Karnataka Weather Today: ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ!

ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿತ್ತು. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆಯ ಪ್ರಾತಿನಿಧಿಕ ಚಿತ್ರ

ಮಳೆಯ ಪ್ರಾತಿನಿಧಿಕ ಚಿತ್ರ

  • Share this:
    Karnataka Monsoon (2021 ಜುಲೈ 06): ರಾಜ್ಯದ ವಿವಿಧೆಡೆ ಮತ್ತು ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಭಾರೀ ಮಳೆಯಾಗಿದೆ. ರಾತ್ರಿ 1 ಗಂಟೆಗೆ ಆರಂಭವಾದ ಮಳೆ ಬೆಳಗ್ಗೆ ವರೆಗೆ ಸುರಿದಿದೆ. ಇನ್ನೂ ಮಲೆನಾಡು ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದಲ್ಲೂ ಉತ್ತಮ ಮಳೆಯಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಮಂಗಳವಾರ ಮತ್ತು ಬುಧವಾರವೂ ಸಹ ರಾಜ್ಯದಲ್ಲಿ ಹೀಗೆ ಮಳೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ವರುಣ ಮಧ್ಯಾಹ್ನದಿಂದಲೇ ಆರ್ಭಟಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯಕ್ಕೆ ಮಾನ್ಸೂನ್ ಮಾರುಗಳು ಪ್ರವೇಶ ಪಡೆದು ಒಂದು ತಿಂಗಳಾಗಿದ್ದರು, ಉತ್ತಮ ಮಳೆಯಾಗಿರಲಿಲ್ಲ. ಆದರೆ, ಕಳೆದ 2 ದಿನಗಳಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿರುವುದು ರೈತರಲ್ಲೂ ಸಂತಸವನ್ನು ಹೆಚ್ಚಿಸಿದೆ.

    ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ನಾಳೆಯವರೆಗೂ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿತ್ತು. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಜುಲೈ 5ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.

    ನಾಲ್ಕೈದು ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿತ್ತು. ಈ ಭಾಗದಲ್ಲಿ ಇಂದಿನಿಂದ ಮಳೆ ಕೊಂಚ ಕಡಿಮೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಇನ್ನು ಮೂರು ದಿನ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಉತ್ತರ ಒಳನಾಡಿನಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ನೈಋತ್ಯ ಮುಂಗಾರು ದುರ್ಬಲವಾದ್ದರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ.

    ಮಲೆನಾಡಿನಲ್ಲೂ ಇಂದು ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 5ರವರೆಗೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಈ ವಾರಾಂತ್ಯದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮಳೆ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲೂ ಇಂದಿನಿಂದ ಸೋಮವಾರದವರೆಗೆ ಮಳೆಯಾಗಲಿದೆ.

    ಕರ್ನಾಟಕ ಮಾತ್ರವಲ್ಲದೆ, ಒಡಿಶಾ, ಭುವನೇಶ್ವರದಲ್ಲಿ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಭುವನೇಶ್ವರದ ಅನೇಕ ಕಡೆ ರಸ್ತೆಗಳು ಬಂದ್ ಆಗಿದ್ದು, ನದಿ ತೀರದ ಗ್ರಾಮಗಳಿಗೂ ನೀರು ನುಗ್ಗಿದೆ. ಇಷ್ಟೇ ಅಲ್ಲದೆ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ರಾಜ್ಯಗಳಲ್ಲೂ ಇಂದು ಮಳೆಯಾಗಲಿದೆ.

    ಇದನ್ನೂ ಓದಿ: ಪತ್ರ ಬರೆದು ಯಡವಟ್ಟು ಮಾಡಿಕೊಂಡರಾ ಬಿಎಸ್​ವೈ? ಕೇಂದ್ರದೊಂದಿಗೆ ತಮಿಳುನಾಡು ಸರ್ಕಾರ ಇಂದು ಮಾತುಕತೆ

    ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇನ್ನೂ ಮುಂಬೈ, ಮೇಘಾಲಯದಲ್ಲಿ ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ರಸ್ತೆಗಳು ಕೆರೆಗಳಂತಾಗಿವೆ. ಮೇಘಾಲಯದಲ್ಲಿ ಮಳೆಗೆ ಸೇತುವೆಗಳೇ ಕೊಚ್ಚಿಕೊಂಡು ಹೋಗಿವೆ.

