ಪಶ್ಚಿಮ ಘಟ್ಟ ಭಾಗದಲ್ಲಿ ಭಾರೀ ಮಳೆ; ಮಲಪ್ರಭಾ ಅಚ್ಚಕಟ್ಟು ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣ!

ಸವದತ್ತಿ ತಾಲೂಕಿನ ಮುನವಳ್ಳಿ ಬಳಿ ಇರೋ ನವೀಲುತೀರ್ಥ ಜಲಾಶಯಕ್ಕೆ ಸದ್ಯ 22,400 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇನ್ನೂ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಜಲಾಶಯದಿಂದ 19 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡಲಾಗುತ್ತಿದೆ.

ಮmಲಪ್ರಭಾ ನದಿ

ಮmಲಪ್ರಭಾ ನದಿ

  • Share this:
ಬೆಳಗಾವಿ (ಆಗಸ್ಟ್​ 16)- ಕಳೆದ ಕೆಲ ದಿನಗಳಿಂದ ಸ್ವಲ್ಪ ತಗ್ಗಿದ್ದ ವರ್ಷಧಾರೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮತ್ತೆ ಅಬ್ಬರಿಸುತ್ತಿದೆ. ಕಳೆದ ಎರಡು ದಿನಗಳಿಂದ ಖಾನಾಪುರ ಸೇರಿ ಘಟ ಪ್ರದೇಶದಲ್ಲಿ ಭಾರಿ ಮಳೆಯಾಗಿದೆ. ಇದರಿಂದ ಮಲಪ್ರಭಾ ನದಿಗೆ ಒಳ ಹರಿವು ಪ್ರಮಾಣದ ಗಂಟೆಯಿಂದ ಗಂಟೆಗೆ ಏರುತ್ತಿದೆ. ಇದು ಮಲಪ್ರಭಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

ಖಾನಾಪುರ ತಾಲೂಕಿನ ದಟ್ಟಾರಣ್ಯದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆ ಆಗಿದೆ. ಮಳೆಯಿಂದ ಮಲಪ್ರಭ ನದಿಗೆ ಸಾಕಷ್ಟು ನೀರು ಹರಿದು ಬರುತ್ತಿದೆ. ಇದರಿಂದ ಖಾನಾಪುರ ತಾಲೂಕಿನಲ್ಲಿ ಅನೇಕ ಸೇತುವೆಗಳು ಮುಳುಗಡೆಯಾಗಿದ್ದು, ಜನರ ಸಂಚಾರಕ್ಕೆ ಸಮಸ್ಯೆಯಾಗಿದೆ. ತಾಲೂಕಿನಲ್ಲಿ ಇರೋ ಸಣ್ಣಪುಟ್ಟ ಹಳ್ಳಗಳು ಸಹ ನದಿಗಳಂತೆ ಹರಿಯುತ್ತಿವೆ.

ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಇದರಿಂದ ಪಾರಿಶ್ವಾಡ ಹಾಗೂ ಹಿರೇ ಮುನವಳ್ಳಿ ಗ್ರಾಮದ ಬಳಿ  ಇರೋ ಸೇತುವೆ ಮುಳುಗಡೆಯಾಗಿ ಸಂಚಾರಕ್ಕೆ ಅಡೆತಡೆ ಉಂಟಾಗಿದೆ. ಕಣಕುಂಬಿಯಲ್ಲಿ 260 ಮಿ.ಮೀ ಮಳೆಯಾಗಿದ್ದು, ಇನ್ನೂ ಎರಡು ದಿನಗಳು ವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಒಂದು ವೇಳೆ ಇದೇ ರೀತಿ ಮುಂದುವರೆ ವರೆದರೆ ರಾಮದುರ್ಗ ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗೋ ಸೂಚನೆ ಇದೆ.

ಸವದತ್ತಿ ತಾಲೂಕಿನ ಮುನವಳ್ಳಿ ಬಳಿ ಇರೋ ನವೀಲುತೀರ್ಥ ಜಲಾಶಯಕ್ಕೆ ಸದ್ಯ 22,400 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇನ್ನೂ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಜಲಾಶಯದಿಂದ 19 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡಲಾಗುತ್ತಿದೆ. ಪ್ರತಿ ಗಂಟೆಯಿಂದ ಗಂಟೆಗೆ ನೀರಿನ ಮಟ್ಟ ಹೆಚ್ಚಾಗುತ್ತಲೇ ಇದೆ. ಇದು ನದಿ ಪಾತ್ರದ ಜನರ ಆತಂಕಕ್ಕೆ ಕಾರಣವಾಗಿದೆ.

ಮುನವಳ್ಳಿ ಗ್ರಾಮದ ಬಳಿ ಇರೋ ಹಳೇಯ ಸೇತುವೆ ಮುಳುಗಡೆಯಾಗಿದ್ದು, ರಾಮದುರ್ಗ ಹಾಗೂ ಸುರೇಬಾನ ನಡುವಿನ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಈಗಾಗಲೇ ಮಲಪ್ರಭಾ ನದಿಯ ಸುತ್ತಮುತ್ತ ಜಮೀನುಗಳಿಗೆ ನೀರು ನುಗ್ಗಿ ಹಾನಿ ಮಾಡಿದೆ. ಇದೇ ರೀತಿ ಮುಂದುವರೆಗೆದ್ರೆ ಮತ್ತೆ ಪ್ರವಾಯದ  ಭೀತಿ ಇದೆ. ಇನ್ನೂ 25 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಜಲಾಶಯದಿಂದ ಏಕಕಾಲಕ್ಕೆ ಬಿಡುಗಡೆ ಮಾಡಿದ್ರೆ ರಾಮದುರ್ಗ ಪಟ್ಟಣ ಹಾಗೂ ಅನೇಕ ಗ್ರಾಮಗಳಿಗೆ ಸಮಸ್ಯೆ ಉಂಟಾಗಲಿದೆ.

ಇದೀಗ ಜಲಾಶಯ ಸಹ ಭರ್ತಿಯಾಗಿದ್ದು, ಒಳ ಹರಿವು ಬಂದಷ್ಟು ನೀರನ್ನು ಹೊರ ಹರಿವು ಮಾಡೋ ಅನಿವಾರ್ಯತೆ ಸೃಷ್ಟಿಯಾಗಿದೆ. ಇನ್ನು, ಡ್ಯಾಂ ಅಧಿಕಾರಿಗಳು ಮತ್ತಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಪಶ್ಚಿಮ ಘಟ ಪ್ರದೇಶದಲ್ಲಿ ಮಳೆಯ ಬಗ್ಗೆ ಮಾಹಿತಿ ಪಡೆದು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿದ್ರೆ ಪ್ರವಾಹ ಸ್ಥಿತಿ ನಿರ್ಮಾಣ ಆಗೋ ಸಾಧ್ಯತೆ ಕಡಿಮೆ ಇರುತ್ತದೆ. ಈ ಬಗ್ಗೆ ಅಧಿಕಾರಿಗಳ ಗಮನ ಹರಿಸಬೇಕು ಎಂದು ಮಲಪ್ರಭಾ ನದಿ ಅಚ್ಚುಕಟ್ಟ ಪ್ರದೇಶ ಜನರ ಆಗ್ರಹವಾಗಿದೆ.
Published by:Rajesh Duggumane
First published: