುವ ಭೀತಿ ಎದುರಾಗಿದೆ.

ಸೇತುವೆ ಮುಳುಗಡೆಗೆ ಅರ್ಧ ಅಡಿ ನೀರು ಬಾಕಿ ಇದ್ದು, ರಾತ್ರಿ ಮಳೆ ಹೆಚ್ಚಾದಲ್ಲಿ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಲ್ಲಲ್ಲಿ ಭಾರೀ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದಾಗಿ ಹೇಮಾವತಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ತಗ್ಗುಪ್ರದೇಶದಲ್ಲಿ ನದಿಯ ನೆರೆ ನೀರು ಭತ್ತ, ಕಾಫಿ, ಅಡಿಕೆ ತೋಟಗಳಿಗೆ ನುಗ್ಗಿ ಬೆಳೆ ಹಾನಿ ಸಂಭವಿಸಿದೆ.

ಕಪ್ಪೆಶಂಕರ ಮಂಟಪ ಮುಳುಗಡೆ

ಉಳಿದಂತೆ ಕೊಪ್ಪ, ಎನ್.ಆರ್.ಪುರ, ಶೃಂಗೇರಿ ತಾಲೂಕು ವ್ಯಾಪ್ತಿಯಲ್ಲೂ  ಉತ್ತಮ ಮಳೆಯಾಗಿದ್ದು. ಶೃಂಗೇರಿ ಪಟ್ಟಣದಲ್ಲಿ ಹರಿಯುವ ತುಂಗಾ ನದಿ ಕೂಡ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಶೃಂಗೇರಿ ದೇವಾಲಯ ಸಮೀಪದ ಕಪ್ಪೆಶಂಕರ ಮಂಟಪ ತುಂಗಾ ನದಿ ನೀರಿನಲ್ಲಿ ಮುಳುಗಡೆಯಾಗಿದ್ದು, ದೇವಾಲಯ ಸಮೀಪದ ಗಾಂಧಿ ಮೈದಾನವೂ ತುಂಗಾ ನದಿಯ ನೆರೆ ನೀರಿನಲ್ಲಿ ಮುಳುಗಡೆಯಾಗುವ ಭೀತಿ ಎದುರಾಗಿದೆ.

ನಿರಂತರ ಮಳೆಯಿಂದಾಗಿ ಚಿಕ್ಕಮಗಳೂರು ನಗರದ ಶಂಕರಪುರ ಬಡಾವಣೆ ಹಾಗೂ ಹೊಸಕೋಟೆ, ಮಾರನಹಳ್ಳಿ ಗ್ರಾಮಗಳಲ್ಲಿ ತಲಾ ಒಂದೊಂದು ಮನೆಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಕಡೂರು, ತರೀಕೆರೆ, ಅಜ್ಜಂಪುರ ತಾಲೂಕು ವ್ಯಾಪ್ತಿಯಲ್ಲೂ  ಸಾಧಾರಣ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಜಿಲ್ಲಾದ್ಯಂತ ಸದ್ಯ ಭತ್ತದ ಗದ್ದೆಗಳಲ್ಲಿ ಕೃಷಿ ಚಟುವಟಿಕೆ, ನಾಟಿ ಕಾರ್ಯ ನಡೆಯುತ್ತಿದ್ದು, ನಿರಂತರ ಮಳೆ ಭತ್ತದ ಗದ್ದೆಗಳ ಕೃಷಿ ಚಟುವಟಿಕೆಗೆ ಅಡ್ಡಿಯುಂಟು ಮಾಡಿದೆ.

ಇದನ್ನೂ ಓದಿ: Kodagu Rains: ವರುಣಾರ್ಭಟ; ಕಾವೇರಿಯ ರುದ್ರ ಪ್ರತಾಪ, ಸಂಪರ್ಕ ಕಡಿತ, ಮನೆ ಕುಸಿತ , ಜನಜೀವನ ಅಸ್ತವ್ಯಸ್ತ

ಇನ್ನು ಮಳೆಯ ಆರ್ಭಟಕ್ಕೆ ಕಳಸ ತಾಲೂಕಿನಲ್ಲಿ ಕೌನಲ ಗ್ರಾಮದಲ್ಲಿ ತಿಂಗಳ ಹಿಂದಷ್ಟೇ ಪೂರ್ಣಗೊಂಡ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಮಳೆಯಿಂದ ಸಿಮೆಂಟ್ ರಸ್ತೆ ಬಿರುಕು ಬಿಟ್ಟಿದ್ದು ಏಳು ಗ್ರಾಮದ ಜನರಲ್ಲಿ ಆತಂಕ ಎದುರಾಗಿದೆ. ಇನ್ನು ಒಂದು ತಿಂಗಳ ಹಿಂದೆ ಪೂರ್ಣಗೊಂಡಿದ್ದ ಸಿಮೆಂಟ್ ರಸ್ತೆಯಲ್ಲಿ ಬಿರುಕು ಬಿಟ್ಟಿದ್ದು, ರಸ್ತೆಯ ಬದಿಯಲ್ಲಿ ನಿರ್ಮಿಸಿದ್ದ  ವಾಲ್ ಕೂಡ ಕುಸಿತವಾಗಿದೆ. ರಸ್ತೆ ಬಿರುಕು ಬಿಟ್ಟ ಹಿನ್ನೆಲೆ ಗ್ರಾಮಸ್ಥರು ಕಾಲ್ನಡಿಯಲ್ಲಿ ತೆರಳುತ್ತಿದ್ದಾರೆ. ಕಳಪೆ ಕಾಮಗಾರಿಯಿಂದಲೇ ಭಾರಿ ಮಳೆಗೆ ರಸ್ತೆ ಬಿರುಕು ಬಿಟ್ಟಿದೆ ಎಂದು ಸ್ಥಳಿಯರು ಆರೋಪಿದ್ದಾರೆ..
Published by:Pavana HS
First published: