Chikkamagaluru: ಮಲೆನಾಡಲ್ಲಿ ವರುಣನ ಆರ್ಭಟ, ಭಾರೀ ಮಳೆಗೆ ಕೊಚ್ಚಿ ಹೋದ ಬಾಲಕಿ

ಚಿಕ್ಕಮಗಳೂರು ಕಾಫಿನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಿಲ್ಲಾದ್ಯಂತ ಭಾನುವಾರ ರಾತ್ರಿಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತ ಗೊಂಡಿದೆ.

ಭಾರೀ ಮಳೆ

ಭಾರೀ ಮಳೆ

  • Share this:
ಚಿಕ್ಕಮಗಳೂರು (ಜು.4): ಚಿಕ್ಕಮಗಳೂರಿನಲ್ಲಿ (Chikkamagaluru) ಮಳೆಯ ಆರ್ಭಟ ಮುಂದುವರೆದಿದ್ದು, ಜಿಲ್ಲಾದ್ಯಂತ ಭಾನುವಾರ ರಾತ್ರಿಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು (Heavy Rain) ಜನಜೀವನ ಅಸ್ತವ್ಯಸ್ತ ಗೊಂಡಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದಮಟ್ಟದಲ್ಲಿ ಹರಿಯು ತ್ತಿದ್ದು, ಕಳಸ (Kalasa) ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ತಾಲ್ಲೂಕು ವ್ಯಾಪ್ತಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಈ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಹರಿಯುವ ಭದ್ರಾ, ತುಂಗಾ ಹಾಗೂ ಹೇಮಾವತಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ.

ಹೆಬ್ಬಾಳೆ ಸೇತುವೆ ನೀರಿನಲ್ಲಿ ಮುಳುಗಡೆ

ಭದ್ರಾ ನದಿಯಲ್ಲಿ ನೀರಿನ ಹರಿವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳಸ ಪಟ್ಟಣ ಹಾಗೂ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ ಸಂಪರ್ಕದ ಹೆಬ್ಬಾಳೆ ಸೇತುವೆ ಭದ್ರಾ ನದಿಯ ನೀರಿನಲ್ಲಿ ಮುಳುಗಡೆಯಾಗಿದೆ. ಸೋಮವಾರ ಮುಂಜಾನೆ ವೇಳೆಯಲ್ಲಿ ಹೆಬ್ಬಾಳೆ ಸೇತುವೆ ಮೇಲೆ 1 ಅಡಿಯಷ್ಟು ನೀರು ಹರಿದಿದ್ದು, ನದಿಯಲ್ಲಿ ತೇಲಿ ಬಂದ ಬೃಹತ್ ಗಾತ್ರದ ಮರವೊಂದು ಸೇತುವೆ ಮಧ್ಯೆ ಸಿಲುಕಿಕೊಂಡಿದ್ದ ಪರಿಣಾಮ ಸೇತುವೆ ಮೇಲೆ ವಾಹನ ಸಂಚಾರ ಸಾಧ್ಯವಾಗದೇ ಸೇತುವೆಯ ಎರಡೂ ಬದಿಗಳಲ್ಲಿ ಖಾಸಗಿ, ಸರ್ಕಾರಿ ಬಸ್ಗಳು ಸರತಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಕಂಡು ಬಂದವು. ಸೇತುವೆ ಮುಳುಗಡೆಯಾದ ದೃಶ್ಯ ನೋಡಲು ಸ್ಥಳೀಯರು ನದಿ ತೀರದಲ್ಲಿ ನೆರದಿದ್ದರು.

ಕಳಸ ಬಾಳೆಹೊನ್ನೂರು ಸಂಪರ್ಕ ಕಡಿತ

ಭದ್ರಾ ನದಿಯಲ್ಲಿ ನೀರು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಕಳಸ-ಬಾಳೆಹೊನ್ನೂರು ಸಂಪರ್ಕದ ರಾಜ್ಯ ಹೆದ್ದಾರಿ ಸಮೀಪಕ್ಕೆ ನದಿ ನೀರು ತಲುಪಿದ್ದು, ಮಳೆ ಆರ್ಭಟ ಮುಂದುವರಿದಲ್ಲಿ ಕಳಸ ಬಾಳೆಹೊನ್ನೂರು ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಭದ್ರಾ ನದಿಯಲ್ಲಿ ನೀರಿನ ಹರಿವು ದಿನದಿಂದ ದಿನಕ್ಕೆ ಹೆಚ್ಚಾಗು ತ್ತಿರುವ ಹಿನ್ನೆಲೆಯಲ್ಲಿ ಪಾತ್ರದ ಗ್ರಾಮಗಳಾದ ಕಗ್ಗನಳ್ಳ, ಬಾಳೆಹೊಳೆ, ಮಾಗುಂಡಿ ಹಾಗೂ ಬಾಳೆಹೊನ್ನೂರು ಪಟ್ಟಣದ ಜನರಲ್ಲಿ ಆತಂಕ ಮನೆ ಮಾಡಿದೆ. ನದಿ ಪಾತ್ರ ದಲ್ಲಿರುವ ಕಾಫಿ, ಅಡಿಕೆ ತೋಟಗಳಿಗೆ ನದಿ ನೀರು ನುಗ್ಗಿ ಜಲಾವೃತಗೊಂಡಿವೆ.

ತುಂಗಾ ನದಿ ಹಾಗೂ ಮೂಡಿಗೆರೆ ತಾಲ್ಲೂಕಿನಲ್ಲಿ ಹರಿಯುವ ಹೇಮಾವತಿ ನದಿ ನೀರಿನ ಹರಿವು ಹೆಚ್ಚಾಗಿದ್ದು, ಅಕ್ಕಪಕ್ಕದ ಅಡಿಕೆ ತೋಟಗಳು, ಭತ್ತದ ಗದ್ದೆಗಳಿಗೆ ನದಿ ನೀರು ನುಗ್ಗುವ ಆತಂಕ ಎದುರಾಗಿದೆ. ಮಲೆನಾಡು ಭಾಗದಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ್ದು, ಮಲೆನಾಡು ಭಾಗದ ಹಲವು ಗ್ರಾಮಗಳಲ್ಲಿ ವಿದ್ಯುತ್ ಕಡಿತಗೊಂಡಿದೆ.

ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಹಾಗೂ ಸೋಮವಾರ ಇಡೀ ದಿನ ಸಾಧಾರಣ ಮಳೆಯಾಗುತ್ತಿದ್ದರೇ, ಕಡೂರು, ತರೀಕೆರೆ, ಅಜ್ಜಂಪುರ ತಾಲ್ಲೂಕುಗಳ ವ್ಯಾಪ್ತಿಯಲ್ಲೂ ಮಳೆಯಾಗಿದ್ದು, ಕೃಷಿ ಚಟುವಟಿಕೆ ಗರಿಗೇದರಿದೆ.
ಮಲೆನಾಡು ಭಾಗದಲ್ಲಿ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳಸ ತಾಲ್ಲೂಕಿನ ಸಂಸೆ ಗ್ರಾಪಂ ವ್ಯಾಪ್ತಿ ಪಾತಿಗುಡ್ಡ ಎಂಬಲ್ಲಿ ಸೆಲ್ವಿ ಎಂಬವರ ಮನೆ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಅವರು ವಾಸಿಸುತ್ತಿದ್ದ ಮನೆ ಭಾಗಶಃ ಜಖಂಗೊಂಡಿದೆ.

ಶೃಂಗೇರಿ-ಚಿಕ್ಕಮಗಳೂರು ಹೆದ್ದಾರಿಯಲ್ಲಿರುವ ಕೊಡಿಗೆ ಮಕ್ಕಿ ಎಂಬಲ್ಲಿ ಭೂಕುಸಿತ ಉಂಟಾಗಿ ಹೆದ್ದಾರಿ ಮೇಲೆ ಮಣ್ಣು ಬಿದ್ದು ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಮಲೆನಾಡು ಭಾಗದಲ್ಲಿ 8ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲ ಕ್ಕುರುಳಿವೆ. ಎಡಬಿಡದೇ ಸುರಿದ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ.

ಭಾರೀ ಮಳೆಗೆ ಕೊಚ್ಚಿ ಹೋದ ಬಾಲಕಿ 

ಕಾಫಿತೋಟದಲ್ಲಿ ಹಳ್ಳದಾಟುವಾಗ ಕಾಲುಜಾರಿ ಬಿದ್ದು 7ವರ್ಷದ ಬಾಲಕಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ತಾಲ್ಲೂಕಿನ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ. ಹೊಸಪೇಟೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 7ವರ್ಷದ ಬಾಲಕಿ ಸುಪ್ರೀತ ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಹಳ್ಳಕ್ಕೆ ನಿರ್ಮಿಸಲಾಗಿದ್ದ ಕಿರುಸೇತುವೆ ದಾಟುವಾಗ ಕಾಲುಜಾರಿ ಹಳ್ಳಕ್ಕೆ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿನೀಡಿ ಬಾಲಕಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಶೃಂಗೇರಿ ತಾಲೂಕಿನಲ್ಲಿ ಭಾರೀ ಮಳೆ 

ಶೃಂಗೇರಿ ತಾಲೂಕಿನಲ್ಲಿ ಮಳೆ ಆರ್ಭಟ ಜೋರಾಗಿದ್ದು ಶೃಂಗೇರಿ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಾಘವೇಂದ್ರ ರಜೆ ಘೋಷಿಸಿ ಆದೇಶ ಮಾಡಿದ್ದಾರೆ ಮಳೆ ಆರ್ಭಟ ಜೋರಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ ತುಂಗಾ ನದಿಯು ಅಪಾಯ ಮಟ್ಟ ಮೀರಿ ತಿದ್ದು ನಮ್ಮತ್ತಿನ ಪ್ರದೇಶದಲ್ಲಿರುವ ಜನರಿಗೆ ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಸೂಚಿಸಿದೆ.

ಶೃಂಗೇರಿ ತಾಲೂಕಿನ ಶಾಲೆಗಳಿಗೆ ನಾಳೆ ರಜೆ 

ಶೃಂಗೇರಿ ತಾಲೂಕಿನಲ್ಲೂ ಮಳೆ ಆರ್ಭಟ ಜೋರಾಗಿದ್ದು ಶೃಂಗೇರಿ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಬಿಇಓ ರಾಘವೇಂದ್ರ ರಜೆ ಘೋಷಿಸಿ ಆದೇಶ ಮಾಡಿದ್ದಾರೆ. ಮಳೆ ಆರ್ಭಟ ಜೋರಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ತುಂಗಾ ನದಿ ಅಪಾಯ ಮಟ್ಟ ಮೀರಿ ಹರಿಯುತಿದ್ದು ನದಿ ಪಾತ್ರ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಜನರಿಗೆ ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಸೂಚಿಸಿದೆ.
Published by:Pavana HS
First published: