ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ; ಮೂಡಿಗೆರೆಯಲ್ಲಿ ಸಿಡಿಲಿಗೆ ಮೂವರು ಮಹಿಳಾ ಕಾರ್ಮಿಕರು ಬಲಿ

ತರೀಕೆರೆಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ಭಾರೀ ಗಾತ್ರದ ಆಲಿಕಲ್ಲುಗಳು ಸುರಿದಿದ್ದರಿಂದ ಪಟ್ಟಣದ ಜನತೆ ತತ್ತರಿಸಿಹೋಗಿದ್ದಾರೆ. ಗಾಳಿ ಮಳೆಯ ಆರ್ಭಟಕ್ಕೆ ಇಲ್ಲಿನ ಜನ ಭಯಗೊಂಡಿದ್ದಾರೆ.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

 • Share this:
  ಚಿಕ್ಕಮಗಳೂರು: ಕಳೆದ ಹತ್ತು ದಿನಗಳಿಂದ ಮಲೆನಾಡಲ್ಲಿ ಮಳೆ ಅಬ್ಬರ ಜೋರಾಗಿದೆ. ಇಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸುರಿದ್ದು, ಸಿಡಿಲಿಗೆ ಮೂವರು ಮಹಿಳಾ ಕಾರ್ಮಿಕರು ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಹಿತ್ಲುಮಕ್ಕಿ ಗ್ರಾಮದಲ್ಲಿ ನಡೆದಿದೆ.

  ಜ್ಯೋತಿ (28), ಮಾದಮ್ಮ(65), ಮಾರಿ (27) ಸಿಡಿಲಿಗೆ ಮೃತಪಟ್ಟ ದುರ್ದೈವಿಗಳು. ಮೃತರು ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಪಾಪರೆಟ್ಟಿ ತಾಲೂಕಿನವರು ಎಂದು ಗುರುತಿಸಲಾಗಿದೆ. ಕೂಲಿ ಕೆಲಸಕ್ಕೆಂದು ಇವರು ಚಿಕ್ಕಮಗಳೂರು ಜಿಲ್ಲೆಗೆ ಬಂದಿದ್ದರು.

  ಕೊರೋನಾ ಭೀತಿಯ ನಡುವೆ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಜಿಲ್ಲೆಯ ಹಲವೆಡೆ ಇಂದು ಸಹ ಧಾರಾಕಾರ ಮಳೆ ಸುರಿದಿದೆ. ಮಳೆಯ ಆರ್ಭಟಕ್ಕೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಪ್ಪ, ಎನ್. ಆರ್.ಪುರ, ಶೃಂಗೇರಿ, ಮೂಡಿಗೆರೆ ತಾಲೂಕುಗಳಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.

  ಇದನ್ನು ಓದಿ: ಸೋಮವಾರದಿಂದ ದ್ವಿಚಕ್ರಕ್ಕೆ ವಿನಾಯ್ತಿ, ಐಟಿ, ಬಿಟಿಗೆ ಶೇ.33 ಅನುಮತಿ, ಮೇ 3ರವರೆಗೆ ಮದ್ಯ ಮಾರಾಟ ಇಲ್ಲ; ಸಿಎಂ ಬಿಎಸ್​ವೈ

  ತರೀಕೆರೆಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ಭಾರೀ ಗಾತ್ರದ ಆಲಿಕಲ್ಲುಗಳು ಸುರಿದಿದ್ದರಿಂದ ಪಟ್ಟಣದ ಜನತೆ ತತ್ತರಿಸಿಹೋಗಿದ್ದಾರೆ. ಗಾಳಿ ಮಳೆಯ ಆರ್ಭಟಕ್ಕೆ ಇಲ್ಲಿನ ಜನ ಭಯಗೊಂಡಿದ್ದಾರೆ.
  First published: