ಬಸವಸಾಗರ ಜಲಾಶಯ ಭರ್ತಿ; ಡ್ಯಾಂನಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ

ಜಲಾಶಯದಿಂದ ಹೆಚ್ಚಿನ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಬತ್ತಿ ಹೋಗಿದ್ದ ಜಿಲ್ಲೆಯ ಜೀವನಾಡಿ ಕೃಷ್ಣೆಯ ಒಡಲು ಮೈದುಂಬಿ ಹರಿಯುತ್ತಿದೆ. ಕೃಷ್ಣಾ ನದಿ ತೀರದಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿವೆ.

news18-kannada
Updated:July 18, 2020, 3:00 PM IST
ಬಸವಸಾಗರ ಜಲಾಶಯ ಭರ್ತಿ; ಡ್ಯಾಂನಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ
ಬಸವಸಾಗರ ಡ್ಯಾಂ
  • Share this:
ಯಾದಗಿರಿ (ಜು.18): ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಯಾದಗಿರಿ ಜಿಲ್ಲೆಯ ಬಸವಸಾಗರ ಜಲಾಶಯವು ಭರ್ತಿಯಾಗಿದ್ದು ಈಗ ಜಿಲ್ಲೆಯ ರೈತರಿಗೆ ಬೆಳೆ ಬೆಳೆಯಲು ಅನುಕೂಲವಾಗಿದೆ. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರು ಹರಿಬಿಡಲಾಗುತಿದ್ದು ನದಿ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಸಮೀಪವಿರುವ ಬಸವಸಾಗರ ಜಲಾಶಯಕ್ಕೆ ದಿನೇ ದಿನೇ ನೀರಿನ ಒಳಹರಿವು ಹೆಚ್ಚಳವಾಗುತ್ತಿದೆ ಒಳ ಹರಿವು ಹೆಚ್ಚಳ ಹಿನ್ನೆಲೆ ಜಲಾಶಯವು ಭರ್ತಿಯಾಗಿದೆ. ಬಸವಸಾಗರ ಜಲಾಶಯವು 33.33 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದೆ. ಜುಲೈ 8 ರ ವರಗೆ ಜಲಾಶಯದಲ್ಲಿ 21 ಟಿಎಂಸಿ ನೀರು ಸಂಗ್ರಹವಿತ್ತು ಜುಲೈ 9 ರಿಂದ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದು ಇದೆ 11 ಕ್ಕೆ ಜಲಾಶಯದ ಒಡಲು ಭರ್ತಿಯಾಗಿದ್ದು ಜುಲೈ 12 ರಿಂದ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ.

ಜಲಾಶಯದಲ್ಲಿ ಈಗ 30  ಟಿಎಂಸಿ ನೀರು ಸಂಗ್ರಹವಾದ ಹಿನ್ನೆಲೆ ಜಲಾಶಯದಿಂದ ಇಂದು ಕೂಡ 45970 ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ.ಇಂದು ಜಲಾಶಯಕ್ಕೆ 45 ಸಾವಿರ ಕ್ಯೂಸೆಕ್ ನೀರಿನ  ಒಳಹರಿವಿದೆ. ಜಲಾಶಯದ 30 ಕ್ರೈಸ್ಟ್ ಗೇಟ್ ಗಳಲ್ಲಿ 7 ಗೇಟ್ ಗಳ ಮೂಲಕ 45970 ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡಲಾಗುತ್ತಿದೆ.

ಮೈದುಂಬಿ ಉಕ್ಕಿ ಹರಿಯುತ್ತಿರುವ ಕೃಷ್ಣೆಯ ಒಡಲು...!
ಜಲಾಶಯದಿಂದ ಹೆಚ್ಚಿನ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಬತ್ತಿ ಹೋಗಿದ್ದ ಜಿಲ್ಲೆಯ ಜೀವನಾಡಿ ಕೃಷ್ಣೆಯ ಒಡಲು ಮೈದುಂಬಿ ಹರಿಯುತ್ತಿದೆ. ಕೃಷ್ಣಾ ನದಿ ತೀರದಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿವೆ.

ಕೃಷ್ಣಾ ನದಿಗೆ ಒಳಹರಿವು ನೀರಿನ ಪ್ರಮಾಣ ಹೆಚ್ಚಳವಾಗಿದೆ. ಮತ್ತೆ ಮಹಾರಾಷ್ಟ್ರದಲ್ಲಿ ಹೆಚ್ಚಿನ ಮಳೆಯಾದರೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಕೃಷ್ಣಾ ನದಿ ತೀರದ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಯಾವುದೇ ಕಾರಣಕ್ಕು ನದಿ ತೀರಕ್ಕೆ ತೆರಳಬಾರದೆಂದು ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳು‌ ಜನರಿಗೆ ಎಚ್ಚರಿಕೆ ಸೂಚನೆ ನೀಡಿದ್ದಾರೆ. ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಕೃಷ್ಣಾ ಹಾಗೂ ಭೀಮಾ ನದಿ ಪ್ರವಾಹದಿಂದ ಯಾದಗಿರಿ ಜಿಲ್ಲೆಯ ಜನರು‌ ನಲುಗಿ ಹೋಗಿ ಆಶ್ರಯ ಕೇಂದ್ರದಲ್ಲಿ ಆಶ್ರಯ ಪಡೆದುಕೊಂಡಿದ್ದರು. ಅದೆ ರೀತಿ ಅಪಾರ ಪ್ರಮಾಣದ ಬೆಳೆ ,ಆಸ್ತಿ‌ ಕೂಡ ಹಾನಿಯಾಗಿತ್ತು. ಕಳೆದ ವರ್ಷದ ಪ್ರವಾಹ ಘಟನೆ ಮಾಸುವ ಮುನ್ನವೇ ಮತ್ತೆ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದ್ದು ನದಿ ತೀರದ ಜನರಲ್ಲಿ ಆತಂಕ ಎದುರಾಗಿದೆ.
Published by: Rajesh Duggumane
First published: July 18, 2020, 3:00 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading