News18 India World Cup 2019

ಮಲೆನಾಡು ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ; ಚಾರ್ಮಾಡಿ ಘಾಟ್ ಸಂಚಾರಕ್ಕೆ ತಾತ್ಕಾಲಿಕ ತಡೆ

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೆ ಧಾರಾಕಾರ ಮಳೆಯಾಗುತ್ತಿದೆ. ಪರಿಣಾಮ ಇಲ್ಲಿನ ಕೊಟ್ಟಿಗೆಹಾರ, ಸೋಮನಕಾಡು ಹಾಗೂ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮರಗಳ ಸಾಲಾಗಿ ಧರೆಗೆ ಉರುಳಿದ್ದು ವಾಹನ ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದೆ.

MAshok Kumar | news18
Updated:June 14, 2019, 12:18 PM IST
ಮಲೆನಾಡು ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ; ಚಾರ್ಮಾಡಿ ಘಾಟ್ ಸಂಚಾರಕ್ಕೆ ತಾತ್ಕಾಲಿಕ ತಡೆ
ಮಳೆಯಿಂದಾಗಿ ಅಸ್ತವ್ಯಸ್ಥವಾಗಿರುವ ಚಾರ್ಮಾಡಿ ಘಾಟ್ ರಸ್ತೆ ಸಂಚಾರ.
MAshok Kumar | news18
Updated: June 14, 2019, 12:18 PM IST
ಚಿಕ್ಕಮಗಳೂರು (ಜೂನ್​.14); ಮಾನ್ಸೂನ್ ಮಾರುತಗಳು ಈಗಾಗಲೇ ರಾಜ್ಯವನ್ನು ಪ್ರವೇಶಿಸಿದ್ದು, ರಾಜ್ಯದ ಹಲವೆಡೆ ಮಳೆಯ ಮಾರುತಗಳು ತಂಪನ್ನೆರುಯುತ್ತಿವೆ. ಇನ್ನೂ ಮಲೆನಾಡು ಹಾಗೂ ಚಿಕ್ಕಮಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಪ್ರಸಿದ್ಧ ಚಾರ್ಮಾಡಿ ಘಾಟ್ ರಸ್ತೆ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೆ ಧಾರಾಕಾರ ಮಳೆಯಾಗುತ್ತಿದೆ. ಪರಿಣಾಮ ಇಲ್ಲಿನ ಕೊಟ್ಟಿಗೆಹಾರ, ಸೋಮನಕಾಡು ಹಾಗೂ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮರಗಳ ಸಾಲಾಗಿ ಧರೆಗೆ ಉರುಳಿದ್ದು ವಾಹನ ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದೆ. ಆದರೆ, ರಸ್ತೆ ಮೇಲೆ ಬಿದ್ದಿರುವ ಮರಗಳನ್ನು ಅಲ್ಲಿಂದ ತೆರವುಗೊಳಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗದ ಪರಿಣಾಮ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಮಂಜಿನ ಮಧ್ಯೆ ವಾಹನ ಚಲಾವಣೆ ಮಾಡುವುದು ಸಹ ಕಷ್ಟಕರವಾಗಿದೆ. ಅಲ್ಲದೆ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿದಿದ್ದು ಚಾರ್ಮಾಡಿ ಘಾಟ್​ನಲ್ಲಿ ವಾಹನ ಚಾಲನೆ ಅಪಾಯಕಾರಿ ಎನ್ನಲಾಗುತ್ತಿದೆ. ಹೀಗಾಗಿ ಈ ಭಾಗದಲ್ಲಿ ತಾತ್ಕಾಲಿಕವಾಗಿ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ : Cyclone Vayu: ದೇಶಾದ್ಯಂತ 'ವಾಯು' ಚಂಡಮಾರುತ: ಎರಡು ದಿನಗಳಲ್ಲಿ ಭಾರಿ ಮಳೆ ನಿರೀಕ್ಷೆ
First published:June 14, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...