    ಸೂಕ್ತ ತನಿಖೆಗೆ ಆರ್ ಟಿ ಐ ಕಾರ್ಯಕರ್ತನ ಆಗ್ರಹಹಿಮಾಲಯ ಪರ್ವತಶ್ರೇಣಿ, ಸಿಕ್ಕಿಂ, ಬಿಹಾರ, ಅಸ್ಸಾಂ, ಮೇಘಾಲಯ, ಉತ್ತರಾಖಂಡ, ನಾಗಾಲ್ಯಾಂಡ್, ಅರುಣಾಚಲಪ್ರದೇಶ, ಮಿಜೋರಾಂ, ಪಶ್ಚಿಮ ಬಂಗಾಳ, ತಮಿಳುನಾಡು, ತೆಲಂಗಾಣ, ಪುದುಚೆರಿ, ಉತ್ತರ ಪ್ರದೇಶ, ಗೋವಾ, ಕರಾವಳಿ ಕರ್ನಾಟಕ, ಕೇರಳದಲ್ಲಿ ಇಂದು ಮಳೆಯ ಅಬ್ಬರ ಹೆಚ್ಚಾಗಲಿದೆ.

    ಇದನ್ನೂ ಓದಿ: Gold Price Today: ಸತತವಾಗಿ 5 ದಿನಗಳಿಂದ ಏರುತ್ತಿದೆ ಚಿನ್ನದ ಬೆಲೆ, ಬಂಗಾರ ಇರುವವರೇ ಭಾಗ್ಯವಂತರು !

    ಶನಿವಾರ ಮತ್ತು ಭಾನುವಾರದಂದು ಪಂಜಾಬ್, ಚಂಡೀಗಡ, ಹರಿಯಾಣ, ದೆಹಲಿ ಮತ್ತು ಪಶ್ಚಿಮ ಉತ್ತರ ಪ್ರದೇಶದಾದ್ಯಂತ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಜೊತೆಗೆ ಗಾಳಿಯು ಗಂಟೆಗೆ 40-50 ಕಿ.ಮೀ ವೇಗವಾಗಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಜುಲೈ6 ಮತ್ತು 7ರಂದು ಮತ್ತೆ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಮಂಗಳವಾರ ಮತ್ತು ಬುಧವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ.

    ಭಾರತೀಯ ಹವಾಮಾನ ಇಲಾಖೆಯ ಇತ್ತೀಚಿನ ಮಾಹಿತಿ ಪ್ರಕಾರ, ಚಾಲ್ತಿಯಲ್ಲಿರುವ ಹವಾಮಾನ ಪರಿಸ್ಥಿತಿಗಳು, ದೊಡ್ಡ ಪ್ರಮಾಣದ ವಾತಾವರಣದ ಲಕ್ಷಣಗಳು ಮತ್ತು ಮುನ್ಸೂಚನೆಯ ಗಾಳಿಯ ಮಾದರಿಗಳು ಇವೆಲ್ಲವೂ ರಾಜಸ್ಥಾನ, ಪಶ್ಚಿಮ ಉತ್ತರ ಪ್ರದೇಶ, ಹರಿಯಾಣ, ಚಂಡೀಗಡ, ದೆಹಲಿ ಮತ್ತು ಪಂಜಾಬ್​​ ರಾಜ್ಯಗಳಿಗೆ ಪ್ರತಿಕೂಲವಾಗಲಿವೆ. ಕನಿಷ್ಠ ಐದು ದಿನಗಳವರೆಗೆ ಯಾವುದೇ ಪ್ರಮುಖ ಬದಲಾವಣೆಯನ್ನು ನಿರೀಕ್ಷಿಸಲಾಗುವುದಿಲ್ಲ. ನೈಋತ್ಯ ಮಾನ್ಸೂನ್ ಈ ರಾಜ್ಯಗಳಲ್ಲಿ ತನ್ನ ಪ್ರಭಾವ ತೋರಲಿದೆ.
    Published by:MAshok Kumar
    First published: